ಎಸ್.ಎಸ್. ರಾಜಮೌಳಿ ನಿರ್ದೇಶನದ ‘ಗ್ಲೋಬ್ ಟ್ರೋಟರ್’ ಚಿತ್ರತಂಡದಿಂದ ಪೃಥ್ವಿರಾಜ್ ಸುಕುಮಾರನ್ ಅವರ ಪೋಸ್ಟರ್ ಕಳೆದ ವಾರವಷ್ಟೇ ಬಿಡುಗಡೆಯಾಗಿತ್ತು. ಇದೀಗ ಚಿತ್ರತಂಡವು ಪ್ರಿಯಾಂಕಾ ಚೋಪ್ರಾ ಅವರ ಪೋಸ್ಟರ್ ಬಿಡುಗಡೆ ಮಾಡಿದೆ.
ಪ್ರಿಯಾಂಕಾ ಈ ಚಿತ್ರದಲ್ಲಿ ಮಂದಾಕಿನಿ ಎಂಬ ಪಾತ್ರವನ್ನು ನಿರ್ವಹಿಸುತ್ತಿದ್ದು, ಹಳದಿ ಸೀರೆ ಉಟ್ಟು ಗನ್ ಹಿಡಿದಿರುವ ಪೋಸ್ಟರ್ ಈಗಾಗಲೇ ವೈರಲ್ ಆಗಿದೆ. ಈ ಚಿತ್ರದಲ್ಲಿ ಪ್ರಿಯಾಂಕಾ, ಮಹೇಶ್ ಬಾಬುಗೆ ನಾಯಕಿಯಾಗಿ ನಟಿಸುತ್ತಿದ್ದಾರೆ. ಇನ್ನು, ಕುಂಭ ಎಂಬ ಪಾತ್ರದಲ್ಲಿ ಮಲಯಾಳಂನ ಸ್ಟಾರ್ ನಟ ಪೃಥ್ವಿರಾಜ್ ಸಹ ನಟಿಸುತ್ತಿದ್ದಾರೆ.
ಇದನ್ನು ಓದಿ: ವಿಕ್ರಮ್ ರವಿಚಂದ್ರನ್ ಅಭಿನಯದ ‘ಮುಧೋಳ್’ ಬಿಡುಗಡೆ ಯಾವಾಗ ಗೊತ್ತಾ?
ಇದಕ್ಕೂ ಮೊದಲು ಈ ಚಿತ್ರವನ್ನು SSMB 28 ಎಂಬ ಹೆಸರಿನಲ್ಲಿ ತಾತ್ಕಾಲಿಕವಾಗಿ ಕರೆಯಲಾಗುತ್ತಿತ್ತು. ಈ ಚಿತ್ರದ ಚಿತ್ರೀಕರಣ ಈಗಾಗಲೇ ಪ್ರಾರಂಭವಾಗಿದ್ದು, ರಾಮೋಜಿ ರಾವ್ ಫಿಲಂ ಸಿಟಿಯಲ್ಲಿ ಬೃಹತ್ ಸೆಟ್‍ಗಳನ್ನು ನಿರ್ಮಿಸಿ ಚಿತ್ರೀಕರಣ ಮಾಡಲಾಗುತ್ತಿದೆ. ಈ ಭಾಗದ ಚಿತ್ರೀಕರಣದಲ್ಲಿ ಮಹೇಶ್ ಬಾಬು, ಪ್ರಿಯಾಂಕಾ ಚೋಪ್ರಾ, ಪೃಥ್ವಿರಾಜ್ ಮುಂತಾದವರು ಭಾಗವಹಿಸಿದ್ದಾರಂತೆ.
ಅಂದಹಾಗೆ, ಈ ಚಿತ್ರಕ್ಕೆ ‘ಗ್ಲೋಬ್ ಟ್ರೋಟರ್’ ಎಂಬ ಹೆಸರಿಡಲಾಗಿದೆ ಎಂದ ಹೇಳಲಾಗುತ್ತಿದೆ. ನವೆಂಬರ್ 15ರಂದು ರಾಮೋಜಿ ಫಿಲಂ ಸಿಟಿಯಲ್ಲಿ ಚಿತ್ರದ ಬೃಹತ್ ಕಾರ್ಯಕ್ರಮ ಆಯೋಜಿಸಲಾಗಿದ್ದು, ಈ ಕಾರ್ಯಕ್ರಮದಲ್ಲಿ ಚಿತ್ರದ ಬಗ್ಗೆ ಮತ್ತಷ್ಟು ಮಾಹಿತಿ ಹೊರಬೀಳುವ ಸಾಧ್ಯತೆ ಇದೆ. ಈ ಕಾರ್ಯಕ್ರಮದಲ್ಲಿ 50 ಸಾವಿರ ಜನ ಭಾಗವಹಿಸುವ ನಿರೀಕ್ಷೆ ಇದೆ.





