ಮನರಂಜನೆ

ಶಿವರಾತ್ರಿಗೆ ‘ರಾಕ್ಷಸ’ನ ಅವತಾರದಲ್ಲಿ ಪ್ರಜ್ವಲ್‍ ಆಗಮನ ‌

ಪ್ರಜ್ವಲ್‍ ದೇವರಾಜ್‍ ಅಭಿನಯದಲ್ಲಿ ನಿರ್ದೇಶಕ ಲೋಹಿತ್‍, ‘ಮಾಫಿಯಾ’ ಎಂಬ ಚಿತ್ರವನ್ನು ಮಾಡಿ ಮುಗಿಸಿದ್ದಾರೆ. ಈ ಚಿತ್ರ ಕಳೆದ ವರ್ಷವೇ ಬಿಡುಗಡೆಯಾಗುವ ಸುದ್ದಿಯಾಗಿತ್ತು. ಒಂದೆರಡು ಬಾರಿ ದಿನಾಂಕ ಸಹ ಘೋಷಣೆಯಾಗಿತ್ತು. ಆದರೆ, ಕಾರಣಾಂತರಗಳಿಂದ ಚಿತ್ರ ಬಿಡುಗಡೆಯಾಗಲೇ ಇಲ್ಲ. ಈಗ ಆ ಚಿತ್ರ ಬಿಡುಗಡೆಗೂ ಮೊದಲೇ, ಈ ಜೋಡಿ ಇನ್ನೊಂದು ಹೊಸ ಚಿತ್ರದೊಂದಿಗೆ ವಾಪಸ್ಸಾಗುತ್ತಿದೆ. ಅದು ‘ರಾಕ್ಷಸ’ ಚಿತ್ರದ ಮೂಲಕ.

‘ರಾಕ್ಷಸ’ ಚಿತ್ರವು ಒಂದು ಹಾರರ್‍ ಚಿತ್ರವಾಗಿದ್ದು, ಇದೇ ಮೊದಲ ಬಾರಿಗೆ ಪ್ರಜ್ವಲ್‍ ಈ ಶೈಲಿಯ ಚಿತ್ರದಲ್ಲಿ ನಟಿಸಿದ್ದಾರೆ. ಈ ಚಿತ್ರದಲ್ಲಿ ಭಾವನಾತ್ಮಕ ಕಥೆಯ ಜೊತೆಗೆ ಟೈಮ್‌ ಲೂಪ್‌ ಪರಿಕಲ್ಪನೆಯೂ ಇದೆಯಂತೆ. ಈ ಹಿಂದೆ ‘ಮಮ್ಮಿ’, ‘ದೇವಕಿ’ ಮುಂತಾದ ಚಿತ್ರಗಳನ್ನು ನಿರ್ದೇಶಿಸಿರುವ ಲೋಹಿತ್‍ಗೆ ಇದು ಪ್ರಜ್ವಲ್‍ ಜೊತೆಗೆ ಎರಡನೇ ಚಿತ್ರ.

ಈ ಚಿತ್ರವು ಕಳೆದ ವರ್ಷದ ಕೊನೆಯಲ್ಲೇ ಬಿಡುಗಡೆ ಆಗಲಿದೆ ಎಂಬ ಸುದ್ದಿಯೊಂದು ಕೇಳಿಬಂದಿತ್ತು. ಆದರೆ, ‘UI’ ಮತ್ತು ‘ಮ್ಯಾಕ್ಸ್’ ಚಿತ್ರಗಳು ಬಿಡುಗಡೆಯಾದ ಕಾರಣ, ಚಿತ್ರವು ಈ ವರ್ಷಕ್ಕೆ ಮುಂದೂಲ್ಪಟ್ಟಿತ್ತು. ಈಗ ಚಿತ್ರದ ಬಿಡುಗಡೆಗೆ ಮುಹೂರ್ತ ಸಿಕ್ಕಿದ್ದು, ಶಿವರಾತ್ರಿ ಹಬ್ಬದ ಪ್ರಯುಕ್ತ ಚಿತ್ರವು ಫೆ..26ರಂದು ಚಿತ್ರ ಬಿಡುಗಡೆಯಾಗಲಿದೆ.

ಪ್ರಜ್ವಲ್ ಜೊತೆಗೆ ಈ ಚಿತ್ರದಲ್ಲಿ ಶೋಭರಾಜ್, ವತ್ಸಲಾ ಮೋಹನ್, ‘ಸಿದ್ಲಿಂಗು’ ಶ್ರೀಧರ್, ಆರ್ನ ರಾಥೋಡ್ ಸೇರಿದಂತೆ ಅನೇಕ ಕಲಾವಿದರು ಅಭಿನಯಿಸಿದ್ದಾರೆ. ‘ರಾಕ್ಷಸ’ ಸಿನಿಮಾದ ಶೇ.80ರಷ್ಟು ಚಿತ್ರೀಕರಣ ರಾಮೋಜಿ ಫಿಲ್ಮ್ ಸಿಟಿಯಲ್ಲಿ ನಡೆದಿರುವುದು ವಿಶೇಷ. ಪೊಲೀಸ್ ಸ್ಟೇಷನ್‍ ಸೆಟ್‍ನಲ್ಲೇ ಚಿತ್ರದ ಬಹುತೇಕ ಚಿತ್ರೀಕರಣ ನಡೆದಿದೆ ಎಂದು ಹೇಳಲಾಗುತ್ತಿದೆ. ಇದಲ್ಲದೆ ರಾಮೇಶ್ವರಂ, ಗೋವಾ ಮತ್ತು ಬೆಂಗಳೂರಿನಲ್ಲಿ ಉಳಿದ ಭಾಗದ ಚಿತ್ರೀಕರಣ ನಡೆಸಲಾಗಿದೆಯಂತೆ.

ಶಾನ್ವಿ ಎಂಟರ್‌ಟೈನ್‌ಮೆಂಟ್‌ ನಡಿ ದೀಪು ಬಿ.ಎಸ್ ನಿರ್ಮಿಸಿರುವ ಈ ಚಿತ್ರದ ನಿರ್ಮಾಣದಲ್ಲಿ ನವೀನ್ ಹಾಗೂ ಮಾನಸ ಕೆ ಕೈಜೋಡಿಸಿದ್ದಾರೆ. ಈ ಚಿತ್ರಕ್ಕೆ ಜೇಬಿನ್ ಪಿ ಜೋಕಬ್ ಛಾಯಾಗ್ರಹಣ, ವಿನೋದ್ ಸಾಹಸ ನಿರ್ದೇಶನ ಮತ್ತು ವರುಣ್ ಉನ್ನಿ ಸಂಗೀತ ನಿರ್ದೇಶನವಿದೆ.

 

 

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ‘ಪ್ರತಾಪ’ಕ್ಕೆ ಸವಾಲು ಈ ನೀಲಿ

‘ಪ್ರತಾಪ’ಕ್ಕೆ ಸವಾಲು ಈ ನೀಲಿ ಇದು ನಮ್ಮ ಸೂರು ಆಕಾಶದ ನೀಲಿ ಇದು ನನ್ನವ್ವ ಸುತ್ತಿಕೊಂಡ ಸೀರೆಯ ನೀಲಿ ನನಗೆ…

3 hours ago

ಓದುಗರ ಪತ್ರ: ಟೆಲಿಕಾಂ ಕಂಪೆನಿಗಳ ಹಗಲು ದರೋಡೆ ನಿಯಂತ್ರಿಸಿ

ಪ್ರಸ್ತುತ ಆಂಡ್ರಾಯ್ಡ ಮೊಬೈಲ್‌ನಿಂದಲೇ ದಿನನಿತ್ಯದ ಕೆಲಸಗಳು ಆರಂಭವಾಗಿ ಅವುಗಳಿಂದಲೇ ದಿನ ಮುಕ್ತಾಯ ಅನ್ನುವಷ್ಟರ ಮಟ್ಟಿಗೆ ಅನಿವಾರ್ಯತೆ ನಿರ್ಮಾಣವಾಗಿದೆ. ಮೊಬೈಲ್ ಇಲ್ಲದೆ…

3 hours ago

ಓದುಗರ ಪತ್ರ: ಸರ್ಕಾರಿ ಕಚೇರಿಗಳ ಅನಗತ್ಯ ಬಾಡಿಗೆ ವೆಚ್ಚಗಳನ್ನು ತಪ್ಪಿಸಿ

ಹೆಚ್. ಡಿ. ಕೋಟೆ ತಾಲ್ಲೂಕು ಕೇಂದ್ರ ಸ್ಥಳದಲ್ಲಿ ಕೆಲವು ಸರ್ಕಾರಿ ಇಲಾಖೆಗಳು ಹಾಗೂ ಹಾಸ್ಟೆಲ್‌ಗಳು ಖಾಸಗಿ ಕಟ್ಟಡಗಳಲ್ಲಿ ಕಾರ್ಯನಿರ್ವಣೆ ಮಾಡುತ್ತಿವೆ.…

3 hours ago

ರಂಗದ ಮೇಲೆ ಜಿನುಗಿದ ಜೀವಸೆಲೆ

ಜಿ.ಪಿ.ಬಸವರಾಜು ಯಾಂತ್ರಿಕ ಬದುಕಿನ ಹಲವು ಪ್ರಶ್ನೆಗಳಿಗೆ ಉತ್ತರಗಳನ್ನು ತೋರಿಸುವ ನಾಟಕ ‘ಅಮೃತಬಳ್ಳಿ ಕಷಾಯ’ ಮಾಯಾ ನಗರಿಯಂತೆ ಕಾಣುವ ಮುಂಬೈ ನಗರ…

3 hours ago

ಸಮವಸ್ತ್ರದ ಆತ್ಮಸಾಕ್ಷಿ ಮತ್ತು ಮೂರು ಪ್ರಜ್ಞೆಗಳು

ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು ಕರ್ನಾಟಕ ಪೊಲೀಸ್‌ ಅಕಾಡೆಮಿ ಮೈಸೂರು  ಸದಾ ಜಾಗೃತವಾಗಿರುವ ಸಮಯಪಾಲನೆಯ ವಿವೇಚನೆ ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು…

3 hours ago

ದಸರಾ ಕಾರ್ಯಕ್ರಮಕ್ಕೆ ಸವಾಲಾದ ಬಸ್ ಸೇವೆ

ಕೆ.ಬಿ.ರಮೇಶನಾಯಕ ಉತ್ತನಹಳ್ಳಿ ಗ್ರಾಮದ ಬಳಿ ಯುವ ದಸರಾ, ಸಾತಗಳ್ಳಿ ವಿಟಿಯು ಸಮೀಪ ಕಂಬಳ ಕ್ರೀಡೆ ಆಯೋಜನೆ; ವೀಕ್ಷಕರ ಬೇಡಿಕೆಗೆ ತಕ್ಕಂತೆ…

3 hours ago