ಶಿವರಾಜ್ ಕುಮಾರ್ ಮತ್ತು ಧನಂಜಯ್ ಅಭಿನಯದ ‘666 ಆಪರೇಷನ್ ಡ್ರೀಮ್ ಥಿಯೇಟರ್’ ಚಿತ್ರಕ್ಕಾಗಿ ಸತತ ಚಿತ್ರೀಕರಣ ನಡೆಯುತ್ತಿದೆ. ಈ ಚಿತ್ರದಲ್ಲಿ ನಾಯಕಿಯಾರಾಗಬಹುದು ಎಂಬ ಕುತಹಲ ಎಲ್ಲರಲ್ಲೂ ಇದ್ದೇ ಇತ್ತು. ಈ ಚಿತ್ರಕ್ಕೀಗ ಬಹುಭಾಷಾ ನಟಿ ಪ್ರಿಯಾಂಕಾ ಮೋಹನ್ ಎಂಟ್ರಿ ಕೊಟ್ಟಿದ್ದಾರೆ.
ದಕ್ಷಿಣ ಚಿತ್ರರಂಗದಲ್ಲಿ ಖ್ಯಾತಿ ಗಳಿಸಿರುವ ಪ್ರಿಯಾಂಕಾ ಮೋಹನ್ ಈಗ ‘666 ಆಪರೇಷನ್ ಡ್ರೀಮ್ ಥಿಯೇಟರ್’ ಸಿನಿಮಾದ ಭಾಗವಾಗಿದ್ದಾರೆ. ವಿಶೇಷವೆಂದರೆ, ಈ ಪ್ರಿಯಾಂಕಾ ಮೊದಲು ಬಣ್ಣ ಹಚ್ಚಿದ್ದು ಕನ್ನಡ ಚಿತ್ರವೊಂದಕ್ಕೆ. 2019ರಲ್ಲಿ ಬಿಡುಗಡೆಯಾದ ‘ಒಂದು ಕಥೆ ಹೇಳ್ಲಾ’ ಚಿತ್ರದ ಮೂಲಕ ಪ್ರಿಯಾಂಕಾ ಮೊದಲು ಬಣ್ಣ ಹಚ್ಚಿದ್ದರು.
ಆ ನಂತರ ತೆಲುಗಿನ ‘ಗ್ಯಾಂಗ್‌ಲೀಡರ್’, ‘ಸರಿಪೋದ ಶನಿವಾರಂ’, ತಮಿಳಿನ ‘ಡಾಕ್ಟರ್’, ‘ಟಿಕ್‌ಟಾಕ್’, ‘ಕ್ಯಾಪ್ಟನ್ ಮಿಲ್ಲರ್’, ‘ಬ್ರದರ್’ ಮುಂತಾದ ಸಿನಿಮಾಗಳಲ್ಲಿ ಪ್ರಿಯಾಂಕ ಮೋಹನ್ ನಟಿಸಿದ್ದಾರೆ. ಪವನ್ ಕಲ್ಯಾಣ್, ನಾನಿ, ಧನುಷ್, ಶಿವಕಾರ್ತಿಕೇಯನ್ ಮುಂತಾದ ಹೀರೋಗಳ ಎದುರು ನಟಿಸಿದ್ದಾರೆ. ಈಗ ಹೇಮಂತ್ ರಾವ್ ನಿರ್ದೇಶನದ 80ರ ದಶಕದ ಬಾಂಡ್ ಶೈಲಿಯ ಚಿತ್ರದ ಮೂಲಕ ವಾಪಸ್ಸಾಗಿದ್ದಾರೆ.
‘666 ಆಪರೇಷನ್ ಡ್ರೀಮ್ ಥಿಯೇಟರ್’ ಚಿತ್ರತಂಡ ಸೇರ್ಪಡೆ ಬಗ್ಗೆ ಮಾತನಾಡಿರುವ ಪ್ರಿಯಾಂಕಾ ಮೋಹನ್, ‘ನಾನು ಶಿವರಾಜಕುಮಾರ್ ಅವರ ಸಿನಿಮಾಗಳನ್ನು ನೋಡುತ್ತಾ ಬೆಳೆದವಳು. ‘666 ಆಪರೇಷನ್ ಡ್ರೀಮ್ ಥಿಯೇಟರ್’ ಚಿತ್ರದ ಭಾಗವಾಗುವುದು ನನ್ನ ಕನಸು ನನಸಾಗಿದೆ. ಹೇಮಂತ್ ರಾವ್ ಜೊತೆಗೆ ಕೆಲಸ ಮಾಡುವ ಆಸೆ ಇತ್ತು. ಅದು ಇಷ್ಟು ಬೇಗ ಆಗುತ್ತದೆ ಎಂದು ಭಾವಿಸಿರಲಿಲ್ಲ’ ಎನ್ನುತ್ತಾರೆ.
ಡಾ. ವೈಶಾಕ್ ಜೆ ಗೌಡ ಅವರ ವೈಶಾಕ್ ಜೆ ಫಿಲ್ಮ್ಸ್ ಬ್ಯಾನರ್ ಅಡಿಯಲ್ಲಿ ನಿರ್ಮಿಸಲಾಗುತ್ತಿರುವ ಚಿತ್ರಕ್ಕೆ ಹೇಮಂತ್ ರಾವ್ ಕಥೆ-ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. ಎರಡು ಹಂತದ ಚಿತ್ರೀಕರಣ ಮುಗಿಸಿರುವ ಚಿತ್ರತಂಡ, ಡಿಸೆಂಬರ್ ಮೊದಲ ವಾರದಲ್ಲಿ ಮೂರನೇ ಹಂತದ ಶೂಟಿಂಗ್ ನಡೆಸಲು ಯೋಜನೆ ಹಾಕಿಕೊಂಡಿದೆ. ಚಿತ್ರಕ್ಕೆ ಚರಣ್ ರಾಜ್ ಸಂಗೀತ ನಿರ್ದೇಶನ ಮತ್ತು ಅದ್ವೈತ ಗುರುಮೂರ್ತಿ ಛಾಯಾಗ್ರಹಣವಿದೆ.
ದಾವಣಗೆರೆ: ಜಿಲ್ಲೆಯ ಆನಗೋಡಿನ ಇಂದಿರಾ ಪ್ರಿಯದರ್ಶಿನಿ ಕಿರು ಮೃಗಾಲಯದಲ್ಲಿ ನಾಲ್ಕು ಚುಕ್ಕೆ ಜಿಂಕೆಗಳ ಸಾವಿಗೆ ಕಾರಣ ಬಹಿರಂಗವಾಗಿದೆ. ನಾಲ್ಕು ಚುಕ್ಕೆ…
ಬೆಂಗಳೂರು: ವಾಲ್ಮೀಕಿ ಹಗರಣದಲ್ಲಿ ಮಾಜಿ ಸಚಿವ ಬಿ.ನಾಗೇಂದ್ರಗೆ ಮತ್ತೆ ಸಂಕಷ್ಟ ಎದುರಾಗಿದ್ದು, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನೀಡಿದ್ದ ಜಾಮೀನು ರದ್ದು…
ಬೆಂಗಳೂರು: ರಾಜ್ಯಪಾಲರು ಭಾಷಣ ಓದದೇ ಸಂವಿಧಾನ ಉಲ್ಲಂಘಿಸಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ವಿಧಾನಸೌಧದಲ್ಲಿ ಮಾತನಾಡಿದ…
ಬೆಂಗಳೂರು: ವಿಧಾನಸೌಧದಲ್ಲಿ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಬೇಕಿದ್ದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಕೇವಲ ಎರಡನೇ ಮಾತಿನಲ್ಲಿ…
ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಹಗರಣದಲ್ಲಿ ಲೋಕಾಯುಕ್ತ ನೀಡಿರುವ ಕ್ಲೀನ್‌ಚಿಟ್ ಕುರಿತು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇಂದು ಮಹತ್ವದ…
ಬೆಂಗಳೂರು: ರಾಜ್ಯ ಸರ್ಕಾರ ಇಂದಿನಿಂದ ಜನವರಿ.31ರವರೆಗೆ ವಿಧಾನಮಂಡಲ ವಿಶೇಷ ಅಧಿವೇಶನ ಕರೆದಿದ್ದು, ನರೇಗಾ ಯೋಜನೆ ಹೆಸರು ಬದಲಾವಣೆ ಆಕ್ಷೇಪಿಸಿ ಕರೆದಿರುವ…