ಬೆಂಗಳೂರು: ‘ಮಿರ್ಚಿ ಮಂಡಕ್ಕಿ ಖಡಕ್ ಚಾಯ್’ ಚಿತ್ರವನ್ನು ನಿರ್ದೇಶಿಸಿದ್ದ ಸಂಜೋತ ಭಂಡಾರಿ, ಈಗ ‘ಲಂಗೋಟಿ ಮ್ಯಾನ್’ ಎಂಬ ಚಿತ್ರವನ್ನು ಸದ್ದಿಲ್ಲದೆ ಮಾಡಿ ಮುಗಿಸಿದ್ದಾರೆ. ಈ ಚಿತ್ರದ ಟೀಸರ್ ಇತ್ತೀಚೆಗೆ ಬಿಡುಗಡೆಯಾಗಿದೆ. ನಟ ಶರಣ್ ಟೀಸರ್ ಬಿಡುಗಡೆ ಮಾಡಿ ಇತ್ತೀಚೆಗೆ ಚಿತ್ರತಂಡಕ್ಕೆ ಶುಭ ಹಾರೈಸಿದ್ದರು.
ತನು ಟಾಕೀಸ್ ಲಾಂಛನದಲ್ಲಿ ನಿರ್ಮಾಣವಾಗಿರುವ ‘ಲಂಗೋಟಿ ಮ್ಯಾನ್’ ಚಿತ್ರದಲ್ಲಿ ಆಕಾಶ್ ರಾಂಬೊ, ಸಂಹಿತಾ ವಿನ್ಯಾ, ಧೀರೇಂದ್ರ, ಮಹಾಲಕ್ಷ್ಮಿ, ಹುಲಿ ಕಾರ್ತಿಕ್, ಸಂಹಿತ ವಿನ್ಯ, ಸ್ನೇಹ ಋಷಿ, ಪವನ್, ಆಟೋ ನಾಗರಾಜ್ ಮುಂತಾದವರು ನಟಿಸಿದ್ದಾರೆ. ಚಿತ್ರಕ್ಕೆ ಕಿರಣ್ ಕೃಷ್ಣಮೂರ್ತಿ ಸಂಗೀತ, ರವಿವರ್ಮ (ಗಂಗು) ಅವರ ಛಾಯಾಗ್ರಹಣವಿದೆ.
ಇನ್ನು ಲಂಗೋಟಿ ಮ್ಯಾನ್ ಚಿತ್ರಕ್ಕೆ ಅಖಿಲ ಕರ್ನಾಟಕ ಅರ್ಚಕರ ಹಾಗೂ ಪುರೋಹಿತರ ಪರಿಷತ್ ತೀವ್ರ ಖಂಡನೆ ವ್ಯಕ್ತಪಡಿಸಿದ್ದು, ಚಿತ್ರದ ಟೈಟಲ್ ಕುರಿತು ಮಾತನಾಡಿದ ರಾಘವೇಂದ್ರ ಭಟ್ ಅವರು ಈ ರೀತಿ ಒಂದು ಸಮುದಾಯದ ಕುರಿತು ಅಪಹಾಸ್ಯ ಮಾಡುವುದು ತಪ್ಪು. ಅವರು ಈ ಚಿತ್ರವನ್ನು ಬ್ಯಾನ್ ಮಾಡದಿದ್ದರೆ ಎಲ್ಲ ಚಿತ್ರಮಂದಿರಗಳಲ್ಲಿ ಪ್ರತಿಭಟನೆ ನಡೆಸುತ್ತೇವೆ.
ಲಂಗೋಟಿ, ಜನಿವಾರ ಇವು ಸನಾತನ ಸಂಸ್ಕ್ರತಿಯ ಪ್ರತೀಕ. ಇದು ಅಪಹಾಸ್ಯ ಮಾಡುವ ವಿಚಾರವಲ್ಲ. ಇತ್ತೀಚೆಗೆ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ಎಲ್ಲರ ಶ್ರೇಯೋಭಿವೃದ್ದಿಗೆ ಪೂಜೆ ಮಾಡಿದ್ದಾರೆ. ಇಂದು ನಮ್ಮನ್ನೇ ಅಪಹಾಸ್ಯ ಮಾಡುತ್ತಿದ್ದಾರೆ. ಇದನ್ನು ಸಹಿಸುವ ಪ್ರಶ್ನೆಯೇ ಇಲ್ಲ ಎಂದರು.
ಚಿತ್ರ ತಂಡದವರಿಗೆ ಈ ಮೂಲಕ ಎಚ್ಚರಿಕೆ ಕೊಡುತ್ತಿದ್ದೇವೆ. ಒಂದೊಮ್ಮೆ ಇದನ್ನು ಬಿಡುಗಡೆ ಮಾಡಿದರೆ ರಾಜ್ಯಾದ್ಯಂತ ಪ್ರತಿಭಟನೆಗೆ ಅರ್ಚಕರ ಪರಿಷತ್ತ್ ನಿರ್ಧರಿಸಿದೆ ಎಂದು ಎಚ್ಚರಿಕೆ ನೀಡಿದರು.
ಅಖಿಲ ಕರ್ನಾಟಕ ಬ್ರಾಹ್ಮಣ ಅರ್ಚಕರ ಮತ್ತು ಪುರೋಹಿತರ ಪರಿಷತ್ ಅಧ್ಯಕ್ಷ ವಿಶ್ವೇಶ್ವರ ಭಟ್, ಅಖಿಲ ಕರ್ನಾಟಕ ಬ್ರಾಹ್ಮಣ ಅರ್ಚಕರ ಮತ್ತು ಪುರೋಹಿತರ ಪರಿಷತ್ ಕಾರ್ಯಾಧ್ಯಕ್ಷ ಬಿಎಸ್ ರಾಘವೇಂದ್ರ ಭಟ್, ಪ್ರಧಾನ ಕಾರ್ಯದರ್ಶಿ ವೇದಮೂರ್ತಿ, ಭಾನುಪ್ರಕಾಶ್ ಶರ್ಮ ಇತರರು ಇದ್ದರು.
ಬೆಂಗಳೂರು : ಬಂಡೀಪುರ ಮತ್ತು ನಾಗರಹೊಳೆಯಲ್ಲಿ ಹಂತ ಹಂತವಾಗಿ ಸಫಾರಿ ಆರಂಭಿಸಲು ಮತ್ತು ಧಾರಣಾ ಶಕ್ತಿ ಮತ್ತು ಹುಲಿಗಳು ನಾಡಿನತ್ತ…
ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತವರು ಜಿಲ್ಲೆ ಮೈಸೂರಿನಲ್ಲಿ ಎರಡು ದಿನಗಳ ಕಾಲ ಪ್ರವಾಸ ಹಮ್ಮಿಕೊಂಡಿದ್ದಾರೆ. ಜ.5ರಂದು ಬೆಳಿಗ್ಗೆ…
ಮೈಸೂರು : ಅರಮನೆ ನಗರಿ ಮೈಸೂರಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಚಾಮುಂಡಿಬೆಟ್ಟದ ಸಂರಕ್ಷಣೆ ಮತ್ತು ಉಳಿವಿಗಾಗಿ ಜ.4ರಂದು(ಭಾನುವಾರ) ಜಾಗೃತಿ ಆಂದೋಲನವನ್ನು…
ಭೋಪಾಲ್ : ಇಂದೋರ್‌ನ ಭಗೀರಥಪುರದಲ್ಲಿ ಕಲುಷಿತ ಕುಡಿಯುವ ನೀರು ಸೇವನೆಯಿಂದ 11 ಜೀವಗಳು ಬಲಿಯಾಗಿವೆ. ಮತ್ತು 1400ಕ್ಕೂ ಹೆಚ್ಚು ನಿವಾಸಿಗಳ…
ಬೆಂಗಳೂರು : ಬ್ಯಾನರ್ ಕಟ್ಟುವ ವಿಷಯದಲ್ಲಿ ಕಳೆದ ರಾತ್ರಿ ಬಳ್ಳಾರಿ ನಗರದಲ್ಲಿ ನಡೆದ ಘಟನೆಯ ಕುರಿತು ಉಚ್ಚ ನ್ಯಾಯಾಲಯದ ಹಾಲಿ…
ಬೆಂಗಳೂರು : ಬಳ್ಳಾರಿಯಲ್ಲಿ ಗುರುವಾರ ರಾತ್ರಿ ವಾಲ್ಮೀಕಿ ಬ್ಯಾನರ್ ವಿಚಾರದಲ್ಲಿ ನಡೆದ ಎರಡು ಗುಂಪುಗಳ ಘರ್ಷಣೆ ವೇಳೆ ಫೈರಿಂಗ್ ಆಗಿ…