ಬೆಂಗಳೂರು: ಮಾ.17 ರಂದು ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಹುಟ್ಟು ಹಬ್ಬವಿದ್ದು ಅದರ ಬೆನ್ನಲ್ಲೇ ಅಪ್ಪು ನಟನೆಯ ಆಲ್‌ಟೈಮ್ ಬ್ಲಾಕ್‌ಬಸ್ಟರ್ ಜಾಕಿ ಚಲನಚಿತ್ರವನ್ನು ಕೆಆರ್‌ಜಿ ಸ್ಟುಡಿಯೋ ಸುಮಾರು 120ಕ್ಕೂ ಹೆಚ್ಚು ಸ್ಕ್ರೀನ್ ಗಳಲ್ಲಿ ಮರು ಬಿಡುಗಡೆ ಮಾಡಿದೆ. ಈ ಸಿನಿಮಾವನ್ನು ಬಹುತೇಕ ಹೊಸ ಚಲನಚಿತ್ರವನ್ನು ರಿಲೀಸ್ ಮಾಡಿದಂತೆ ರಿಲೀಸ್ ಮಾಡಲಾಗಿದ್ದು, ಎಲ್ಲ ಕಡೆ ಉತ್ತಮವಾದ ಪತ್ರತಿಕ್ರಿಯೆ ಸಿಕ್ಕಿರುವುದು ಸಹಜವಾಗಿ ಖುಷಿ ಕೊಟ್ಟಿದೆ.
ಕೆಆರ್‌ಜಿ ಸ್ಟುಡಿಯೋದ ಕಾರ್ತಿಕ್ ಮತ್ತು ಅಪ್ಪುವಿನ ನಡುವೆ ಉತ್ತಮ ಭಾಂದವ್ಯವನ್ನು ಹೊಂದಿದ್ದು, ಈ ಚಿತ್ರವನ್ನು ಅದ್ದೂರಿಯಾಗಿ ವಿತರಣೆ ಮಾಡಿದ್ದಾರೆ. ಸೂರಿ ನಿರ್ದೇಶನದ ಈ ಚಿತ್ರ ಬೆಳಗ್ಗೆ 4.30ರಿಂದಲೇ ಪ್ರದರ್ಶನವನ್ನು ಆರಂಭಿಸಿದೆ. ಇದಕ್ಕೆಂದು ಅಭಿಮಾನಿಗಳು ಚಿತ್ರಮಂದಿರಗಳನ್ನು ಸಿಂಗಾರಗೊಳಿಸಿ, ಅಪ್ಪು ಕಟ್‌ಔಟ್‌ಗೆ ಹಾರ ಹಾಕಿ ಖುಷಿ ಪಟ್ಟಿದ್ದಾರೆ.
ಇನ್ನು ಪತಿ ನಟಿಸಿದ ಚಿತ್ರ ನೋಡುವುದಕ್ಕೆ ಅಶ್ವಿನಿ ಪುನೀತ್ ರಾಜ್‌ಕುಮಾರ್ ಅವರು ನಗರದ ಗಾಂಧಿನಗರದಲ್ಲಿರುವ ನರ್ತಕಿ ಚಿತ್ರಮಂದಿರಕ್ಕೆ ಭೇಟಿ ನೀಡಿದ್ದಾರೆ. ಈ ಸಂದರ್ಭದಲ್ಲಿ ಅಶ್ವಿನಿಯವರು ತೆರೆಯ ಮೇಲೆ ಪುನೀತ್ ರಾಜ್ ಕುಮಾರ್ ಅವರನ್ನು ನೋಡಿ ಭಾವುಕರಾಗಿದ್ದು, ಈ ದೃಶ್ಯವು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ವೇಳೆ ದೊಡ್ಮನೆಯ ವಿನಯ್ ರಾಜ್ ಕುಮಾರ್, ಧೀರೇನ್ ಕುಮಾರ್, ಧನ್ಯರಾಮ್ ಕುಮಾರ್ ಮತ್ತು ವಿತರಕ ಕಾರ್ತಿಕ್ ಗೌಡ ಸೇರಿದಂತೆ ಆಪ್ತರೊಡನೆ ಸಿನಿಮಾ ವೀಕ್ಷಿಸಿದ್ದಾರೆ.
ಬೆಂಗಳೂರು: ಕಾಂಗ್ರೆಸ್ ಸರ್ಕಾರದಿಂದ ಕನ್ನಡದ ಉದ್ಧಾರ ಸಾಧ್ಯವೇ ಇಲ್ಲ, ಕನ್ನಡ ಶಾಲೆಗಳ ಅಸ್ತಿತ್ವ ಉಳಿಯುವ ಭರವಸೆ ಇಲ್ಲ ಎಂದು ಬಿಜೆಪಿ…
ಮಂಡ್ಯ: ರಾಷ್ಟ್ರದ ಜಿಡಿಪಿಯಲ್ಲಿ ಕೃಷಿ ಪಾಲು ಶೇ.೨೦ ರಷ್ಟು ಇದ್ದು, ಶೇ.೬೦ ರಷ್ಟು ಜನರು ಕೃಷಿ ಅವಲಂಭಿಸಿದ್ದಾರೆ. ಆದ್ದರಿಂದ ರಾಷ್ರ್ಟದ…
ಕುವೈತ್/ನವದೆಹಲಿ: 26ನೇ ಅರೇಬಿಯನ್ ಗಲ್ಫ್ ಉದ್ಘಾಟನಾ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭಾಗವಹಿಸಿದ್ದು, ಕುವೈತ್ ದೊರೆ ಶೇಖ್ ಮಿಶಾಲ್…
371 J ಕೊಡುಗೆಯಾಗಿ 371 ಬೆಡ್ ಗಳ ಆಸ್ಪತ್ರೆ: ಸಿಎಂ ಕಲಬುರಗಿ: ಕಲ್ಯಾಣ ಕರ್ನಾಟಕಕ್ಕೆ ಪ್ರತ್ಯೇಕ ಸಚಿವಾಲಯ ರಚಿಸುವ ಉದ್ದೇಶ…
‘ಅಂಬೇಡ್ಕರ್ ಅಂಬೇಡ್ಕರ್ ಎನ್ನುವುದು ಈಗ ಒಂದು ಫ್ಯಾಶನ್ ಆಗಿಬಿಟ್ಟಿದೆ. ಹೀಗೆ ಹೇಳುವವರು ಭಗವಂತನ ಹೆಸರನ್ನಾದರೂ ಇಷ್ಟು ಬಾರಿ ಸ್ಮರಿಸಿದ್ದರೆ ಅವರಿಗೆ…
ರಸ್ತೆ ಬದಿಯೇ ಕಸದ ವಾಹನ ನಿಲುಗಡೆಗೊಳಿಸಬೇಕಾದ ಪರಿಸ್ಥಿತಿ; ದುರ್ವಾಸನೆಯಿಂದ ಸಾರ್ವಜನಿಕರಿಕೆ ಕಿರಿಕಿರಿ ಕೃಷ್ಣ ಸಿದ್ದಾಪುರ ಸಿದ್ದಾಪುರ: ಪಟ್ಟಣದಲ್ಲಿ ಕಸ ವಿಲೇವಾರಿ…