ಮಲಯಾಳಂನ ಖ್ಯಾತ ನಟ ಟೊವಿನೋ ಥಾಮಸ್, “ಎಆರ್‌ಎಂ” ಸಿನಿಮಾದ ಟ್ರೈಲರನ್ನು ಕೆಜಿಎಫ್ ಚಿತ್ರದ ನಿರ್ದೇಶಕ ಪ್ರಶಾಂತ್ ನೀಲ್ ಹಾಗೂ ಹೊಂಬಾಳೆ ಫಿಲಂಸ್ ನ ವಿಜಯ್ ಕಿರಗಂದೂರು, ಚೆಲುವೇಗೌಡ ಅವರಿಗೆ ಪ್ರದರ್ಶಿಸಿದರು.
ಹೊಂಬಾಳೆ ಫಿಲಂಸ್ ಕಚೇರಿಯಲ್ಲಿ ಟ್ರೈಲರ್ ವೀಕ್ಷಣೆ ಮಾಡಿದ ಪ್ರಶಾಂತ್ ನೀಲ್ ಅವರು ಟ್ರೈಲರ್ ನೋಡಿ ಮೆಚ್ಚುಗೆ ವ್ಯಕ್ತಪಡಿಸಿದರು. ಪ್ರಶಾಂತ್ ನೀಲ್ ಚಿತ್ರತಂಡಕ್ಕೆ ಅವರು ಶುಭ ಕೋರಿದರು.
ಟೊವಿನೋ ಥಾಮಸ್ ನಾಯಕನಾಗಿ ನಟಿಸಿರುವ “ಎಆರ್‌ಎಂ” ಸಿನಿಮಾ ಸೆಪ್ಟೆಂಬರ್ 12ರಂದು ಒಟ್ಟು ಐದು ಭಾಷೆಗಳಲ್ಲಿ ತೆರೆಗೆ ಬರಲಿದೆ. ಈ ಸಿನಿಮಾವನ್ನು ಕನ್ನಡದಲ್ಲಿ ಹೊಂಬಾಳೆ ಫಿಲಂಸ್ ಬಿಡುಗಡೆ ಮಾಡಲಿದೆ.
ಮ್ಯಾಜಿಕ್ ಫ್ರೇಮ್ಸ್ ಬ್ಯಾನರ್ ಅಡಿಯಲ್ಲಿ ಲಿಸ್ಟಿನ್ ಸ್ಟೀಫನ್ ಮತ್ತು UGM ಮೂವೀಸ್ ಅಡಿಯಲ್ಲಿ ಡಾ. ಜಕರಿಯಾ ಥಾಮಸ್ ಸಿನಿಮಾವನ್ನು ನಿರ್ಮಿಸಿದ್ದಾರೆ. ಮಲಯಾಳಂ ಚಿತ್ರರಂಗದಿಂದ ಬಾಲಿವುಡ್‌ನಲ್ಲೂ ಛಾಪು ಮೂಡಿಸಿರುವ ಜೋಮನ್ ಟಿ. ಜಾನ್ ಅವರ ಛಾಯಾಗ್ರಹಣ ಮತ್ತು ಶಮೀರ್ ಮುಹಮ್ಮದ್ ಅವರ ಸಂಕಲನ ಚಿತ್ರಕ್ಕಿದೆ.
ದಿಬು ನೈನನ್ ಥಾಮಸ್ಚಿ ತ್ರಕ್ಕೆ ಸಂಗೀತ ಸಂಯೋಜಿಸಿದ್ದಾರೆ. ಈ ಹಿಂದೆ ಕನಾ ಮತ್ತು ನಟ ಸಿದ್ಧಾರ್ಥ್ ಅವರ ಚಿತ್ತಾ ಸಿನಿಮಾಗಳಿಗೂ ಸಂಗೀತ ನೀಡಿದ್ದರು. ತಮಿಳು, ತೆಲುಗು ಮತ್ತು ಮಲಯಾಳಂ ಚಿತ್ರರಂಗದಲ್ಲಿ ತಮ್ಮ ಛಾಪು ಮೂಡಿಸಿರುವ ನಟಿಯರಾದ ಕೃತಿ ಶೆಟ್ಟಿ, ಐಶ್ವರ್ಯ ರಾಜೇಶ್ ಮತ್ತು ಸುರಭಿ ಲಕ್ಷ್ಮಿ , ಬೇಸಿಲ್ ಜೋಸೆಫ್, ಜಗದೀಶ್, ಹರೀಶ್ ಉತ್ತಮನ್, ಹರೀಶ್ ಪೆರಾಡಿ, ಕಬೀರ್ ಸಿಂಗ್, ಪ್ರಮೋದ್ ಶೆಟ್ಟಿ, ರೋಹಿಣಿ ಚಿತ್ರದಲ್ಲಿದ್ದಾರೆ.
ಸುಜಿತ್ ನಂಬಿಯಾರ್ಚಿ ಕಥೆ ಬರೆದಿದ್ದಾರೆ. ಅವರ ಜತೆಗೆ ದೀಪು ಪ್ರದೀಪ್ ಸಾಥ್ ನೀಡಿದ್ದಾರೆ. ವಿಕ್ರಮ್ ಮೂರ್, ಫೀನಿಕ್ಸ್ ಪ್ರಭು ಚಿತ್ರಕ್ಕೆ ಸಾಹಸ ನಿರ್ದೇಶನ ಮಾಡಿದ್ದಾರೆ. ಕನ್ನಡದಲ್ಲಿ ಹೊಂಬಾಳೆ ಫಿಲಂಸ್, ತೆಲುಗಿನಲ್ಲಿ ಮೈತ್ರಿ ಮೂವಿ ಮೇಕರ್ಸ್ ಮತ್ತು ಹಿಂದಿಯಲ್ಲಿ ಅನಿಲ್ ಥಡಾನಿ ಚಿತ್ರವನ್ನು ವಿತರಣೆ ಮಾಡುತ್ತಿದ್ದಾರೆ.
ಬೆಳಗಾವಿ: ಬೆಳಗಾವಿಯಲ್ಲಿ ನಡೆಯುತ್ತಿರುವ ವಿಧಾನಮಂಡಲ ಅಧಿವೇಶನದಲ್ಲಿ ಸಾರಿಗೆ ಸಿಬ್ಬಂದಿ ವೇತನ ಪರಿಷ್ಕರಣೆ ಬಗ್ಗೆ ಪ್ರಸ್ತಾಪವಾಗಿದೆ. ಈ ಬಗ್ಗೆ ಸಾರಿಗೆ ಸಚಿವ…
ನವದೆಹಲಿ: ಲೋಕಸಭೆಯಲ್ಲಿ ವಿ-ಬಿಜಿ ರಾಮ್ ಜಿ ಮಸೂದೆ ಅಂಗೀಕಾರಗೊಂಡಿದೆ. ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಇಂದು ಲೋಕಸಭೆಯು ರೋಜ್‌ಗಾರ್ ಮತ್ತು ಅಜೀವಿಕಾ…
ಬೆಳಗಾವಿ: ರಾಜ್ಯದಲ್ಲಿ ಪೊಲೀಸ್ ಸಿಬ್ಬಂದಿಗಳೇ ದರೋಡೆ, ಕಳ್ಳತನ ಸೇರಿದಂತೆ ವಿವಿಧ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗುತ್ತಿರುವ ಪ್ರಕರಣಗಳು ಹೆಚ್ಚುತ್ತಿದ್ದು, ಬೇಲಿಯೇ ಎದ್ದು…
ಬೆಂಗಳೂರು: ಪಾರಿವಾಳದ ಮಲ-ಮೂತ್ರದಿಂದ ಸೋಂಕು, ಉಸಿರಾಟದ ತೊಂದರೆಯಾಗುತ್ತಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಎಚ್ಚರಿಕೆ ನೀಡಿದ್ದಾರೆ. ಈ ಕುರಿತು…
ಕಾರವಾರ: ಪತ್ನಿ ಕಿಡ್ನ್ಯಾಪ್ ಮಾಡಿದ್ದ ಪ್ರಕರಣದಲ್ಲಿ ಬಂಧಿತನಾಗಿದ್ದ ನಿರ್ಮಾಪಕ ಹರ್ಷವರ್ಧನ್ ಇದೀಗ ಮನೆಗಳ್ಳತನ ಪ್ರಕರಣದಲ್ಲಿ ಬಂಧಿತನಾಗಿದ್ದಾನೆ. ಉತ್ತರ ಕನ್ನಡ ಜಿಲ್ಲೆಯ…
ಶಿವಮೊಗ್ಗ: ಧರ್ಮಸ್ಥಳ ಗ್ರಾಮದಲ್ಲಿ ಶವಗಳನ್ನು ಹೂತು ಹಾಕಿರುವುದಾಗಿ ದೂರು ನೀಡಿ ಬಂಧಿತನಾಗಿದ್ದ ಮಾಸ್ಕ್‌ಮ್ಯಾನ್ ಚಿನ್ನಯ್ಯ ಈಗ ಜೈಲಿನಿಂದ ಬಿಡುಗಡೆಯಾಗಿದ್ದಾನೆ. ಚಿನ್ನಯ್ಯನಿಗೆ…