ಕೆಲವು ವರ್ಷಗಳ ಹಿಂದೆ ಹಿರಿಯ ನಟ ದೇವರಾಜ್, ಡೈನಾಮಿಕ್ ವಿಷನ್ಸ್ ಎಂಬ ಸಂಸ್ಥೆಯನ್ನು ಹುಟ್ಟುಹಾಕಿ ‘ನೀನಾದೆ ನಾ’ ಎಂಬ ಚಿತ್ರವನ್ನು ನಿರ್ಮಿಸಿದ್ದರು. ಈ ಚಿತ್ರದಲ್ಲಿ ಅವರ ಮಗ ಪ್ರಜ್ವಲ್ ನಾಯಕನಾಗಿ ಕಾಣಿಸಿಕೊಂಡಿದ್ದರು. ಇದೀಗ ಪ್ರಜ್ವಲ್ ಸಹ ನಿರ್ಮಾಣದಲ್ಲಿ ತೊಡಗಿಸಿಕೊಳ್ಳುವುದಕ್ಕೆ ಮುಂದಾಗಿದ್ದಾರೆ.
ಪ್ರಜ್ವಲ್ ಸಹೋದರ ಪ್ರಣಾಮ್ ಅಭಿನಯದ ಮೊದಲ ಚಿತ್ರ ‘ಸನ್ ಆಫ್ ಮುತ್ತಣ್ಣ’ ಇದೇ ಶುಕ್ರವಾರ (ಸೆ.12) ಬಿಡುಗಡೆಯಾಗುತ್ತಿದೆ. ಈ ಚಿತ್ರವನ್ನು ಪುರಾತನ ಫಿಲಂಸ್ ನಿರ್ಮಾಣ ಮಾಡುತ್ತಿದೆ. ಕನ್ನಡ ಪ್ರೇಕ್ಷಕರಿಗೆ ಸದಭಿರುಚಿಯ ಸಿನಿಮಾಗಳ ಮೂಲಕ ಉತ್ತಮ ಮನರಂಜನೆ ನೀಡುವ ಉದ್ದೇಶದಿಂದ ಪ್ರಾರಂಭವಾದ ಸಂಸ್ಥೆ ಇದೀಗ ಪ್ರಜ್ವಲ್ ದೇವರಾಜ್ ಜೊತೆಗೆ ಕೈಜೋಡಿಸಿದೆ.
ಪುರಾತನ ಫಿಲಂಸ್ ಮುಂದಿನ ದಿನಗಳಲ್ಲಿ ನಟ ಪ್ರಜ್ವಲ್ ಜೊತೆಗೆ ಸೇರಿ ನಿರ್ಮಾಣ ಮಾಡಲು ಮುಂದಾಗಿದೆ. ಪುರಾತನ ಫಿಲಂಸ್ ಹಾಗೂ ಪ್ರಜ್ವಲ್ ದೇವರಾಜ್ ಸೇರಿ P2 ಪ್ರೊಡಕ್ಷನ್ಸ್ ಎಂಬ ಹೊಸ ನಿರ್ಮಾಣ ಸಂಸ್ಥೆಯನ್ನು ಹುಟ್ಟುಹಾಕಿದ್ದು, ಇದರ ಮೂಲಕ ಪ್ರತಿಭಾವಂತ ಕಲಾವಿದರು, ತಂತ್ರಜ್ಞರು ಮತ್ತು ಒಳ್ಳೆಯ ಕಥೆಗಳನ್ನು ಕನ್ನಡ ಚಿತ್ರರಂಗಕ್ಕೆ ಪರಿಚಯಿಸಲಿದೆ.
ಈ ಸಂಸ್ಥೆಯ ಮೊದಲ ಚಿತ್ರವು ಸದ್ಯದಲ್ಲೇ ಪ್ರಾರಂಭವಾಗಲಿದೆ. ಈ ಚಿತ್ರದಲ್ಲಿ ಪ್ರಣಾಮ್ ನಾಯಕನಾಗಿ ನಟಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ‘ಸನ್ ಆಫ್ ಮುತ್ತಣ್ಣ’ ಚಿತ್ರೀಕರಣ ಮುಗಿಯುತ್ತಿದ್ದಂತೆ, ಆ ತಂಡದ ಜೊತೆಗೆ ಇನ್ನೊಂದು ಚಿತ್ರ ಮಾಡುವುದಾಗಿ ಪುರಾತನ ಫಿಲಂಸ್ ಘೋಷಿಸಿತ್ತು. ಅದರಂತೆ ಈ ಚಿತ್ರದಲ್ಲೂ ಪ್ರಣಾಮ್ ನಾಯಕನಾಗಿ ನಟಿಸಲಿದ್ದು, ಶ್ರೀಕಾಂತ್ ಹುಣಸೂರು ನಿರ್ದೇಶಿಸುವ ಸಾಧ್ಯತೆ ಇದೆ. ಸದ್ಯದಲ್ಲೇ ಪಿ2 ಪ್ರೊಡಕ್ಷನ್ಸ್ ಸಂಸ್ಥೆಯ ಮೊದಲ ಚಿತ್ರದ ಬಗ್ಗೆ ಅಧಿಕೃತ ಘೋಷಣೆ ಹೊರಬೀಳುವ ಸಾಧ್ಯತೆ ಇದೆ.
ಮೈಸೂರು: 9 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ ಕಾಮುಕನನ್ನು ಗ್ರಾಮಸ್ಥರು ಹಿಡಿದು ಥಳಿಸಿರುವ ಘಟನೆ ನಡೆದಿದೆ. ಮೈಸೂರು ಜಿಲ್ಲೆಯ…
ಕೇರಳದ ಕೋಯಿಕ್ಕೋಡಿನಲ್ಲಿ ಸುದ್ದಿಸಂಸ್ಥೆಯೊಂದಕ್ಕೆ ಸಂದರ್ಶನ ನೀಡಿರುವ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯ (ಎಎಸ್‌ಐ) ಮಾಜಿ ಪ್ರಾದೇಶಿಕ ನಿರ್ದೇಶಕರಾದ ಕೆ.ಕೆ. ಮಹಮ್ಮದ್…
ಕಂದಾಯ ಇಲಾಖೆ ಡಿಜಿಟಲ್ ಇ-ಸ್ಟ್ಯಾಂಪ್ ವ್ಯವಸ್ಥೆ ಜಾರಿಗೆ ದಿಟ್ಟ ಹೆಜ್ಜೆ ಇಟ್ಟಿದೆ. ಇದು ನಾಗರಿಕ ಸ್ನೇಹಿಯೂ ಆಗಿದೆ. ಇಂದಿಗೂ ತಾಲ್ಲೂಕು…
ರಾಜ್ಯದಲ್ಲಿ ಇನ್ನು ಮುಂದೆ, ಜಾತಿ, ಧರ್ಮ ಭಾಷೆ, ಧಾರ್ಮಿಕ ಮತ್ತು ಜನಾಂಗೀಯ ನಿಂದನೆ, ಲೈಂಗಿಕ ದೃಷ್ಟಿಕೋನ ಮತ್ತು ಜನ್ಮ ಸ್ಥಳದ…
ಮಲ್ಕುಂಡಿ ಮಹದೇವಸ್ವಾಮಿ ವಿಕಲ್ಪಗಳ ಅಲೆಯ ಮೇಲೆ ಸದಾ ತೇಲಿ ಬರುವ ಸಂಕಲ್ಪ ಬಾಬಾ ಸಾಹೇಬರ ಪಾರ್ಥಿವ ಶರೀರ ಪ್ರಕೃತಿಯಲ್ಲಿ ಲೀನವಾಗುವ…
ಚಾಮರಾಜನಗರ: ಚಾ.ನಗರ-ನಂಜನಗೂಡು ಹೆದ್ದಾರಿಯಲ್ಲಿರುವ ಪಣ್ಯದಹುಂಡಿ ಬಳಿ ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ ಸ್ವಾಧಿನಪಡಿಸಿಕೊಂಡಿರುವ ಭೂಮಿಯ ದರ ನಿಗದಿ ಕಗ್ಗಂಟಿನ ವಿಚಾರ ಅಂತಿಮ…