ಪೂರ್ಣಚಂದ್ರ ತೇಜಸ್ವಿ ಅವರ ‘ಜುಗಾರಿ ಕ್ರಾಸ್’ ಕಾದಂಬರಿಯನ್ನು ಕನ್ನಡಿಗರು ಓದದೆ ಇರಲು ಸಾಧ್ಯವೇ ಇಲ್ಲ. ಕನ್ನಡ ಸಾಹಿತ್ಯ ಲೋಕದ ಓದಲೇಬೇಕಾದ ಬಹುಮುಖ್ಯ ಕಾದಂಬರಿಗಳಲ್ಲಿ ‘ಜುಗಾರಿ ಕ್ರಾಸ್’ ಕೂಡ ಒಂದು. ವನ್ಯ ಸಂಪತ್ತು ಕಳ್ಳತನ, ದರೋಡೆ, ಭೂಗತ ಕೆಲಸಗಳ ಬಗ್ಗೆ ವಿವರಿಸುತ್ತಾ ಜನರು ಪ್ರಕೃತಿ ಸಂಪತ್ತನ್ನು ಹೇಗೆ ಲೂಟಿ ಮಾಡುತ್ತಿದ್ದಾರೆ ಎನ್ನುವುದನ್ನು ಈ ಕಾದಂಬರಿಯಲ್ಲಿ ರೋಚಕವಾಗಿ ಹೇಳಿದ್ದಾರೆ ತೇಜಸ್ವಿ.
ಈ ಹಿಂದೆ ಆ ಕಾದಂಬರಿಯನ್ನು ಎರಡು ಬಾರಿ ಚಿತ್ರ ಮಾಡುವ ಪ್ರಯತ್ನಗಳಾಗಿತ್ತು. ಆದರೆ, ಕಾರಣಾಂತರಗಳಿಂದ ಅದು ಸಾಧ್ಯವಾಗಿರಲಿಲ್ಲ. ಈಗ ಈ ಕಾದಂಬರಿಯನ್ನು ‘ಅಂಬಿ ನಿಂಗೆ ವಯಸ್ಸಾಯ್ತೋ’ ಖ್ಯಾತಿಯ ಗುರುದತ್ ಗಾಣಿಗ ಕೈಗೆತ್ತಿಕೊಮಡಿದ್ದು, ಚಿತ್ರ ಮಾಡುವುದಕ್ಕೆ ಮುಂದಾಗಿದ್ದಾರೆ. ಕಳೆದ ವರ್ಷ ತೇಜಸ್ವಿ ಅವರ ಹುಟ್ಟುಹಬ್ಬದ (ಸೆಪ್ಟೆಂಬರ್ 08) ಸಂದರ್ಭದಲ್ಲಿ ಈ ಚಿತ್ರವನ್ನು ಘೋಷಿಸುವುದರ ಜೊತೆಗೆ ಮೊದಲ ಪೋಸ್ಟರ್ ಸಹ ಬಿಡುಗಡೆ ಮಾಡಿದ್ದಾರೆ.
ಇದನ್ನು ಓದಿ: ಸಾರ್ವಜನಿಕ ಜಾಗದಲ್ಲಿ ನಮಾಜ್ ನಿಷೇಧಿಸಿ ಎಂದು ಸಿಎಂಗೆ ಪತ್ರ ಬರೆದ ಯತ್ನಾಳ್
ಈ ಹಿಂದಿನ ಎರಡು ಪ್ರಯತ್ನಗಳಲ್ಲಿ ಇಬ್ಬರು ಜನಪ್ರಿಯ ನಟರ ಹೆಸರು ಕೇಳಿಬಂದಿತ್ತು. ಆದರೆ, ಈ ಹೊಸ ‘ಜುಗಾರಿ ಕ್ರಾಸ್’ನ ಪ್ರಮುಖ ಪಾತ್ರದಲ್ಲಿ ಯಾರು ಕಾಣಿಸಿಕೊಳ್ಳುತ್ತಿದ್ದಾರೆ ಎನ್ನುವುದು ಕುತೂಹಲ ಮೂಡಿಸಿತ್ತು. ಆ ಕುತೂಹಲಕ್ಕೆ ಕೊನೆಗೂ ಉತ್ತರ ಸಿಕ್ಕಿದ್ದು, ರಾಜ್ ಬಿ. ಶೆಟ್ಟಿ ಈ ಚಿತ್ರದಲ್ಲಿ ನಾಯಕನಾಗಿ ಕಾಣಿಸಿಕೊಳ್ಳುತ್ತಿದ್ದಾರೆ.
ಈ ಚಿತ್ರಕ್ಕೆ ಅಭಿಮನ್ಯು ಸದಾನಂದನ್ ಛಾಯಾಗ್ರಹಣ ಮಾಡಲಿದ್ದಾರೆ. ಸಚಿನ್ ಬಸ್ರೂರು ಅವರ ಸಂಗೀತ ಮತ್ತು ಹಿನ್ನೆಲೆ ಸಂಗೀತ ಈ ಚಿತ್ರಕ್ಕಿರಲಿದೆ. ಮಿಕ್ಕ ಕಲಾವಿದರು ಮತ್ತು ತಂತ್ರಜ್ಞರು ಇನ್ನಷ್ಟೇ ಆಯ್ಕೆಯಾಗಬೇಕಿದೆ.
ಇನ್ನು, ಪ್ರಜ್ವಲ್ ದೇವರಾಜ್ ಅಭಿನಯದಲ್ಲಿ ಗುರುದತ್ ಗಾಣಿಗ, ‘ಕರಾವಳಿ’ ಎಂಬ ಚಿತ್ರವನ್ನು ನಿರ್ದೇಶಿಸಿದ್ದು, ಈ ಚಿತ್ರದ ಚಿತ್ರೀಕರಣ ಮುಗಿದಿದೆ. ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ನಡೆಯುತ್ತಿದ್ದು, ಮುಂದಿನ ವರ್ಷ ಚಿತ್ರ ಬಿಡುಗಡೆ ಆಗಲಿದೆ.
ಪ್ರಶಾಂತ್ ಎನ್ ಮಲ್ಲಿಕ್ ಮೈಸೂರು: ಸುತ್ತೂರು ಜಾತ್ರೆ ವೇಳೆ ರಾತ್ರಿ ಗದ್ದೆಯಲ್ಲಿ ಮಲಗಿದ್ದ ವ್ಯಕ್ತಿಗಳ ಮೇಲೆ ಕಾರು ಹರಿದ ಪರಿಣಾಮ…
ಸಿದ್ದಾಪುರ: ವಿರಾಜಪೇಟೆ ರಸ್ತೆಯಲ್ಲಿರುವ ಎಸ್‌ವೈಎಸ್ ಕಾಫಿ ಅಂಗಡಿಯಲ್ಲಿ ನಡೆದ ನಗದು ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದಾಪುರ ಪೊಲೀಸರು ಕೇರಳ ಮೂಲದ…
ಮಹಾದೇಶ್ ಎಂ ಗೌಡ ಹನೂರು: ತಾಲ್ಲೂಕಿನ ಕೆವಿಎನ್ ದೊಡ್ಡಿ ಗ್ರಾಮದ ಜಮೀನೊಂದರಲ್ಲಿ ಕಾಡಾನೆ ಲಗ್ಗೆ ಇಟ್ಟು ಅಪಾರ ಪ್ರಮಾಣದ ಬೆಳೆ…
ಬೆಂಗಳೂರು: ಕಾಲ್ತುಳಿತ ಪ್ರಕರಣದಿಂದಾಗಿ ಈ ಬಾರಿಯ ಬಹು ನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ಪಂದ್ಯಗಳು ನಡುವುದೇ ಡೋಲಾಯಮಾನ ಸ್ಥಿತಿಯಲ್ಲಿರುವಾಗಲೇ ಉದ್ಘಾಟನಾ…
ಬೆಂಗಳೂರು: ಶಿಡ್ಲಘಟ್ಟ ಪೌರಾಯುಕ್ತೆ ಅಮೃತಾ ಅವರಿಗೆ ಜೀವ ಬೆದರಿಕೆ ಹಾಕಿದ್ದ ಪ್ರಕರಣ ಸಂಬಂಧ ಕಾಂಗ್ರೆಸ್ ಮುಖಂಡ ರಾಜೀವ್‌ಗೌಡಗೆ ಹೈಕೋರ್ಟ್ ತೀವ್ರ…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿರುವ ಪ್ರಮುಖ ಆರೋಪಿ ಪವಿತ್ರಾ ಗೌಡಗೆ ವಾರಕ್ಕೊಮ್ಮೆ ಮನೆ ಊಟ…