Mysore
23
clear sky

Social Media

ಬುಧವಾರ, 17 ಡಿಸೆಂಬರ್ 2025
Light
Dark

ಪುನೀತ್‍ ನೆನಪಲ್ಲಿ 50 ಅಡಿ ಕಟೌಟ್‍; ಇದು ‘ಅಪ್ಪು ಅಭಿಮಾನಿ’ಯ ಕಥೆ

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷ ನರಸಿಂಹಲು ಅವರ ಮಗ ರವಿಕಿರಣ್‍ ಈ ಹಿಂದೆ ‘ತಾರಕಾಸುರ’ ಎಂಬ ಚಿತ್ರದಲ್ಲಿ ನಾಯಕನಾಗಿ ಕಾಣಿಸಿಕೊಂಡಿದ್ದರು. ಈಗ ‘ಅಪ್ಪು ಅಭಿಮಾನಿ’ಯಾಗಿ ಅವರು ಹೊಸ ಚಿತ್ರವೊಂದರ ಮೂಲಕ ಬರುತ್ತಿದ್ದಾರೆ.

‘ಅಪ್ಪು ಅಭಿಮಾನಿ’ ಎಂಬ ಹೆಸರೇ ಹೇಳುವಂತೆ, ಈ ಚಿತ್ರದಲ್ಲಿ ರವಿಕಿರಣ್, ಪುನೀತ್‍ ಅಭಿಮಾನಿಯಾಗಿ ಕಾಣಿಸಿಕೊಂಡಿದ್ದಾರೆ. ಅಪ್ಪು ಅಭಿಮಾನಿಯೊಬ್ಬ ಜೀವನದಲ್ಲಿ ಏನೆಲ್ಲಾ ಸಾಧಿಸುತ್ತಾನೆ ಎಂದು ಸಾರುವ ಈ ಚಿತ್ರದಲ್ಲಿ ರವಿಕಿರಣ್‍ ‍ಜೊತೆಗೆ ರಾಘವೇಂದ್ರ ರಾಜಕುಮಾರ್, ಶರತ್‌ ಲೋಹಿತಾಶ್ವ, ಸುಮನ್, ಚಿದಾನಂದ್, ಥ್ರಿಲ್ಲರ್‌ ಮಂಜು, ಶಿವಪ್ಪ ಕುಡ್ಲೂರು ಮುಂತಾದವರು ನಟಿಸುತ್ತಿದ್ದಾರೆ.

ಬಿಡುಗಡೆಗೆ ಸಿದ್ಧವಾಗುತ್ತಿರುವ ಈ ಚಿತ್ರದ ಪ್ರಚಾರದ ಮೊದಲ ಹಂತವಾಗಿ ಇತ್ತೀಚೆಗೆ ಚಿತ್ರತಂಡವು ನರ್ತಕಿ ಚಿತ್ರಮಂದಿರದ ಎದುರು ಪುನೀತ್‍ ಅವರ 50 ಅಡಿ ಕಟೌಟ್‍ ನಿಲ್ಲಿಸಿದೆ. ಪುನೀತ್‍ ನಾಯಕನಾಗಿ ಅಭಿನಯಿಸಿರುವ ಮೊದಲ ಚಿತ್ರ ‘ಅಪ್ಪು’ ಇತ್ತೀಚೆಗೆ ಮರುಬಿಡುಗಡೆ ಮಾಡಲಾಗಿದೆ. ಈ ಸಂದರ್ಭದಲ್ಲಿ ‘ಅಪ್ಪು ಅಭಿಮಾನಿ’ ಚಿತ್ರತಂಡದ ವತಿಯಿಂದ ‘ಅಪ್ಪು ಅಭಿಮಾನಿ’ ಚಿತ್ರದ 50 ಅಡಿ ಕಟೌಟ್‍ ನಿಲ್ಲಿಸಲಾಗಿದೆ. ಚಿತ್ರದಲ್ಲಿ ನಾಯಕ ರವಿ ಕಿರಣ್, ಪುನೀತ್‌ ರಾಜಕುಮಾರ್ ಅವರ ಅಪ್ಪಟ ಅಭಿಮಾನಿಯಾಗಿರುವುದರಿಂದ ಕಟ್‌ಔಟ್‌ನಲ್ಲಿ ಅಪ್ಪು ನಂತರ ನಾಯಕನ ಚಿತ್ರವೂ ಇದೆ.

ಈ ಸಂದರ್ಭದಲ್ಲಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ನರಸಿಂಹಲು, ರಾಘವೇಂದ್ರ ರಾಜಕುಮಾರ್, ಸಾ.ರಾ. ಗೋವಿಂದು, ಎಂ.ಎನ್. ಸುರೇಶ್ ಮುಂತಾದವರು ಹಾಜರಿದ್ದರು.

ಅಕ್ಷಯ ಮೂವಿ ಫ್ಯಾಕ್ಟರಿ ಸಂಸ್ಥೆ ನಿರ್ಮಿಸಿರುವ ಈ ಚಿತ್ರವನ್ನು ಡಾ. ರೆಡ್ಡಿ ನಿರ್ದೇಶನ ಮಾಡಿದ್ದಾರೆ. ಶೇಖ್ ಮುನೀರ್ ಪಾಷಾ ಕಥೆ, ಮಣಿಕಾಂತ್ ಕದ್ರಿ ಸಂಗೀತ ಈ ಚಿತ್ರಕ್ಕಿದೆ.

Tags:
error: Content is protected !!