Mysore
34
clear sky

Social Media

ಮಂಗಳವಾರ, 07 ಏಪ್ರಿಲ 2026
Light
Dark

ಪ್ರಕಾಶ್‌ ರಾಜ್‌ ಬಿಜೆಪಿ ಸೇರ್ಪಡೆಯಾಗ್ತಾರೆ? ಹಿಗೊಂದು ಪೋಸ್ಟ್!

ಬೆಂಗಳೂರು: ಖ್ಯಾತ ನಟ ಪ್ರಕಾಶ್‌ ರಾಜ್‌ ಬಹುಭಾಷೆಯ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಜೊತೆಗೆ ರಾಜಕೀಯದಲ್ಲೂ ಕೂಡ ಆಸಕ್ತಿ ಹೊಂದಿದ್ದಾರೆ. ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವನ್ನು ಅವರು ಅನೇಕ ಸಂದರ್ಭಗಳಲ್ಲಿ ಟೀಕಿಸಿದ್ದಾರೆ. ಜೊತೆಗೆ ಕೇಂದ್ರ ಸರ್ಕಾರದ ಜನವಿರೋಧಿ ಕಾಯ್ದೆಗಳ ಬಗ್ಗೆ ವ್ಯಾಪಕವಾಗಿ ಖಂಡಿಸುತ್ತಾ ಬಂದಿದ್ದಾರೆ.

ಈಗ ಅವರು ಬಿಜೆಪಿ ಪಕ್ಷಕ್ಕೆ ಸೇರುತ್ತಾರೆ ಎಂದು ಗಾಸಿಪ್‌ ಹಬ್ಬಿದೆ. ಸೋಶಿಯಲ್‌ ಮೀಡಿಯಾದಲ್ಲಿ ಹರಿದಾಡಿದ ಈ ಗಾಳಿ ಸುದ್ದಿಗೆ ಪ್ರಕಾಶ್‌ ರಾಜ್‌ ತಮ್ಮದೇ ರೀತಿಯಲ್ಲಿ ಪ್ರತಿಕ್ರಿಯಿಸಿದ್ದಾರೆ.

ʻಖ್ಯಾತ ನಟ ಪ್ರಕಾಶ್​ ರಾಜ್​ ಅವರು ಇಂದು(ಏಪ್ರಿಲ್‌ 4) ಮಧ್ಯಾಹ್ನ 3 ಗಂಟೆಗೆ ಭಾರತೀಯ ಜನತಾ ಪಕ್ಷಕ್ಕೆ ಸೇರುತ್ತಾರೆ’ ಎಂದು ಎಕ್ಸ್​ (ಟ್ವಿಟರ್​) ಬಳಕೆದಾರರೊಬ್ಬರು ಪೋಸ್ಟ್​ ಮಾಡಿದ್ದಾರೆ. ಅದಕ್ಕೆ ಪ್ರಕಾಶ್​ ರಾಜ್​ ಪ್ರತಿಕ್ರಿಯೆ ನೀಡಿದ್ದಾರೆ. ‘ಅವರು ಪ್ರಯತ್ನಿಸಿದ್ದಾರೆ ಅಂತ ನಾನು ಭಾವಿಸಿದ್ದೇನೆ. ನನ್ನನ್ನು ಕೊಂಡುಕೊಳ್ಳುವಷ್ಟು ಅವರು ಸೈದ್ಧಾಂತಿಕವಾಗಿ ಶ್ರೀಮಂತವಾಗಿಲ್ಲ ಎಂಬುದು ಅವರಿಗೆ ಅರ್ಥ ಆಗಿರಬೇಕು. ನಿಮಗೆ ಏನು ಅನಿಸುತ್ತೆ ಸ್ನೇಹಿತರೇ. ʻಜಸ್ಟ್​ ಆಸ್ಕಿಂಗ್​’ ಎಂದು ಪ್ರಕಾಶ್​ ರಾಜ್​ ಟ್ವೀಟ್​ ಮಾಡಿದ್ದಾರೆ.

ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ನಡೆಯನ್ನು ಕಳೆದ 10 ವರ್ಷಗಳಿಂದಲೂ ಪ್ರಕಾಶ್​ ರಾಜ್​ ಅವರು ಕಟುವಾಗಿ ಟೀಕಿಸುತ್ತಲೇ ಬಂದಿದ್ದಾರೆ. ಲೋಕಸಭಾ ಚುನಾವಣೆ ಹತ್ತಿರ ಆಗುತ್ತಿರುವ ಈ ಸಂದರ್ಭದಲ್ಲೂ ಕೂಡ ಅವರು ಸರಣಿ ಪೋಸ್ಟ್​ ಮೂಲಕ ಕೇಂದ್ರ ಸರ್ಕಾರವನ್ನು ಪ್ರಶ್ನಿಸುತ್ತಿದ್ದಾರೆ. ಕೇಂದ್ರದಿಂದ ಕರ್ನಾಟಕಕ್ಕೆ ಸೂಕ್ತ ಅನುದಾನ ಸಿಕ್ಕಿಲ್ಲ ಎಂಬುದನ್ನು ಕೂಡ ಅವರು ಖಂಡಿಸಿದ್ದಾರೆ.

Tags:
error: Content is protected !!