ಈ ಹಿಂದೆ ಪುನೀತ್ ರಾಜಕುಮಾರ್ ಅಭಿನಯದಲ್ಲಿ ‘ರಣವಿಕ್ರಮ’ ಮತ್ತು ‘ನಟಸಾರ್ವಭೌಮ’ ಚಿತ್ರಗಳನ್ನು ಪವನ್ ಒಡೆಯರ್ ನಿರ್ದೇಶನ ಮಾಡಿದ್ದರು. ಈಗ ಶಿವರಾಜಕುಮಾರ್ ಅಭಿನಯದಲ್ಲಿ ಹೊಸ ಚಿತ್ರವೊಂದನ್ನು ನಿರ್ದೇಶಿಸುವುದಕ್ಕೆ ಪವನ್ ಒಡೆಯರ್ ಸಜ್ಜಾಗಿದ್ದಾರೆ.
‘ಭೈರತಿ ರಣಗಲ್’ ಚಿತ್ರದ ಯಶಸ್ಸಿನಲ್ಲಿ ತೇಲುತ್ತಿರುವ ಶಿವರಾಜಕುಮಾರ್, ಸಾಲುಸಾಲು ಚಿತ್ರಗಳಲ್ಲಿ ನಟಿಸುವುದಕ್ಕೆ ಒಪ್ಪಿಕೊಂಡಿದ್ದಾರೆ. ಈ ಮಧ್ಯೆ, ಅವರ ಅಭಿನಯದಲ್ಲಿ ಪವನ್ ಒಡೆಯರ್ ಒಂದು ಚಿತ್ರವನ್ನು ನಿರ್ದೇಶಿಸುತ್ತಿರುವುದಷ್ಟೇ ಅಲ್ಲ, ಆ ಚಿತ್ರವನ್ನು ಅವರೇ ನಿರ್ಮಾಣ ಮಾಡುತ್ತಿದ್ದಾರೆ.
ಪವನ್ ಈ ಹಿಂದೆ ತಮ್ಮ ಬ್ಯಾನರ್‍ನಿಂದ ‘ಡೊಳ್ಳು’ ಮತ್ತು ‘ವೆಂಕ್ಯಾ’ ಚಿತ್ರಗಳನ್ನು ನಿರ್ಮಾಣ ಮಾಡಿದ್ದಾರೆ. ಮೊದಲ ಚಿತ್ರ ನಿರ್ಮಾಣದಲ್ಲಿಯೇ ರಾಷ್ಟ್ರ ಪ್ರಶಸ್ತಿ ಪಡೆದುಕೊಂಡಿದ್ದಾರೆ. ಇದಲ್ಲದೆ, ‘ಅವಸ್ತಿ vs ಅವಸ್ತಿ’ ಎಂಬ ಬಾಲಿವುಡ್ ಚಿತ್ರದ ನಿರ್ಮಾಣದಲ್ಲಿ ತೊಡಗಿಸಿಕೊಂಡಿದ್ದಾರೆ. ಈಗ ಪವನ್ ಒಡೆಯರ್ ತಮ್ಮ ಒಡೆಯರ್ ಮೂವೀಸ್ ಬ್ಯಾನರ್ ನಡಿ ನಾಲ್ಕನೇ ಚಿತ್ರ ನಿರ್ಮಿಸುತ್ತಿದ್ದಾರೆ.
2025ಕ್ಕೆ ಶಿವಣ್ಣ ಹಾಗೂ ಪವನ್ ಜೋಡಿಯ ಹೊಸ ಚಿತ್ರ ಟೇಕಾಫ್ ಆಗಲಿದೆ. ಈ ಚಿತ್ರದ ಕುರಿತು ಮಾತನಾಡಿರುವ ಪವನ್ ಒಡೆಯರ್, ‘ಪ್ರತಿಯೊಬ್ಬ ನಿರ್ದೇಶಕರಿಗೂ ಶಿವಣ್ಣನಿಗೆ ಚಿತ್ರ ಮಾಡಬೇಕೆಂಬ ಕನಸು ಇರುತ್ತದೆ. ನನ್ನ ಈ ಕನಸು ಈಗ ನನಸಾಗುತ್ತದೆ. ಥ್ರಿಲ್ಲರ್ ಜೊತೆಗೆ ಔಟ್ ಅಂಡ್ ಔಟ್ ಕಮರ್ಷಿಯಲ್ ಚಿತ್ರ ಇದಾಗಿದ್ದು, ಈ ಚಿತ್ರದಲ್ಲಿ ಶಿವಣ್ಣ ವಿಭಿನ್ನವಾಗಿ ಕಾಣಲಿದ್ದಾರೆ’ ಎಂದು ಹೇಳಿದ್ದಾರೆ.
ಒಡೆಯರ್ ಮೂವೀಸ್ ಬ್ಯಾನರ್ ನಡಿ ಅಪೇಕ್ಷಾ ಪವನ್ ಒಡೆಯರ್ ಹಾಗೂ ಪವನ್ ಒಡೆಯರ್ ಈ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ. ಆರ್ನಾ ಕ್ರಿಯೇಟಿವ್ ಸಂಸ್ಥೆಯು ನಿರ್ಮಾಣದಲ್ಲಿ ಕೈಜೋಡಿಸಲಿದೆ.
ಎರಡು ವರ್ಷಗಳ ಹಿಂದೆ ಬಿಡುಗಡೆಯಾದ ‘ರೆಮೋ’ ಚಿತ್ರದ ನಂತರ ಪವನ್ ಒಡೆಯರ್ ಯಾವೊಂದು ಚಿತ್ರವನ್ನೂ ನಿರ್ದೇಶನ ಮಾಡಿರಲಿಲ್ಲ. ನಿರ್ಮಾಣದಲ್ಲಿ ತೊಡಗಿಸಿಕೊಂಡಿದ್ದ ಪವನ್, ಹಿಂದಿಯಲ್ಲಿ ‘ಅವಸ್ತಿ ವರ್ಸಸ್ ಅವಸ್ತಿ’ ಎಂಬ ಚಿತ್ರ ನಿರ್ದೇಶನದಲ್ಲಿ ತೊಡಗಿಸಿಕೊಂಡಿದ್ದರು. ಪರಂಬ್ರತಾ ಚಟ್ಟೋಪಾಧ್ಯಯ್, ಗೀತಾ ಬಸ್ರಾ ಮುಂತಾದವರು ಈ ಚಿತ್ರದಲ್ಲಿ ನಟಿಸಿದ್ದು, ಚಿತ್ರ ಇನ್ನಷ್ಟೇ ಬಿಡುಗಡೆಯಾಗಬೇಕಿದೆ.
ಎಚ್.ಡಿ.ಕೋಟೆ : ತಾಲ್ಲೂಕಿನ ಕ್ಯಾತನಹಳ್ಳಿ, ಆಲನಹಳ್ಳಿ, ಜಿ. ಬಿ. ಸರಗೂರು ವ್ಯಾಪ್ತಿಯ ಐದು ಕೆರೆಗಳಿಗೆ ನೀರು ತುಂಬಿಸಲು ಅಧಿಕಾರಿಗಳು ನಿರ್ಲಕ್ಷಿ…
ಮೈಸೂರಿನ ರಾಮಕೃಷ್ಣನಗರದಲ್ಲಿರುವ ಸುಯೋಗ್ ಆಸ್ಪತ್ರೆ ಎದುರಿನ ರಸ್ತೆಯು ಸಂಪೂರ್ಣ ಹದಗೆಟ್ಟಿದೆ. ಈ ರಸ್ತೆಯಲ್ಲಿ ಎಲ್ಲೆಡೆ ದೊಡ್ಡ ದೊಡ್ಡ ಗುಂಡಿಗಳು ನಿರ್ಮಾಣವಾಗಿದ್ದು,…
ಇತ್ತೀಚಿನ ದಿನಗಳಲ್ಲಿ, ಟೂತ್ ಪೇಸ್ಟ್‌ಗಳಲ್ಲಿ ತಂಬಾಕು ಮತ್ತು ನಿಕೋಟಿನ್ ಅಂಶ ಪತ್ತೆಯಾಗಿದ್ದು, ಇದರ ಸೇವನೆಯಿಂದ ಹಲವು ಮಕ್ಕಳು ತೊಂದರೆಗೊಳಗಾಗಿರುವ ಘಟನೆಗಳು…
ಮೈಸೂರಿನ ಕುವೆಂಪುನಗರದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ (ಸೆಸ್ಕ್) ರಸ್ತೆ, ಗದ್ದಿಗೆ ರಸ್ತೆ, ವಿಶ್ವಮಾನವ ಜೋಡಿ ರಸ್ತೆ, ವಿದ್ಯಾರಣ್ಯಪುರಂ -…
ಆಂದ್ರದಲ್ಲಿನ ಬಿಜೆಪಿ ನೇತೃತ್ವದ ಎನ್ ಡಿಎ ಸರ್ಕಾರ ನಾಲ್ಕು ವರ್ಷಗಳ ಹಿಂದೆ ಜಾರಿಗೆ ತಂದ ನೂತನ ಶಿಕ್ಷಣ ನೀತಿಯನ್ನು ಪರಿಣಾಮಕಾರಿಯಾಗಿ…
ತಿ.ನರಸೀಪುರ : ಬೈಕ್ ಗೆ ಎದುರಿಗೆ ವೇಗವಾಗಿ ಬಂದ ಲಾರಿಯೊಂದು ಡಿಕ್ಕಿಯಾದ ಪರಿಣಾಮ ಯುವಕನೋರ್ವ ಸ್ಥಳದಲ್ಲಿಯೇ ಮೃತಪಟ್ಟಿ ಘಟನೆ ತಾಲೂಕಿನ…