ಬೆಂಗಳೂರು: ಪುನೀತ್ ರಾಜಕುಮಾರ್ 50ನೇ ಜನ್ಮದಿನದ ಪ್ರಯುಕ್ತ ರೀ-ರಿಲೀಸ್ ಆದ ʼಅಪ್ಪುʼ ಸಿನಿಮಾ ನೋಡಲು ವೀರೇಶ್ ಚಿತ್ರಮಂದಿರಕ್ಕೆ ಬಂದ ಸ್ಯಾಂಡಲ್‌ವುಡ್ ಕ್ವೀನ್ ರಮ್ಯ, ಸಿನಿಮಾಗಳ ಮೂಲಕ ಪುನೀತ್ ಜೀವಂತವಾಗಿದ್ದಾರೆ ಎಂದು ಹೇಳಿದ್ದಾರೆ.
ʼಅಪ್ಪುʼ ಸಿನಿಮಾ ರಿಲೀಸ್ ಆದಾಗ ಥಿಯೇಟರ್‌ಗೆ ಬಂದು ನೋಡಿದ ಆ ಹಳೆಯ ನೆನಪೆಲ್ಲಾ ಈಗ ಬರುತ್ತಿದೆ.
ಇದನ್ನೆಲ್ಲಾ ನೋಡಿದರೆ ಅಪ್ಪು ಇಲ್ಲ ಅಂತ ನಂಬೋಕೆ ಆಗುತ್ತಿಲ್ಲ. ಆದರೆ, ಸಿನಿಮಾದ ಮೂಲಕ ಅವರು ನಮ್ಮ ಮಧ್ಯ ಜೀವಂತವಾಗಿದ್ದಾರೆ ಎಂದು ಸ್ಮರಿಸಿದ್ದಾರೆ.
ಅಪ್ಪು ಸಿನಿಮಾ ರಿಲೀಸ್ ಅಗಿ 23 ವರ್ಷಗಳಾಗಿವೆ. ಮೊದಲ ಬಾರಿ ʼಅಪ್ಪುʼ ಸಿನಿಮಾ ನೋಡಿದಾಗ ನಾನು ಕೂಡ ಅಭಿಮಾನಿಯಾಗಿ ಹೋಗಿ ಸಿನಿಮಾ ನೋಡಿದ್ದೆ, ನಂತರ ಪುನೀತ್ ಜೊತೆ ನಾನು ಕೂಡ ಸಿನಿಮಾ ಮಾಡಿದ್ದೇನೆ. ಈಗ ಆ ಚಿತ್ರಗಳನ್ನು ನೋಡಿದಾಗ ಎಲ್ಲವೂ ನೆನಪಾಗುತ್ತದೆ ಎಂದರು.
ಇನ್ನೂ ಪುರಿ ಜಗನ್ನಾಥ ʼಅಪ್ಪುʼ ನಿರ್ದೇಶನ ಮಾಡಿದ್ದು, ಪುನೀತ್‌ಗೆ ನಾಯಕಿಯಾಗಿ ರಕ್ಷಿತಾ ನಟಿಸಿದ್ದರು. ಈ ಸಿನಿಮಾಗೆ ಪಾರ್ವತಮ್ಮ ರಾಜಕುಮಾರ್ ಹಣ ಹೂಡಿದ್ದರು. 2002ರಲ್ಲಿ ಈ ಸಿನಿಮಾ ರಿಲೀಸ್ ಆಗಿ ಯಶಸ್ವಿ ಪ್ರದರ್ಶನ ಕಂಡಿತ್ತು.
ಮಳೆ ಸರಿಯಾಗಿ ಆಗದೆ ಜಲವಿದ್ಯುತ್ ಉತ್ಪಾದನೆ ಕಡಿಮೆಯಾಗಿ ವಿದ್ಯುತ್ ಅಭಾವ ಎದುರಾಗಿರುವುದು ನಿಜ. ಆದರೆ ಯಾವುದೇ ಮುನ್ಸೂಚನೆ ಇಲ್ಲದೆ ಇದ್ದಕ್ಕಿದ್ದಂತೆ…
ಮೈಸೂರು ಮಹಾ ನಗರಪಾಲಿಕೆ ವತಿಯಿಂದ ಕಲಾಮಂದಿರದಲ್ಲಿ ಆಯೋಜಿಸಿದ್ದ ಪೌರ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮದಲ್ಲಿ, ಮೈಸೂರು ಸ್ವಚ್ಛ ನಗರಿಯಾಗಲು ಪೌರ ಕಾರ್ಮಿಕರ…
ಸೆಪ್ಟೆಂಬರ್ ಕೊನೆಯಲ್ಲಿ ಆರ್ಥಿಕ ವರ್ಷದ ಅರ್ಧವಾರ್ಷಿಕ ಲೆಕ್ಕಪತ್ರ ಮುಕ್ತಾಯಗೊಳಿಸುವ ಅತ್ಯಂತ ನಿರ್ಣಾಯಕ ಸಮಯದಲ್ಲಿ ಬ್ಯಾಂಕ್ ಒಕ್ಕೂಟಗಳು (ಯುಎಫ್ಬಿ) ಮೂರು ದಿನಗಳ…
ವೈಡ್ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ದೆಹಲಿ ಸಹಜ ವಿಳಾಸವಾಗಿತ್ತು. ದೇಶದ…
ಕೆ.ಬಿ.ರಮೇಶನಾಯಕ ಕರ್ನಾಟಕ ರಾಜ್ಯದ ಗತವೈಭವ, ದೇಶದ ಅಖಂಡತೆ ಬಿಂಬಿಸುವ ಮಾದರಿಗಳ ಸವಾರಿ ೩೧ ಜಿಲ್ಲೆಗಳ ಬದಲಿಗೆ ಆಯ್ದ ೧೫ ಜಿಲ್ಲೆಗಳ…