ಮೈಸೂರು: ಕರ್ನಾಟಕ ರತ್ನ ದಿ. ಪುನಿತ್ ರಾಜ್‌ಕುಮಾರ್ ಅವರ 49ನೇ ಹುಟ್ಟುಹಬ್ಬವನ್ನು ಅವರ ಅಭಿಮಾನಿಗಳು ನಗರದಾದ್ಯಂತ ಸಡಗರ ಸಂಭ್ರಮದಿಂದ ಆಚರಿಸಿದ್ದಾರೆ.
ನಗರದ ಪ್ರಮುಖ ಬೀದಿಗಳಲ್ಲಿ ಪುನೀತರಿಗೆ ಗೌರವ ನಮನ ಸಲ್ಲಿಸಿರುವ ಅಭಿಮಾನಿಗಳು, ನಟನ ಹೆಸರಿನಲ್ಲಿ ಸಾರ್ವಜನಿಕರಿಗೆ ಅನ್ನದಾನ ಮಾಡಿದ್ದಾರೆ.
ವಿಶ್ವದಾಖಲೆಯ ಆರ್ಟಿಸ್ಟ್ ಪುನೀತ್ ಕುಮಾರ್, ರಂಗೋಲಿ ಕಲೆಗಾರ್ತಿ ಲಕ್ಷ್ಮೀ ಮತ್ತು ತಂಡದಿಂದ ಅರಮನೆಯ ಕೋಟೆ ಆಂಜನೇಯ ದೇವಾಲಯದ ಮುಂಭಾಗ ರಂಗೋಲಿಯಿಂದ ಪುನೀತ್ ರಾಜ್‌ಕುಮಾರ್ ಅವರ ಚಿತ್ರವನ್ನು ಬಿಡಿಸಿದ್ದಾರೆ.
ಇನ್ನು ಮೈಸೂರಿನ ಅಗ್ರಹಾರ ವೃತ್ತದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಪುನೀತ್ ಅವರ 50 ಅಡಿ ಕಟೌಟ್ ನಿರ್ಮಿಸಿ ಅಭಿಮಾನ ಮೆರೆದಿದ್ದಾರೆ.
ಪುನೀತ್ ರಾಜ್‌ಕುಮಾರ್ ಗೆ ದೇಶ ಮಾತ್ರವಲ್ಲದೇ ವಿದೇಶದಲ್ಲಿಯೂ ಫ್ಯಾನ್ಸ್ ಫಾಲೋಯಿಂಗ್ ಇರುವುದು ಗೊತ್ತೇಯಿದೆ. ಅದರಂತೆ ಅಮೆರಿಕದ ನ್ಯೂಯಾರ್ಕ್ ಸಿಟಿಯ ಎಂಟರ್‌ಟೈನ್‌ಮೆಂಟ್ ಹಬ್ ಎಂದು ಕರೆಯುವ ಟೈಮ್ ಸ್ಕ್ವೇರ್‌ನಲ್ಲಿ ಕನ್ನಡ ಚಿತ್ರ ನಟ ದಿ. ಪುನೀತ್ ರಾಜ್‌ಕುಮಾರ್ ಅಭಿಮಾನಿಗಳು ಅವರ ಹುಟ್ಟುಹಬ್ಬವನ್ನು ಅದ್ಧೂರಿಯಾಗಿ ಆಚರಿಸಿದ್ದಾರೆ. ಟೈಮ್ ಸ್ಕ್ವೇರ್ ಮೇಲೆ ಪುನೀತ್ ರಾಜ್‌ಕುಮಾರ್ ಮತ್ತು ಅವರ ಪತ್ನಿ ಅಶ್ವಿನಿ ಪುನೀತ್ ರಾಜ್‌ಕುಮಾರ್ ಅವರ ಫೋಟೋ ಹಾಕಿ ಸಂಭ್ರಮಿಸಲಾಗಿದೆ. ಈ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ.
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ತಮ್ಮ ಫೇಸ್ ಬುಕ್‌ನಲ್ಲಿ ಪುನೀತ್ ಅವರ ಫೋಟೋ ಒಂದನ್ನು ಹಾಕಿ ಶುಭ ಕೋರಿದ್ದು, ಪುನೀತ್ ರಾಜ್‌ಕುಮಾರ್ ಅವರ ಸಾಮಾಜಿಕ ಕಾರ್ಯಗಳು ಬಹಳಷ್ಟು ಜನರಿಗೆ ಪ್ರೇರಣೆಯಾಗಿವೆ ಎಂದು ಸಾಲುಗಳನ್ನು ಬರೆದುಕೊಂಡಿದ್ದಾರೆ.
ಹೊಸದಿಲ್ಲಿ : ಕೇಂದ್ರ ಸರ್ಕಾರದ ವಾರ್ತಾ ಮತ್ತು ಪ್ರಸಾರ ಸಚಿವಾಲಯದ ಅಧೀನದಲ್ಲಿ ಮೈಸೂರಿನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕೇಂದ್ರೀಯ ಸಂಪರ್ಕ ಬ್ಯೂರೋ…
ಹೊಸದಿಲ್ಲಿ : ಉನ್ನಾವೋ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಮತ್ತು ಆಕೆಯ ತಾಯಿ ಬುಧವಾರ ಸಂಜೆ ಕಾಂಗ್ರೆಸ್‌ನ ರಾಹುಲ್ ಗಾಂಧಿ ಅವರನ್ನು…
ಹೊಸದಿಲ್ಲಿ : 2017ರ ಉನ್ನಾವೋ ಅತ್ಯಾಚಾರ ಪ್ರಕರಣದ ಪ್ರಮುಖ ಆರೋಪಿ ಕುಲದೀಪ್ ಸಿಂಗ್ ಸೆಂಗಾರ್‌ಗೆ ಜಾಮೀನು ದೊರೆತಿರುವುದನ್ನು ವಿರೋಧಿಸಿ ಸಂತ್ರಸ್ತೆ…
ಬೆಂಗಳೂರು : ಮಾರ್ಕ್ʼ ಸಿನಿಮಾದ ಪ್ರೀ-ರಿಲೀಸ್ ಈವೆಂಟ್‌ನಲ್ಲಿ ಕಿಚ್ಚ ಸುದೀಪ್ ಹೇಳಿದ ಮಾತೊಂದು ಸೋಶಿಯಲ್ ಮೀಡಿಯಾದಲ್ಲಿ ಚರ್ಚೆಗೆ ಕಾರಣವಾಗಿದ್ದು, ಈ…
ಚಾಮರಾಜನಗರ : ಅನ್ನದಾತರಾಗಿರುವ ರೈತರ ಬಗ್ಗೆ ಆತ್ಮೀಯ ಕಾಳಜಿಯಿದ್ದು, ಅವರ ಹಿತ ಕಾಪಾಡುವ ನಿಟ್ಟಿನಲ್ಲಿ ಸರ್ಕಾರ ಪ್ರಾಮಾಣಿಕ ಕೆಲಸವನ್ನು ಮಾಡುತ್ತಿದೆ…
ಬೆಂಗಳೂರು : ಸರ್ಕಾರಿ ಆಯುರ್ವೇದ ವೈದ್ಯಕೀಯ ಕಾಲೇಜು ಅಧಿಕೃತ ಅಧಿಸೂಚನೆಯ ಮೂಲಕ ಪ್ರಾಧ್ಯಾಪಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು…