ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಕೋರ್ಟ್‌ಗೆ ಸಲ್ಲಿಸಿದ ದೋಷಾರೋಪ ಪಟ್ಟಿಯಲ್ಲಿ ರೇಣುಕಾಸ್ವಾಮಿ ಕೇವಲ ಪವಿತ್ರಾ ಗೌಡಗೆ ಮಾತ್ರವಲ್ಲದೇ ಚಂದನವನದ ಇತರೆ ಕೆಲ ನಟಿಯರಿಗೂ ಸಹ ಅಶ್ಲೀಲ ಸಂದೇಶ ಕಳುಹಿಸಿದ್ದಾನೆ ಎಂದು ಉಲ್ಲೇಖಿಸಲಾಗಿದೆ.
ಕನ್ನಡದ ಸಾಕಷ್ಟು ಚಿತ್ರಗಳಲ್ಲಿ ನಟಿಸಿ ಹೆಸರು ಮಾಡಿರುವ ರಾಗಿಣಿ ದ್ವಿವೇದಿ ಹಾಗೂ ಶುಭ ಪೂಂಜಾ ಹೆಸರು ಇಲ್ಲಿ ಕೇಳಿಬಂದಿದೆ. ಹೀಗೆ ಸುದ್ದಿಗಳು ಹರಿದಾಡಿದ ಬೆನ್ನಲ್ಲೇ ಇಬ್ಬರೂ ನಟಿಯರೂ ಪ್ರತಿಕ್ರಿಯೆ ನೀಡಿದ್ದು, ಶುಭ ಪೂಂಜಾ ಸಾಮಾಜಿಕ ಜಾಲತಾಣದಲ್ಲಿ ʼಮಾಧ್ಯಮ ಮಿತ್ರರೇ, ರೇಣುಕಾಸ್ವಾಮಿ ಪ್ರಕರಣದ ವಿಚಾರವಾಗಿ ಬೆಳಗ್ಗೆಯಿಂದ ಕರೆ ಮಾಡುತ್ತಿದ್ದೀರ ಅಂತಹವರಿಗೆ ಈ ಮೂಲಕ ಸ್ಪಷ್ಟನೆ ನೀಡುತ್ತಿದ್ದೇನೆ. ನನ್ನ ಖಾತೆಗೆ ಅಂತಹ ಯಾವುದೇ ಸಂದೇಶವೂ ಬಂದಿಲ್ಲʼ ಎಂದಿದ್ದಾರೆ.
ಖಾಸಗಿ ಸುದ್ದಿ ವಾಹಿನಿಗಳ ಜತೆ ಮಾತನಾಡಿರುವ ರಾಗಿಣಿ ದ್ವಿವೇದಿ ʼನನ್ನ ಪ್ರೊಫೈಲ್ ಅನ್ನು ಖಾಸಗಿ ಏಜೆನ್ಸಿಯೊಂದು ನಿರ್ವಹಣೆ ಮಾಡುತ್ತಿದೆ. ಹೀಗಾಗಿ ಅಶ್ಲೀಲ ಸಂದೇಶಗಳು ಬಂದಿರುವ ಬಗ್ಗೆ ನನಗೆ ಮಾಹಿತಿ ಇಲ್ಲ. ಅಂತಹ ಸಂದೇಶ ಬಂದರೂ ಸಹ ನಾನು ಓದುವುದಿಲ್ಲ. ನನ್ನ ಗಮನಕ್ಕೆ ಬಂದಂತೆ ಅಂತಹ ಯಾವುದೇ ಕೆಟ್ಟ ಸಂದೇಶವೂ ಬಂದಿಲ್ಲʼ ಎಂದು ಹೇಳಿದ್ದಾರೆ.
ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ ನಾಳೆಯಿಂದ (ಮಾರ್ಚ್ 11) ಕರೆ ನೀಡಿದ್ದ ಅನಿರ್ದಿಷ್ಟಾವಧಿ ಮುಷ್ಕರವನ್ನು…
ಬೆಂಗಳೂರು : ಕರ್ನಾಟಕ ವಿಧಾನಪರಿಷತ್‌ನ ನಾಲ್ಕು ಕ್ಷೇತ್ರಗಳ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಮೈತ್ರಿ ಪಕ್ಷ ಜೆಡಿಎಸ್‌ಗೆ ಒಂದು…
ಬೆಂಗಳೂರು : ಅಂತರರಾಷ್ಟ್ರೀಯ ಮಹಿಳಾ ದಿನದಂದೆ ಗ್ಯಾಸ್ ಸಿಲಿಂಡರ್ ಬೆಲೆಯನ್ನ ಕೇಂದ್ರ ಸರ್ಕಾರ 60 ರೂಪಾಯಿ ಏರಿಕೆ ಮಾಡಿದೆ. ಜೊತೆಗೆ…
ಗುಂಡ್ಲುಪೇಟೆ : ಜಮೀನಿನಲ್ಲಿ ಮೇಯುತ್ತಿದ್ದ ಹಸುವಿನ ಮೇಲೆ ಹುಲಿಯೊಂದು ದಾಳಿ ನಡೆಸಿದೆ. ಈ ವೇಳೆ ರೈತ ತನ್ನ ಹಸು ರಕ್ಷಿಸಲು…
ಹೊಸದಿಲ್ಲಿ : ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ಇಂಧನ ಪೂರೈಕೆಯ ಮೇಲೆ ಹೆಚ್ಚುತ್ತಿರುವ ಒತ್ತಡದ ನಡುವೆ, ದೇಶೀಯ ಇಂಧನ ಮಾರುಕಟ್ಟೆಯನ್ನು…
ಹೊಸದಿಲ್ಲಿ : ರಾಷ್ಟ್ರೀಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಪರಿಷತ್ (ಎನ್‌ಸಿಇಆರ್‌ಟಿ) ಇತ್ತೀಚೆಗೆ ಪ್ರಕಟಿಸಿದ್ದ 8ನೇ ತರಗತಿಯ ಸಮಾಜ ವಿಜ್ಞಾನ…