nanu matu gunda
ನಾಯಿ ಮತ್ತು ಅದರ ಮಾಲೀಕನ ನಡುವಿನ ಅವಿನಾಭಾವ ಸಂಬಂಧದ ಕಥೆಯಿದ್ದ ಚಿತ್ರ ‘ನಾನು ಮತ್ತು ಗುಂಡ’ ಕೆಲವು ವರ್ಷಗಳ ಹಿಂದೆ ಬಿಡುಗಡೆಯಾಗಿ ಜನರ ಮೆಚ್ಚುಗೆಗೆ ಪಾತ್ರವಾಗಿತ್ತು. ಶಿವರಾಜ್ ಕೆ.ಆರ್.ಪೇಟೆ ನಾಯಕನಾಗಿ ನಟಿಸಿದ ಆ ಚಿತ್ರವನ್ನು ರಘು ಹಾಸನ್ ನಿರ್ಮಿಸಿದ್ದರು. ಈಗ ರಘು, ‘ನಾನು ಮತ್ತು ಗುಂಡ’ ಚಿತ್ರದ ಮುಂದುವರೆದ ಭಾಗವಾದ ‘ನಾನು ಮತ್ತು ಗುಂಡ 2’ ಚಿತ್ರ ನಿರ್ಮಿಸಿ-ನಿರ್ದೇಶಿಸಿದ್ದು, ಆ ಚಿತ್ರವೀಗ ಸೆಪ್ಟೆಂಬರ್ 5ರಂದು ಈ ಚಿತ್ರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.
ಅದಕ್ಕೂ ಮೊದಲು ಚಿತ್ರಕ್ಕಾಗಿ ಡಾ.ವಿ. ನಾಗೇಂದ್ರ ಪ್ರಸಾದ್ ರಚಿಸಿ, ವಿಜಯಪ್ರಕಾಶ್ ಹಾಡಿರುವ ‘ಓಂ ಶಿವಾಯ, ನಮೋ ಶಿವಾಯ…’ ಎಂಬ ಹಾಡು ಇತ್ತೀಚೆಗೆ ಬಿಡುಗಡೆಯಾಯಿತು. ಈ ಚಿತ್ರದಲ್ಲಿ ರಾಕೇಶ್ ಆಡಿಗ ಮತ್ತು ರಚನಾ ಇಂದರ್ ನಾಯಕ-ನಾಯಕಿಯಾಗಿ ನಟಿಸಿದ್ದಾರೆ. ಈ ಚಿತ್ರಕ್ಕೆ ಆರ್.ಪಿ. ಪಟ್ನಾಯಕ್ ಸಂಗೀತ ಸಂಯೋಜಿಸಿದ್ದಾರೆ.
ಈ ಚಿತ್ರದ ಕುರಿತು ಮಾತನಾಡುವ ರಘು ಹಾಸನ್, ‘ಹೊಡಿಬಡಿ ಕಥೆಗಳನ್ನು ಬಿಟ್ಟು ಭಾವನಾತ್ಮಕವಾಗಿ ಏನಾದರೂ ಮಾಡಬೇಕೆಂದಾಗ ಹುಟ್ಟಿದ್ದೇ ಗುಂಡನ ಕಥೆ. ಸೆನ್ಸಾರ್ ಮಂಡಳಿ ಚಿತ್ರಕ್ಕೆ ಯಾವುದೇ ಕಟ್ ಸೂಚಿಸದೆ ‘ಯು/ಎ’ ಕೊಟ್ಟಿದೆ. ಮೊದಲ ಚಿತ್ರದಲ್ಲಿ ಶಂಕರ ನಿಧನನಾದ ಮೇಲೆ ಆತನ ಮಗನಿಂದ ಕಥೆ ಮುಂದುರೆಯುತ್ತದೆ. ರಾಕೇಶ್ ಅಡಿಗ, ಶಂಕರನ ಮಗನಾಗಿ ನಟಿಸಿದ್ದು, ಆತನಿಗೆ ನಾಯಿಯೇ ಪ್ರಪಂಚ. ಸಾಮಾಜಿಕ ಕಳಕಳಿ ಜೊತೆಗೆ ದೈವಿಕ ಅಂಶಗಳಿರುವ ಈ ಚಿತ್ರಕ್ಕೆ ಊಟಿ, ಶಿವಮೊಗ್ಗ, ತೀರ್ಥಹಳ್ಳಿ, ಬಾಳೆಹೊನ್ನೂರು, ಬೆಂಗಳುರು ಸುತ್ತಮುತ್ತ ಚಿತ್ರದ ಚಿತ್ರೀಕರಣ ನಡೆಸಲಾಗಿದೆ’ ಎಂದರು.
‘ನಾನು ಮತ್ತು ಗುಂಡ 2’ ಚಿತ್ರಕ್ಕೆ ಆರ್.ಪಿ. ಪಟ್ನಾಯಕ್ ಸಂಗೀತ ಸಂಯೋಜಿಸಿದ್ದು, ತನ್ವಿಕ್ ಛಾಯಾಗ್ರಹಣ ಮಾಡಿದ್ದಾರೆ.
ಹೊಸದಿಲ್ಲಿ : ಮಧ್ಯಪ್ರಾಚ್ಯದ ಸಂಘರ್ಷದಿಂದ ಉಂಟಾಗಿರುವ ಎಲ್‌ಪಿಜಿ ಸಿಲಿಂಡರ್ ಕೊರತೆ ಬಗ್ಗೆ ಸಾರ್ವಜನಿಕರಲ್ಲಿ ಉದಿಸಿದ ಆತಂಕದ ನಡುವೆ, ಕೇಂದ್ರ ಸರ್ಕಾರವು…
ಬೆಂಗಳೂರು : ಬಹುನಿರೀಕ್ಷಿತ 2026ನೇ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟಿ-20 ಕ್ರಿಕೆಟ್ ಟೂರ್ನಿಯ ಮೊದಲ ಹಂತದ ವೇಳಾಪಟ್ಟಿಯನ್ನು…
ಮೈಸೂರು : ಸಂಶೋಧನೆ ಮಾಡುವಾಗ ವಿದ್ಯಾರ್ಥಿಗಳು ತಮ್ಮ ಸಂಪೂರ್ಣ ಪರಿಶ್ರಮದಿಂದ ಸಂಶೋಧನೆಗಳನ್ನು ಸಿದ್ಧಪಡಿಸಬೇಕು, AI ತಂತ್ರಜ್ಞಾನದ ಕಡೆ ಮೊರೆಹೋಗುವುದನ್ನು ಕಡಿಮೆ…
ಸಾಲಿಗ್ರಾಮ : ತನ್ನ ಜಮೀನಿಗೆ ಸಂಬಂಧಿಸಿದ ಖಾತೆಯನ್ನು ಮಾಡಿಕೊಡದೆ ಸಾಲಿಗ್ರಾಮ ನಾಡಕಚೇರಿ ಅವರು ಸತಾಯಿಸುತ್ತಿದ್ದಾರೆ ಎಂದು ಮನನೊಂದು ಸಾಲಿಗ್ರಾಮದ ನಾಡ…
ಹೊಸದಿಲ್ಲಿ : ಪಶ್ಚಿಮ ಏಷ್ಯಾದ ಸಂಘರ್ಷ ಪೀಡಿತ ಸಮುದ್ರ ವಲಯದಲ್ಲಿ ವ್ಯಾಪಾರಿ ಹಡಗುಗಳ ಮೇಲೆ ನಡೆದ ದಾಳಿಯಲ್ಲಿ ಇಬ್ಬರು ಭಾರತೀಯರು…
ಗುಂಡ್ಲುಪೇಟೆ : ಪಟ್ಟಣದ ಹೊರವಲಯದ ವಿಜಯಪುರ ಅಮಾನಿ ಕೆರೆಯ ಬಳಿ ವ್ಯಕ್ತಿಯೊಬ್ಬ ಬರ್ಬರವಾಗಿ ಕೊಲೆಯಾಗಿರುವ ಘಟನೆ ನಡೆದಿದೆ. ತಾಲ್ಲೂಕಿನ ಮೂಖಹಳ್ಳಿ…