ದರ್ಶನ್ ಅಭಿನಯದ ‘ಕಾಟೇರ’ ಚಿತ್ರಕ್ಕೆ ಚಿತ್ರಕಥೆ ಬರೆದು ಮಾಸ್ತಿ ಮಂಜು ಮತ್ತು ಕಥೆ ಬರೆದ ಜಡೇಶ್ ಹಂಪಿ ಅವರ ಕೆಲಸದಿಂದ ಖುಷಿಯಾಗಿ ನಿರ್ಮಾಪಕ ರಾಕ್‍ಲೈನ್ ವೆಂಕಟೇಶ್, ಅವರಿಬ್ಬರಿಗೂ ಕಾರನ್ನು ಉಡುಗೊರೆಯಾಗಿ ಕೊಟ್ಟಿದ್ದರು. ಚಿತ್ರ ಬಿಡುಗಡೆಯಾಗಿ 100 ದಿನಗಳನ್ನು ಪೂರೈಸಿದ ಸಂದರ್ಭದಲ್ಲಿ ಇಬ್ಬರಿಗೂ ಕಾರು ಉಡುಗೊರೆಯಾಗಿ ನೀಡಲಾಗಿತ್ತು.
ಈಗ್ಯಾಕೆ ಈ ಮಾತು ಎಂದರೆ, ಚಿತ್ರ ಬಿಡುಗಡೆಯಾದ ಮೇಲೆ ಕಲಾವಿದರು ಮತ್ತು ತಂತ್ರಜ್ಞರ ಕೆಲಸ ನೋಡಿ ಅವರಿಗೆ ನಿರ್ಮಾಪಕರಿಗೆ ಕಾರು ಕೊಡಿಸುವುದು ವಾಡಿಕೆ. ಆದರೆ, ಚಿತ್ರ ಬಿಡುಗಡೆಯಾಗುವ ಮುನ್ನವೇ ಚಿತ್ರದ ನಿರ್ದೇಶಕರಿಗೆ ನಿರ್ಮಾಪಕರು ಕಾರು ಕೊಟ್ಟ ಘಟನೆ ಕನ್ನಡ ಚಿತ್ರರಂಗದಲ್ಲಾಗಿದೆ.
‘ಅಜಾಗ್ರತಾ’ ಎಂಬ ಪ್ಯಾನ್ ಇಂಡಿಯಾ ಚಿತ್ರವನ್ನು ರಾಧಿಕಾ ಕುಮಾರಸ್ವಾಮಿ ನಿರ್ಮಿಸುವುದರ ಜೊತೆಗೆ ಅದರಲ್ಲಿ ನಾಯಕಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಚಿತ್ರವನ್ನು ಅವರು ತಮ್ಮ ಸಹೋದರ ರವಿರಾಜ್ ಹೆಸರಲ್ಲಿ ನಿರ್ಮಿಸುತ್ತಿದ್ದಾರೆ. ಎಂ. ಶಶಿಧರ್ ನಿರ್ದೇಶನದ ‘ಅಜಾಗ್ರತ’ ಚಿತ್ರದ ಚಿತ್ರೀಕರಣ ಹಾಗೂ ಪೋಸ್ಟ್ ಪ್ರೊಡಕ್ಷನ್ ವರ್ಕ್ ಮುಗಿದು ಚಿತ್ರದ ರಫ್ ಕಾಪಿ ಬಂದಿದೆ. ಚಿತ್ರವನ್ನು ನೋಡಿದ ನಿರ್ಮಾಪಕರಿಗೆ ಚಿತ್ರ ಬಹಳ ಇಷ್ಟವಾಗಿದೆಯಂತೆ. ಒಂದೊಳ್ಳೆಯ ಚಿತ್ರ ಮಾಡಿಕೊಟ್ಟ ನಿರ್ದೇಶಕರಿಗೆ ನಿರ್ಮಾಪಕರು ಒಂದು ಕಾರು ಉಡುಗೊರೆಯಾಗಿ ನೀಡಿದ್ದಾರೆ.
‘ನಿರ್ದೇಶಕರು ಕಥೆ ಹೇಳಿದ ರೀತಿಯಲ್ಲೇ, ಅದಕ್ಕೂ ಹೆಚ್ಚಾಗಿಯೇ ಚಿತ್ರವನ್ನು ಬಹಳ ಚೆನ್ನಾಗಿ ಮಾಡಿ ಮುಗಿಸಿದ್ದಾರೆ. ಚಿತ್ರ ಅದ್ಭುತವಾಗಿ ಮೂಡಿಬಂದಿದೆ. ಚಿತ್ರ ನೋಡಿ ನನಗೆ ತುಂಬಾ ಖುಷಿಯಾಗಿದೆ. ಚಿತ್ರವನ್ನು ಉತ್ತಮವಾಗಿ ನಿರ್ದೇಶಿಸಿರುವ ನಿರ್ದೇಶಕರಿಗೆ ಉಡುಗೊರೆ ನೀಡುವ ಮನಸ್ಸಾಯಿತು. ಹಾಗಾಗಿ ಫಾರ್ಚ್ಯೂನರ್ ಕಾರನ್ನು ಉಡುಗೊರೆಯಾಗಿ ನೀಡುತ್ತೀದ್ದೇನೆ’ ಎಂದು ನಿರ್ಮಾಪಕ ರವಿರಾಜ್ ತಿಳಿಸಿದ್ದಾರೆ.
ಬಾಲಿವುಡ್ ನ ಖ್ಯಾತ ನಟ ಶ್ರೇಯಸ್ ತಲ್ಪಾಡೆ ಈ ಚಿತ್ರದ ನಾಯಕರಾಗಿ ನಟಿಸಿರುವ ಈ ಚಿತ್ರದ ನಾಯಕಿಯಾಗಿ ರಾಧಿಕಾ ಕುಮಾರಸ್ವಾಮಿ ಅಭಿನಯಿಸಿದ್ದಾರೆ. ಮಿಕ್ಕಂತೆ ತಮಿಳು ನಟ ಬಾಬಿ ಸಿಂಹ, ತೆಲುಗು ನಟರಾದ ರಾವ್ ರಮೇಶ್, ಸುನೀಲ್, ಆದಿತ್ಯ ಮೆನನ್, ರಾಘವೇಂದ್ರ ಶ್ರವಣ್, ದೇವರಾಜ್, ಜಯಪ್ರಕಾಶ್, ವಿನಯಾ ಪ್ರಸಾದ್ ಮುಂತಾದವರು ಈ ಚಿತ್ರದಲ್ಲಿ ನಟಿಸಿದ್ದಾರೆ.
‘ಅಜಾಗ್ರತ’ ಚಿತ್ರವು ತೆಲುಗು, ಕನ್ನಡ ಸೇರಿದಂತೆ ಏಳು ಭಾಷೆಗಳಲ್ಲಿ ನಿರ್ಮಾಣವಾಗುತ್ತಿದೆ. ಸಂದೀಪ್ ವಲ್ಲೂರಿ ಛಾಯಾಗ್ರಹಣ, ಶ್ರೀಹರಿ ಸಂಗೀತ ಈ ಚಿತ್ರಕ್ಕಿದೆ.
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…
ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಮಂಡ್ಯ ನಗರದಲ್ಲಿನ ವಿದ್ಯುತ್ ದೀಪಾಲಂಕಾರಕ್ಕೆ ಕೃಷಿ ಸಚಿವರು ಹಾಗೂ…
ಕೇರಳ ಮೂಲದ ಮಾಸ್ಟರ್ ಮೈಂಡ್ ಸೇರಿದಂತೆ 12 ಆರೋಪಿಗಳ ಬಂಧನ; ಮತ್ತೊಂದು ಮೋಸದ ಜಾಲ ಬಯಲಿಗೆಳೆದ ಕೊಡಗು ಜಿಲ್ಲಾ ಪೊಲೀಸರು…
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಮುಡಾ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಜನವರಿ…
ಮಂಡ್ಯ: ೮೭ ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕ್ಷಣಗಣನೆ ಆರಂಭವಾಗಿದೆ. ಈ ಹಿನ್ನೆಲೆ ಗುರುವಾರ ಸಂಜೆ ನಗರಕ್ಕೆ…