ನಟಿ ಮತ್ತು ‘ಕನ್ನಡತಿ’ ಧಾರಾವಾಹಿ ಖ್ಯಾತಿಯ ರಂಜಿನಿ ರಾಘವನ್ ಒಂದು ಚಿತ್ರ ನಿರ್ದೇಶನ ಮಾಡುತ್ತಿದ್ದಾರೆ ಎಂಬ ಸುದ್ದಿ ಕೆಲವು ತಿಂಗಳುಗಳ ಹಿಂದೆ ಕೇಳಿ ಬಂದಿತ್ತು. ಆದರೆ, ಆ ಚಿತ್ರ ಯಾವುದು? ಯಾರು ನಟಿಸುತ್ತಿದ್ದಾರೆ? ಎಂಬ ಮಾಹಿತಿಯನ್ನು ಅವರು ಬಿಟ್ಟುಕೊಟ್ಟಿರಲಿಲ್ಲ. ಈಗ ಚಿತ್ರದ ಶೀರ್ಷಿಕೆ ಅನಾವರಣವಾಗಿದ್ದು, ಚಿತ್ರಕ್ಕೆ ‘ಡಿ ಡಿ ಢಿಕ್ಕಿ’ ಎಂಬ ಹೆಸರನ್ನು ಇಡಲಾಗಿದೆ.
ಈ ಚಿತ್ರದಲ್ಲಿ ‘ನೆನಪಿರಲಿ’ ಪ್ರೇಮ್ ನಾಯಕನಾಗಿ ಕಾಣಿಸಿಕೊಂಡರೆ, ಅವರ ಮಗನಾಗಿ ಗಣೇಶ್ ಮಗ ವಿಹಾನ್ ನಟಿಸುತ್ತಿದ್ದಾನೆ. ಈ ಚಿತ್ರವನ್ನು ನಿರ್ದೇಶಕ ಜಡೇಶ್ ಕೆ. ಹಂಪಿ, ರಾಮಕೃಷ್ಣ ಮತ್ತು ಆನಂದ್ ಕುಮಾರ್ ಜೊತೆಯಾಗಿ ನಿರ್ಮಿಸುತ್ತಿದ್ದಾರೆ. ಹಂಪಿ ಪಿಕ್ಚರ್ಸ್ ಎಂಬ ಹೊಸ ನಿರ್ಮಾಣ ಸಂಸ್ಥೆಯನ್ನು ಪ್ರಾರಂಭಿಸಿರುವ ಜಡೇಶ್, R K & A K ಎಂಟರ್ಟೈನ್ಮೆಂಟ್ ಸಂಸ್ಥೆ ಜೊತೆಗೆ ಈ ಚಿತ್ರ ನಿರ್ಮಿಸುತ್ತಿದ್ದಾರೆ. ಶುಕ್ರವಾರ, ಪ್ರೇಮ್ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದು, ಈ ಸಂದರ್ಭದಲ್ಲಿ ಶೀರ್ಷಿಕೆ ಅನಾವರಣವಾಗಿದೆ.
ಈ ಚಿತ್ರದ ಕುರಿತು ಮಾತನಾಡುವ ರಂಜನಿ ರಾಘವನ್, ‘ಈ ಚಿತ್ರದ ಮೂಲಕ ಕಾಮಿಡಿ ಮೂಲಕ ಭಾವನಾತ್ಮಕ ಸನ್ನಿವೇಶಗಳನ್ನು ತೋರಿಸುವ ಪ್ರಯತ್ನ ಮಾಡಲಾಗಿದೆ. ನಾಯಕ ಗಣೇಶ್ ಪುತ್ರ ವಿಹಾನ್ ಚಿತ್ರದಲ್ಲಿ ಪ್ರೇಮ್ ಅವರ ಪುತ್ರನಾಗಿ ಅಭಿನಯಿಸಿದ್ದಾರೆ. ಇಳಯರಾಜ ಅವರು ಚಿತ್ರಕ್ಕೆ ನಾಲ್ಕು ಹಾಡುಗಳನ್ನು ಸಂಯೋಜಿಸಿದ್ದಾರೆ. ಇದೊಂದು ಸಂಗೀತ ಪ್ರಧಾನ ಚಿತ್ರವೂ ಆಗಲಿದೆ. ಈಗಾಗಲೇ ಶೇ. 60ರಷ್ಟು ಮಾತಿನ ಭಾಗದ ಚಿತ್ರೀಕರಣ ಮುಗಿದಿದೆ’ ಎಂದರು.
ಈ ಚಿತ್ರವನ್ನು ಪ್ರೇಮ್ ಮೊದಲು ಒಪ್ಪಿರಲಿಲ್ಲವಂತೆ. ‘ಈ ಕಥೆ ನನ್ನ ಮನ ಮುಟ್ಟಿತು. ರಂಜನಿ ಅವರು ಅಂತಹ ಒಳ್ಳೆಯ ಕಥೆ ಮಾಡಿಕೊಂಡಿದ್ದಾರೆ. ಇಳಯರಾಜ ಅವರು ಸಂಗೀತ ನೀಡಿರುವುದು ಚಿತ್ರದ ತೂಕವನ್ನು ಮತ್ತಷ್ಟು ಹೆಚ್ಚಿಸಿದೆ. ಈ ಚಿತ್ರದ ಚಿತ್ರೀಕರಣ ಮುಗಿಸಿ ಮನೆಗೆ ಹೋದ ನಂತರ ಚಿತ್ರದ ಸನ್ನಿವೇಶಗಳನ್ನು ನೆನಪಿಸಿಕೊಂಡು ಅತ್ತಿದ್ದು ಉಂಟು. ಗಣೇಶ್ ಪುತ್ರ ವಿಹಾನ್ ಕೂಡ ಅದ್ಭುತ ಕಲಾವಿದ. ವಿವಿಧ ಕಾರಣಗಳಿಂದ ತಮ್ಮ ಊರನ್ನು ಬಿಟ್ಟು ಬೆಂಗಳೂರಿಗೆ ಬಂದ ಎಷ್ಟೋ ಜನರನ್ನು ನಾವು ಊರು ಬಿಟ್ಟು ಬಂದಿದ್ದು ತಪ್ಪಾಯಿತಾ? ಎಂಬ ಪ್ರಶ್ನೆ ಈ ಚಿತ್ರ ನೋಡಿದ ಮೇಲೆ ಮೂಡುವುದಂತೂ ಖಂಡಿತಾ’ ಎಂದರು
ಈ ಚಿತ್ರಕ್ಕೆ ಆರೂರು ಸುಧಾಕರ್ ಶೆಟ್ಟಿ ಛಾಯಾಗ್ರಹಣ ಮಾಡಿದರೆ, ಸುಧೀರ್ ಕ್ರಿಯೇಟಿವ್ ಹೆಡ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
ಗುಂಡ್ಲುಪೇಟೆ : ತಾಲ್ಲೂಕಿನ ಬರಗಿ ಗ್ರಾಮದ ಜಮೀನುಗಳಲ್ಲಿ ಜಾನುವಾರುಗಳ ಮೇಲೆ ದಾಳಿ ನಡೆಸಿ ಕೊಂದುಹಾಕಿದ್ದ ವಿಚಾರವಾಗಿ ಅರಣ್ಯ ಇಲಾಖೆ ಚಿರತೆ…
ಮೈಸೂರು : ಬುಧವಾರವಷ್ಟೇ ಹೆಬ್ಬಾಳ್‌ನಲ್ಲಿ ಶೆಡ್‌ವೊಂದರ ಮೇಲೆ ದಾಳಿ ನಡೆಸಿದ್ದ ಎನ್‌ಸಿಬಿ ಪೊಲೀಸರು, ಮಾದಕ ವಸ್ತು ಮಾರಾಟ ಆರೋಪ ಪ್ರಕರಣದಲ್ಲಿ…
ಹನೂರು : ತಾಲ್ಲೂಕಿನ ಬಿ.ಆರ್.ಟಿ ಹುಲಿ ಸಂರಕ್ಷಿತ ಪ್ರದೇಶದ ಬೈಲೂರು ವನ್ಯಜೀವಿ ವಲಯ ವ್ಯಾಪ್ತಿಯಲ್ಲಿ ಅಕ್ರಮವಾಗಿ ತೇಗದ ಮರಗಳನ್ನು ಕಟಾವು…
ಮೈಸೂರು : ವಿಶ್ವವಿದ್ಯಾನಿಲಯಗಳ ಕ್ಯಾಂಪಸ್‌ನಲ್ಲಿ ಜಾತಿ, ಧರ್ಮ,ಲಿಂಗ ಆಧಾರಿತ ಶೋಷಣೆಯನ್ನು ತಡೆಗಟ್ಟಲು ಯುಜಿಸಿಯ ಉದ್ದೇಶಿತ ಹೊಸ ನಿಯಮಾವಳಿಗಳ ಜಾರಿಗೆ ಒತ್ತಾಯಿಸಿ…
ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ಖಾದಿ ಬಟ್ಟೆ ಬಳಕೆ ಕಡ್ಡಾಯಗೊಳಿಸಲಾಗಿದೆ. ಪ್ರತಿ ತಿಂಗಳ ಮೊದಲ ಶನಿವಾರ ಖಾದಿ ಬಟ್ಟೆ…
ಹೊಸದಿಲ್ಲಿ : ಮಹತ್ವದ ಬೆಳವಣಿಗೆಯಲ್ಲಿ ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಹೊಸ ನಿಯಮಗಳಿಗೆ ಸರ್ವೋಚ್ಚ ನ್ಯಾಯಾಲಯ ತಡೆ ನೀಡಿದೆ. ವಿಶ್ವವಿದ್ಯಾಲಯ…