ನಾಲ್ಕು ವರ್ಷಗಳ ಹಿಂದೆ ಬಿಡುಗಡೆಯಾದ ‘ಮತ್ತೆ ಉದ್ಭವ’ ಚಿತ್ರದ ನಂತರ ಕೋಡ್ಲು ರಾಮಕೃಷ್ಣ ಸುದ್ದಿಯಲ್ಲಿರಲಿಲ್ಲ. ಈಗ ಅವರು ಸದ್ದಿಲ್ಲದೆ ಒಂದು ಚಿತ್ರ ಮಾಡಿ ಮುಗಿಸಿದ್ದು, ಆ ಚಿತ್ರ ಸದ್ಯದಲ್ಲೇ ಬಿಡುಗಡೆಯಾಗಲದೆ. ಅದೇ ‘ಶಾನುಭೋಗರ ಮಗಳು’.
ಕಾದಂಬರಿ ಆಧಾರಿತ ಚಿತ್ರಗಳನ್ನು ನಿರ್ದೇಶಿಸುವಲ್ಲಿ ಹೆಸರುವಾಸಿಯಾದ ಮತ್ತು ಇದಕ್ಕೂ ಹಲವು ಕಾದಂಬರಿಗಳನ್ನು ತೆರೆಗೆ ತಂದಿರುವ ಕೋಡ್ಲು, ಇದೀಗ ಭಾಗ್ಯ ಕೃಷ್ಣಮೂರ್ತಿ ಅವರ ಕಾದಂಬರಿಯನ್ನಾಧರಿಸಿ ‘ಶಾನುಭೋಗರ ಮಗಳು’ ಎಂಬ ಚಿತ್ರವನ್ನು ಮಾಡಿದ್ದಾರೆ. ಈ ಚಿತ್ರವನ್ನು ವೀಕ್ಷಿಸಿರುವ ಸೆನ್ಸಾರ್ ಮಂಡಳಿಯು ಇತ್ತೀಚೆಗೆ ವೀಕ್ಷಿಸಿದ್ದು, ಚಿತ್ರಕ್ಕೆ ‘ಯು/ಎ’ ಪ್ರಮಾಣಪತ್ರವನ್ನು ನೀಡಿದೆ.
ಇದೊಂದು ಪೀರಿಯಡ್ ಚಿತ್ರವಾಗಿದ್ದು, ಟಿಪ್ಪು ಸುಲ್ತಾನ್ ಕಾಲಘಟ್ಟದಲ್ಲಿ ನಡೆಯುವ ಕಥೆಯಾಗಿದೆ. ಈ ಚಿತ್ರದಲ್ಲಿ ‘ಶಾನುಭೋಗರ ಮಗಳಾಗಿ’ ಪ್ರಜ್ವಲ್ ಪತ್ನಿ ರಾಗಿಣಿ ಚಂದ್ರನ್ ಅಭಿನಯಿಸಿದ್ದಾರೆ. ಈ ಹಿಂದೆ ರಾಗಿಣಿ, ಪುನೀತ್ ರಾಜಕುಮಾರ್ ನಿರ್ಮಾಣದ ‘ಲಾ’ ಎಂಬ ಚಿತ್ರದಲ್ಲಿ ನಟಿಸಿದ್ದರು. ಆ ಚಿತ್ರ ನೇರವಾಗಿ ಅಮೇಜಾನ್ ಪ್ರೈಮ್‍ನಲ್ಲಿ ಬಿಡುಗಡೆಯಾಗಿತ್ತು. ಈಗ ‘ಶಾನುಭೋಗರ ಮಗಳು’ ಚಿತ್ರದಲ್ಲಿ ಅವರು ನಟಿಸಿದ್ದಾರೆ. ಇನ್ನು, ನಟ ಕಿಶೋರ್ ಈ ಚಿತ್ರದಲ್ಲಿ ಟಿಪ್ಪು ಸುಲ್ತಾನ್ ಆಗಿ ಕಾಣಿಸಿಕೊಂಡಿರುವುದು ವಿಶೇಷ.
ಬೆಂಗಳೂರು, ಶ್ರೀರಂಗಪಟ್ಟಣ, ಚನ್ನಪಟ್ಟಣ, ಚಿಕ್ಕಬಳ್ಳಾಪುರ ಮುಂತಾದ ಕಡೆ ಚಿತ್ರೀಕರಣ ನಡೆದಿರುವ ಈ ಚಿತ್ರದಲ್ಲಿ ರಾಗಿಣಿ ಮತ್ತು ಕಿಶೋರ್ ಜೊತೆಗೆ ನಿರಂಜನ್ ಶೆಟ್ಟಿ, ರಮೇಶ್ ಭಟ್, ಶ್ರೀನಿವಾಸಮೂರ್ತಿ, ಸುಧಾ ಬೆಳವಾಡಿ, ವಾಣಿಶ್ರೀ, ಪದ್ಮಾ ವಾಸಂತಿ ಮುಂತಾದವರು ನಟಿಸಿದ್ದಾರೆ.
ಭುವನ್ ಫಿಲಂಸ್ ಲಾಂಛನದಲ್ಲಿ ಸಿ.ಎಂ.ನಾರಾಯಣ್ ನಿರ್ಮಿಸಿರುವ ಈ ಚಿತ್ರಕ್ಕೆ ಹಿರಿಯ ಸಂಭಾಷಣೆಕಾರ ಬಿ.ಎ. ಮಧು ಸಂಭಾಷಣೆ ರಚಿಸಿದ್ದಾರೆ. ಇನ್ನು, ಚಿತ್ರಕ್ಕೆ ಜೈ ಆನಂದ್ ಛಾಯಾಗ್ರಹಣ, ರಮೇಶ್ ಕೃಷ್ಣನ್ ಸಂಗೀತ ಮತ್ತು ಬಿ.ಎಸ್. ಕೆಂಪರಾಜ್ ಅವರ ಸಂಕಲನವಿದೆ.
ಹೊಸ ವರ್ಷದಂದು ಹಲವರು ಬಂಧು,ಬಳಗ, ಸ್ನೇಹಿತರ ಜತೆ ಸೇರಿ ಸಂಭ್ರಮಿಸಿದರು. ಆದರೆ ಸಾಂಸ್ಕ ತಿಕ ನಗರ ಮೈಸೂರಿನಲ್ಲಿ ದಾಖಲೆ ಮದ್ಯ…
ಸ್ವಾಗತಾರ್ಹ ನಡೆ! ಜಾತಿ ಮೀರಿ ಪ್ರೀತಿಸಿದರೆ ಕುಂದಲ್ಲವದು ಮರ್ಯಾದೆಗೆ ಬದಲಿಗೆ ಹೆಚ್ಚುವುದು ಮರ್ಯಾದೆ ಗೌರವ! ಜಾತಿ ಕಟ್ಟಳೆ ಮುರಿವ ಸಮತೆಯ…
ಸಾಂಸ್ಕ ತಿಕ ನಗರಿ ಮೈಸೂರಿನಲ್ಲಿ ಪೊಲೀಸ್ ಇಲಾಖೆಗೆ ಸೇರಿದ ಬ್ಯಾರಿಕೇಡ್‌ಗಳು ಬಳಕೆಯಾದ ನಂತರ ನಿರ್ಲಕ್ಷ್ಯಕ್ಕೆ ಒಳಪಡುತ್ತಿವೆ. ಅವುಗಳನ್ನು ಸುರಕ್ಷಿತವಾಗಿ ಒಂದೆಡೆ…
ಲೊಕ್ಕನಹಳ್ಳಿ ಬಳಿ ಶಾಲಾ-ಕಾಲೇಜು ವಿದ್ಯಾರ್ಥಿಗಳ ಪ್ರತಿಭಟನೆ; ಅಧಿಕಾರಿಗಳ ವಿರುದ್ಧ ಆಕ್ರೋಶ ಹನೂರು: ಒಂದೆಡೆ ಸಮರ್ಪಕ ಬಸ್ ವ್ಯವಸ್ಥೆ ಕಲ್ಪಿಸುವಂತೆ ಒತ್ತಾಯಿಸಿ ಶಾಲಾ-ಕಾಲೇಜು…
ನವೀನ್ ಡಿಸೋಜ ೧೮,೫೦೦ ಹೆಕ್ಟೇರ್ ಪ್ರದೇಶದಲ್ಲಿ ಭತ್ತ ಬೆಳೆದಿರುವ ರೈತರು; ಹವಾಮಾನ ವೈಪರೀತ್ಯದ ನಡುವೆಯೂ ಕಟಾವು ಕಾರ್ಯ ಚುರುಕು ಮಡಿಕೇರಿ:…
ಚಾಮರಾಜನಗರ: ತೀವ್ರ ಚಳಿಯಿಂದ ತತ್ತರಿಸಿದ್ದ ಜಿಲ್ಲೆಯ ಜನತೆ ಕಳೆದ ೨-೩ ದಿನಗಳಿಂದ ಎದುರಾಗಿರುವ ಮೋಡ ಕವಿದ ವಾತಾವರಣ ಮತ್ತು ಅಲ್ಲಲ್ಲಿ…