ಗುರುದತ್ ಗಾಣಿಗ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ‘ಕರಾವಳಿ’ ಚಿತ್ರಕ್ಕೆ ಇದೀಗ ರಾಜ್ ಬಿ. ಶೆಟ್ಟಿ ಎಂಟ್ರಿಯಾಗಿದೆ. ಪ್ರಜ್ವಲ್ ದೇವರಾಜ್ ನಾಯಕನಾಗಿ ಕಾಣಿಸಿಕೊಳ್ಳುತ್ತಿರುವ ಈ ಚಿತ್ರದಲ್ಲಿ ರಾಜ್ ಶೆಟ್ಟಿ ಒಂದು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರಂತೆ.
ಇತ್ತೀಚೆಗೆ ಚಿತ್ರದಲ್ಲಿನ ರಾಜ್ ಬಿ. ಶೆಟ್ಟಿ ಅವರ ಪಾತ್ರ ಪರಿಚಯದ ಟೀಸರ್ ರಿಲೀಸ್ ಆಗಿದೆ. ಎರಡು ಕೋಣಗಳ ಮಧ್ಯೆ ನಿಂತು ದಿಟ್ಟಿಸಿ ನೋಡುತ್ತಿರುವ ರಾಜ್ ಬಿ ಶೆಟ್ಟಿ, ಒಂದು ಕೈಯಲ್ಲಿ ಪಂಜು ಹಿಡಿದು ಕಾಣಿಸಿಕೊಂಡಿದ್ದಾರೆ. ರಾಜ್ ಲುಕ್ ನೋಡುತ್ತಿದ್ದರೆ ಕಂಬಳ ಓಡಿಸುವ ಓಟಗಾರನ ಅಥವಾ ಕಂಬಳ ನಡೆಸುವ ಕುಟುಂಬದವನ ಪಾತ್ರವಿರಬಹುದು ಎಂದು ಚರ್ಚೆಯಾಗುತ್ತಿದೆ. ರಾಜ್ ಪಾತ್ರದ ಬಗ್ಗೆ ಸಿನಿಮಾತಂಡ ಯಾವುದೇ ಮಾಹಿತಿ ಬಿಟ್ಟುಕೊಟ್ಟಿಲ್ಲ.
‘ಕರಾವಳಿ’ ಮನುಷ್ಯ ಹಾಗೂ ಪ್ರಾಣಿ ಮಧ್ಯೆ ನಡೆಯುವ ಸಂಘರ್ಷದ ಕಥೆಯಾಗಿದ್ದು, ಪಕ್ಕಾ ಗ್ರಾಮೀಣ ಹಿನ್ನೆಲಯಲ್ಲಿ ಚಿತ್ರ ಮೂಡಿಬರುತ್ತಿದೆ. ಚಿತ್ರದಲ್ಲಿ ಪ್ರಜ್ವಲ್ ಮತ್ತು ರಾಜ್ ಬಿ. ಶೆಟ್ಟಿ ಜೊತೆಗೆ ನಟ ಮಿತ್ರ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ರಮೇಶ್ ಇಂದಿರ ಅವರ ಪಾತ್ರ ಕೂಡ ಸಿಕ್ಕಾಪಟ್ಟೆ ಪವರ್ ಫುಲ್ ಆಗಿದೆ. ನಾಯಕಿಯಾಗಿ ಸಂಪದಾ ಕಾಣಿಸಿಕೊಂಡಿದ್ದಾರೆ.
‘ಕರಾವಳಿ’ ಹೆಸರೇ ಹೇಳುವ ಹಾಗೆ ಬಹುತೇಕ ಸಿನಿಮಾ ಕರಾವಳಿಯ ಸುತ್ತಮುತ್ತನೇ ಚಿತ್ರೀಕರಣಗೊಂಡಿದೆ. ಈ ಸಿನಿಮಾ ಗುರುದತ್ ಗಾಣಿಗ ನಿರ್ದೇಶನದ ಜೊತೆಗೆ ವಿಕೆ ಫಿಲ್ಮಂ ಅಸೋಸಿಯೇಷನ್ ಸಹಯೋಗದೊಂದಿಗೆ ನಿರ್ಮಿಸುತ್ತಿದ್ದಾರೆ. ಈ ಚಿತ್ರಕ್ಕೆ ಸಚಿನ್ ಬಸ್ರೂರು ಸಂಗೀತ ಸಂಯೋಜನೆ ಮಾಡಿದ್ದಾರೆ. ಅಭಿಮನ್ಯು ಸದಾನಂದನ್ ಛಾಯಾಗ್ರಹಣವಿರುವ ಈ ಚಿತ್ರದ ಚಿತ್ರೀಕರಣ ಬಹುತೇಕ ಮುಕ್ತಾಯದ ಹಂತಕ್ಕೆ ಬಂದಿದ್ದು, ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಸಹ ಪ್‍ರಾರಂಭವಾಗಿದೆ.
ಚಂದ್ರಶೇಖರ್ ಬಂಡಿಯಪ್ಪ ಕಥೆ ಇರುವ ಈ ಚಿತ್ರವು, ವರ್ಷದ ಕೊನೆಯಲ್ಲಿ ಬಿಡುಗಡೆಯಾಗುವ ಸಾಧ್ಯತೆ ಇದೆ.
ಹೊಸದಿಲ್ಲಿ : ಗಣರಾಜ್ಯೋತ್ಸವಕ್ಕೂ ಮುನ್ನ ರಾಷ್ಟ್ರ ರಾಜಧಾನಿಯಲ್ಲಿ ಅಶಾಂತಿ ಸೃಷ್ಟಿಸುವುದಾಗಿ ಬೆದರಿಕೆ ಹಾಕಿದ್ದಕ್ಕಾಗಿ ಸಿಖ್ ಫಾರ್ ಜಸ್ಟೀಸ್ ನಿಯೋಜಿತ ಭಯೋತ್ಪಾದಕ…
ಭಾರತೀನಗರ : ಇಲ್ಲಿಗೆ ಸಮೀಪದ ಕೆ.ಪಿ.ದೊಡ್ಡಿ ಗ್ರಾಮದಲ್ಲಿ 5 ಕಾಡಾನೆಗಳ ಹಿಂಡು ಬೀಡುಬಿಟ್ಟು ಕಬ್ಬಿನ ಬೆಳೆ ಫಸಲನ್ನು ನಾಶಗೊಳಿಸಿರುವ ಘಟನೆ…
ಮಡಿಕೇರಿ : ಮೈಸೂರು-ಗೋಣಿಕೊಪ್ಪ ಹೆದ್ದಾರಿಯ ದಕ್ಷಿಣ ಕೊಡಗಿನ ತಿತಿಮತಿ ವ್ಯಾಪ್ತಿಯಲ್ಲಿ ಹುಲಿಯೊಂದು ಕಾಣಿಸಿಕೊಂಡು ಆತಂಕ ಸೃಷ್ಟಿಸಿದ್ದು, ಹುಲಿ ಸೆರೆಗೆ ಶಾಸಕ…
ನಂಜನಗೂಡು : ತಾಲ್ಲೂಕಿನ ಕಲ್ಲಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯು ಖಾಸಗಿ ಶಾಲೆಗಳನ್ನು ಸಹ ನಾಚಿಸುವಂತಹ ಆಧುನಿಕ ಸೌಲಭ್ಯಗಳನ್ನು…
ಬೃಹತ್ ಕೈಗಾರಿಕೆ ಸಚಿವಾಲಯ ಅಧೀನದ ಎಆರ್‌ಎಐ ಘಟಕ ಸ್ಥಾಪನೆಗೆ ಪರಿಶೀಲನೆ ನಡೆಯುತ್ತಿದೆ : ಕುಮಾರಸ್ವಾಮಿ ಮಂಡ್ಯ : ಜಿಲ್ಲೆಯಲ್ಲಿ ಕೈಗಾರಿಕೆ…
ಮಂಡ್ಯ : ಕರ್ನಾಟಕ ರಾಜ್ಯವೇ ನನ್ನ ಪರಿಮಿತಿ. ಜನರು ಎಲ್ಲಿ ಅಪೇಕ್ಷೆ ಮಾಡುತ್ತಾರೆ ಅಲ್ಲಿಂದ ನನ್ನ ಸ್ಪರ್ಧೆ ಮಾಡುತ್ತೇನೆ ಎನ್ನುವ…