ರಜನಿಕಾಂತ್ ನಟನೆಯ ಬಹುನಿರೀಕ್ಷಿತ ಸಿನಿಮಾ ‘ವೆಟ್ಟೈಯಾನ್’ ಬಿಡುಗಡೆಗೆ ಸಜ್ಜಾಗಿದೆ. ಅಕ್ಟೋಬರ್ 10ಕ್ಕೆ ಐದು ಭಾಷೆಗಳಲ್ಲಿ ಜಗತ್ತಿನಾದ್ಯಂತ ಈ ಚಿತ್ರ ತೆರೆಗೆ ಬರಲಿದೆ. ಸದ್ಯ ಈ ಚಿತ್ರಕ್ಕೆ ಪೋಸ್ಟ್ ಪ್ರೊಡಕ್ಷನ್ ಕೆಲಸ ಭರದಿಂದ ಸಾಗಿದ್ದು, ಇದೀಗ ಚಿತ್ರದ ಮೊದಲ ಹಾಡು ಬಿಡುಗಡೆಯಾಗಿದೆ.
‘ಮನಸಿಲಾಯೋ’ ಎಂಬ ಸಾಗುವ ಈ ಹಾಡು, ತಮಿಳು ಹಾಗೂ ತೆಲುಗು ಭಾಷೆಯಲ್ಲಿ ಹಾಡು ಬಿಡುಗಡೆ ಆಗಿದೆ. ವರ್ಣರಂಜಿತ ಸೆಟ್‍ನಲ್ಲಿ ರಜನಿಕಾಂತ್ ಜೊತೆ ಮಂಜು ವಾರಿಯರ್ ಭರ್ಜರಿಯಾಗಿ ಕುಣಿದು ಕುಪ್ಪಳಿಸಿದ್ದಾರೆ. ಅನಿರುದ್ದ್ ರವಿಚಂದರ್ ಈ ಹಾಡಿಗೆ ಸಂಗೀತ ಸಂಯೋಜಿಸಿದ್ದಾರೆ.
ಈ ಹಿಂದೆ ಸೂರ್ಯ ನಟಿಸಿದ ‘ಜೈ ಭೀಮ್’ ಸಿನಿಮಾ ನಿರ್ದೇಶಿಸಿದ್ದ ಟಿ.ಜೆ. ಜ್ಞಾನವೇಲ್, ‘ವೆಟ್ಟೈಯಾನ್’ ಚಿತ್ರಕ್ಕೆ ಕಥೆ-ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಅಮಿತಾಬ್ ಬಚ್ಚನ್ ಹಾಗೂ ರಜನಿಕಾಂತ್ ಈ ಚಿತ್ರದ ಮೂಲಕ ಮೂರು ದಶಕದ ಬಳಿಕ ಮತ್ತೊಮ್ಮೆ ಒಟ್ಟಿಗೆ ನಟಿಸಿದ್ದಾರೆ. 1990ರ ದಶಕದ ಆರಂಭದಲ್ಲಿ ಬಿಡುಗಡೆಯಾಗಿದ್ದ ‘ಹಮ್’ ಚಿತ್ರದ ನಂತರ ಅವರಿಬ್ಬರೂ ಯಾವೊಂದು ಸಿನಿಮಾದಲ್ಲೂ ನಟಿಸಿರಲಿಲಲ್ಲ. ಭಾರತೀಯ ಚಿತ್ರರಂಗದ ಪ್ರತಿಷ್ಠಿತ ನಿರ್ಮಾಣ ಸಂಸ್ಥೆ ಲೈಕಾ ಈ ಸಮಾಗಮಕ್ಕೆ ವೇದಿಕೆ ನಿರ್ಮಿಸಿದೆ.
‘ವೆಟ್ಟೈಯಾನ್’ ಚಿತ್ರದಲ್ಲಿ ರಜನಿಕಾಂತ್ ಹಾಗೂ ಅಮಿತಾಭ್ ಬಚ್ಚನ್ ಜೊತೆಯಲ್ಲಿ ರಾಣಾ ದಗ್ಗುಬಾಟಿ, ಫಹಾದ್ ಫಾಸಿಲ್, ಮಂಜು ವಾರಿಯರ್, ರಿತಿಕಾ ಸಿಂಗ್, ವಿಜಯನ್, ಜಿಎಂ ಸುಂದರ್, ರೋಹಿಣಿ, ಅಭಿರಾಮಿ, ರಾವ್ ರಮೇಶ್, ರಮೇಶ್ ತಿಲಕ್, ರಕ್ಷಣ್ ಸೇರಿದಂತೆ ಇನ್ನೂ ಅನೇಕ ಪ್ರಮುಖ ನಟರು ನಟಿಸಿದ್ದಾರೆ.
ರಜನಿಕಾಂತ್ ಅಭಿನಯದ ‘ಜೈಲರ್’ ಚಿತ್ರವು ಕಳೆದ ವರ್ಷ ಬಿಡುಗಡೆಯಾಗಿ ದೊಡ್ಡ ಯಶಸ್ಸು ಕಂಡಿತ್ತು. ಆ ನಂತರ ಅವರು ‘ಲಾಲ್ ಸಲಾಮ್’ ಎಂಬ ಚಿತ್ರದಲ್ಲಿ ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಸಂಕ್ರಾಂತಿ ಸಂದರ್ಭದಲ್ಲಿ ಬಿಡುಗಡೆಯಾದ ಈ ಚಿತ್ರ ಬಂದಿದ್ದು, ಹೋಗಿದ್ದು ಗೊತ್ತಾಗಲಿಲ್ಲ. ಇದೀಗ ‘ವೆಟ್ಟೈಯಾನ್’ ಚಿತ್ರದ ಮೂಲಕ ರಜನಿಕಾಂತ್ ಮತ್ತೆ ದೊಡ್ಗ ಎಂಟ್ರಿ ಕೊಡುವುದಕ್ಕೆ ಸಜ್ಜಾಗಿದ್ದಾರೆ.
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…
ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಮಂಡ್ಯ ನಗರದಲ್ಲಿನ ವಿದ್ಯುತ್ ದೀಪಾಲಂಕಾರಕ್ಕೆ ಕೃಷಿ ಸಚಿವರು ಹಾಗೂ…
ಕೇರಳ ಮೂಲದ ಮಾಸ್ಟರ್ ಮೈಂಡ್ ಸೇರಿದಂತೆ 12 ಆರೋಪಿಗಳ ಬಂಧನ; ಮತ್ತೊಂದು ಮೋಸದ ಜಾಲ ಬಯಲಿಗೆಳೆದ ಕೊಡಗು ಜಿಲ್ಲಾ ಪೊಲೀಸರು…
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಮುಡಾ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಜನವರಿ…
ಮಂಡ್ಯ: ೮೭ ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕ್ಷಣಗಣನೆ ಆರಂಭವಾಗಿದೆ. ಈ ಹಿನ್ನೆಲೆ ಗುರುವಾರ ಸಂಜೆ ನಗರಕ್ಕೆ…