ಬೆಂಗಳೂರು: ಖ್ಯಾತ ನಟ ಪ್ರಕಾಶ್ ರಾಜ್ ಬಹುಭಾಷೆಯ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಜೊತೆಗೆ ರಾಜಕೀಯದಲ್ಲೂ ಕೂಡ ಆಸಕ್ತಿ ಹೊಂದಿದ್ದಾರೆ. ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವನ್ನು ಅವರು ಅನೇಕ ಸಂದರ್ಭಗಳಲ್ಲಿ ಟೀಕಿಸಿದ್ದಾರೆ. ಜೊತೆಗೆ ಕೇಂದ್ರ ಸರ್ಕಾರದ ಜನವಿರೋಧಿ ಕಾಯ್ದೆಗಳ ಬಗ್ಗೆ ವ್ಯಾಪಕವಾಗಿ ಖಂಡಿಸುತ್ತಾ ಬಂದಿದ್ದಾರೆ.
ಈಗ ಅವರು ಬಿಜೆಪಿ ಪಕ್ಷಕ್ಕೆ ಸೇರುತ್ತಾರೆ ಎಂದು ಗಾಸಿಪ್ ಹಬ್ಬಿದೆ. ಸೋಶಿಯಲ್ ಮೀಡಿಯಾದಲ್ಲಿ ಹರಿದಾಡಿದ ಈ ಗಾಳಿ ಸುದ್ದಿಗೆ ಪ್ರಕಾಶ್ ರಾಜ್ ತಮ್ಮದೇ ರೀತಿಯಲ್ಲಿ ಪ್ರತಿಕ್ರಿಯಿಸಿದ್ದಾರೆ.
ʻಖ್ಯಾತ ನಟ ಪ್ರಕಾಶ್ ರಾಜ್ ಅವರು ಇಂದು(ಏಪ್ರಿಲ್ 4) ಮಧ್ಯಾಹ್ನ 3 ಗಂಟೆಗೆ ಭಾರತೀಯ ಜನತಾ ಪಕ್ಷಕ್ಕೆ ಸೇರುತ್ತಾರೆ’ ಎಂದು ಎಕ್ಸ್ (ಟ್ವಿಟರ್) ಬಳಕೆದಾರರೊಬ್ಬರು ಪೋಸ್ಟ್ ಮಾಡಿದ್ದಾರೆ. ಅದಕ್ಕೆ ಪ್ರಕಾಶ್ ರಾಜ್ ಪ್ರತಿಕ್ರಿಯೆ ನೀಡಿದ್ದಾರೆ. ‘ಅವರು ಪ್ರಯತ್ನಿಸಿದ್ದಾರೆ ಅಂತ ನಾನು ಭಾವಿಸಿದ್ದೇನೆ. ನನ್ನನ್ನು ಕೊಂಡುಕೊಳ್ಳುವಷ್ಟು ಅವರು ಸೈದ್ಧಾಂತಿಕವಾಗಿ ಶ್ರೀಮಂತವಾಗಿಲ್ಲ ಎಂಬುದು ಅವರಿಗೆ ಅರ್ಥ ಆಗಿರಬೇಕು. ನಿಮಗೆ ಏನು ಅನಿಸುತ್ತೆ ಸ್ನೇಹಿತರೇ. ʻಜಸ್ಟ್ ಆಸ್ಕಿಂಗ್’ ಎಂದು ಪ್ರಕಾಶ್ ರಾಜ್ ಟ್ವೀಟ್ ಮಾಡಿದ್ದಾರೆ.
ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ನಡೆಯನ್ನು ಕಳೆದ 10 ವರ್ಷಗಳಿಂದಲೂ ಪ್ರಕಾಶ್ ರಾಜ್ ಅವರು ಕಟುವಾಗಿ ಟೀಕಿಸುತ್ತಲೇ ಬಂದಿದ್ದಾರೆ. ಲೋಕಸಭಾ ಚುನಾವಣೆ ಹತ್ತಿರ ಆಗುತ್ತಿರುವ ಈ ಸಂದರ್ಭದಲ್ಲೂ ಕೂಡ ಅವರು ಸರಣಿ ಪೋಸ್ಟ್ ಮೂಲಕ ಕೇಂದ್ರ ಸರ್ಕಾರವನ್ನು ಪ್ರಶ್ನಿಸುತ್ತಿದ್ದಾರೆ. ಕೇಂದ್ರದಿಂದ ಕರ್ನಾಟಕಕ್ಕೆ ಸೂಕ್ತ ಅನುದಾನ ಸಿಕ್ಕಿಲ್ಲ ಎಂಬುದನ್ನು ಕೂಡ ಅವರು ಖಂಡಿಸಿದ್ದಾರೆ.
ಕಾಡಾನೆಗಳ ಹಾವಳಿಯಿಂದಾಗಿ ಕಾಡಂಚಿನ ಜನರಿಗೆ ತೊಂದರೆಯಾಗುತ್ತಿದೆ. ಆದ್ದರಿಂದ ಆನೆಗಳನ್ನು ಕೊಲ್ಲಲು ಅನುಮತಿ ನೀಡಬೇಕು ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ…
ರಾಜ್ಯಸಭೆಯ ಕಲಾಪದ ವೇಳೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಮಾತನಾಡುವ ಭರದಲ್ಲಿ ಕೆಲವರು ಅಂಬೇಡ್ಕರ್ ಎನ್ನುವುದನ್ನು ಈಗ ಫ್ಯಾಷನ್…
ದಾ.ರಾ. ಮಹೇಶ್ ವೀರನಹೊಸಹಳ್ಳಿ: ತಾಲ್ಲೂಕಿನ ಬನ್ನಿಕುಪ್ಪೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿತ್ಯ ಅವರೆಕಾಯಿ ಮಾರಾಟದಿಂದಾಗಿ ಟ್ರಾಫಿಕ್ ಜಾಮ್ ಆಗುತ್ತಿದ್ದು, ವಾಹನಗಳ ಸಂಚಾರಕ್ಕೆ…
ಮಂಡ್ಯ: ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20,21 ಮತ್ತು 22ರಂದು ಮೂರು ದಿನಗಳ ಕಾಲ ಜರುಗಲಿರುವ ಕನ್ನಡ ನುಡಿ ಜಾತ್ರೆ…
ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…
ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…