ಮನರಂಜನೆ

‘ಮನಸಿಲಾಯೋ’ ಎಂದು ಕುಣಿದ ರಜನಿಕಾಂತ್-ಮಂಜು ವಾರಿಯರ್

ರಜನಿಕಾಂತ್ ನಟನೆಯ ಬಹುನಿರೀಕ್ಷಿತ ಸಿನಿಮಾ ‘ವೆಟ್ಟೈಯಾನ್’ ಬಿಡುಗಡೆಗೆ ಸಜ್ಜಾಗಿದೆ. ಅಕ್ಟೋಬರ್ 10ಕ್ಕೆ ಐದು ಭಾಷೆಗಳಲ್ಲಿ ಜಗತ್ತಿನಾದ್ಯಂತ ಈ ಚಿತ್ರ ತೆರೆಗೆ ಬರಲಿದೆ. ಸದ್ಯ ಈ ಚಿತ್ರಕ್ಕೆ ಪೋಸ್ಟ್ ಪ್ರೊಡಕ್ಷನ್ ಕೆಲಸ ಭರದಿಂದ ಸಾಗಿದ್ದು, ಇದೀಗ ಚಿತ್ರದ ಮೊದಲ ಹಾಡು ಬಿಡುಗಡೆಯಾಗಿದೆ.

‘ಮನಸಿಲಾಯೋ’ ಎಂಬ ಸಾಗುವ ಈ ಹಾಡು, ತಮಿಳು ಹಾಗೂ ತೆಲುಗು ಭಾಷೆಯಲ್ಲಿ ಹಾಡು ಬಿಡುಗಡೆ ಆಗಿದೆ. ವರ್ಣರಂಜಿತ ಸೆಟ್‍ನಲ್ಲಿ ರಜನಿಕಾಂತ್‍ ಜೊತೆ ಮಂಜು ವಾರಿಯರ್ ಭರ್ಜರಿಯಾಗಿ ಕುಣಿದು ಕುಪ್ಪಳಿಸಿದ್ದಾರೆ. ಅನಿರುದ್ದ್ ರವಿಚಂದರ್ ಈ ಹಾಡಿಗೆ ಸಂಗೀತ ಸಂಯೋಜಿಸಿದ್ದಾರೆ.

ಈ ಹಿಂದೆ ಸೂರ್ಯ ನಟಿಸಿದ ‘ಜೈ ಭೀಮ್’ ಸಿನಿಮಾ ನಿರ್ದೇಶಿಸಿದ್ದ ಟಿ.ಜೆ. ಜ್ಞಾನವೇಲ್, ‘ವೆಟ್ಟೈಯಾನ್’ ಚಿತ್ರಕ್ಕೆ ಕಥೆ-ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಅಮಿತಾಬ್ ಬಚ್ಚನ್ ಹಾಗೂ ರಜನಿಕಾಂತ್ ಈ ಚಿತ್ರದ ಮೂಲಕ ಮೂರು ದಶಕದ ಬಳಿಕ ಮತ್ತೊಮ್ಮೆ ಒಟ್ಟಿಗೆ ನಟಿಸಿದ್ದಾರೆ. 1990ರ ದಶಕದ ಆರಂಭದಲ್ಲಿ ಬಿಡುಗಡೆಯಾಗಿದ್ದ ‘ಹಮ್‍’ ಚಿತ್ರದ ನಂತರ ಅವರಿಬ್ಬರೂ ಯಾವೊಂದು ಸಿನಿಮಾದಲ್ಲೂ ನಟಿಸಿರಲಿಲಲ್ಲ. ಭಾರತೀಯ ಚಿತ್ರರಂಗದ ಪ್ರತಿಷ್ಠಿತ ನಿರ್ಮಾಣ ಸಂಸ್ಥೆ ಲೈಕಾ ಈ ಸಮಾಗಮಕ್ಕೆ ವೇದಿಕೆ ನಿರ್ಮಿಸಿದೆ.

‘ವೆಟ್ಟೈಯಾನ್’ ಚಿತ್ರದಲ್ಲಿ ರಜನಿಕಾಂತ್ ಹಾಗೂ ಅಮಿತಾಭ್ ಬಚ್ಚನ್ ಜೊತೆಯಲ್ಲಿ ರಾಣಾ ದಗ್ಗುಬಾಟಿ, ಫಹಾದ್ ಫಾಸಿಲ್, ಮಂಜು ವಾರಿಯರ್, ರಿತಿಕಾ ಸಿಂಗ್, ವಿಜಯನ್, ಜಿಎಂ ಸುಂದರ್, ರೋಹಿಣಿ, ಅಭಿರಾಮಿ, ರಾವ್ ರಮೇಶ್, ರಮೇಶ್ ತಿಲಕ್, ರಕ್ಷಣ್ ಸೇರಿದಂತೆ ಇನ್ನೂ ಅನೇಕ ಪ್ರಮುಖ ನಟರು ನಟಿಸಿದ್ದಾರೆ.

ರಜನಿಕಾಂತ್‍ ಅಭಿನಯದ ‘ಜೈಲರ್‍’ ಚಿತ್ರವು ಕಳೆದ ವರ್ಷ ಬಿಡುಗಡೆಯಾಗಿ ದೊಡ್ಡ ಯಶಸ್ಸು ಕಂಡಿತ್ತು. ಆ ನಂತರ ಅವರು ‘ಲಾಲ್ ‍ಸಲಾಮ್’ ಎಂಬ ಚಿತ್ರದಲ್ಲಿ ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಸಂಕ್ರಾಂತಿ ಸಂದರ್ಭದಲ್ಲಿ ಬಿಡುಗಡೆಯಾದ ಈ ಚಿತ್ರ ಬಂದಿದ್ದು, ಹೋಗಿದ್ದು ಗೊತ್ತಾಗಲಿಲ್ಲ. ಇದೀಗ ‘ವೆಟ್ಟೈಯಾನ್‍’ ಚಿತ್ರದ ಮೂಲಕ ರಜನಿಕಾಂತ್‍ ಮತ್ತೆ ದೊಡ್ಗ ಎಂಟ್ರಿ ಕೊಡುವುದಕ್ಕೆ ಸಜ್ಜಾಗಿದ್ದಾರೆ.

ಭೂಮಿಕಾ

Recent Posts

ದುಬಾರೆ ಆನೆ ಶಿಬಿರದಲ್ಲಿ19 ವರ್ಷದ ಗಂಡಾನೆ ಸಾವು

ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ…

46 mins ago

ಪ್ರೀತಿಗೆ ನಿರಾಕರಣೆ: ಮೈಸೂರಿನಲ್ಲಿ ಬೆಚ್ಚಿಬೀಳಿಸಿದ ಒನ್‌ ಸೈಡ್‌ ಲವ್‌ ಕೃತ್ಯ

ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್‌ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…

2 hours ago

ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣ: ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಅಧ್ಯಕ್ಷ ಶಿವಕುಮಾರ್ ಅರೆಸ್ಟ್​!

ಮಂಡ್ಯ: ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…

4 hours ago

ಭಾರೀ ಮಳೆಗೆ ರೈತರ ಬೆಳೆ ನಾಶ: ಲಕ್ಷಾಂತರ ರೂ. ನಷ್ಟ, ಮನೆ ಗೋಡೆ ಕುಸಿತ

ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…

4 hours ago

ಸ್ಕೂಲ್ ಬಸ್‌ ಹರಿದು ಒಂದೂವರೆ ವರ್ಷದ ಮಗು ಸಾವು

ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…

5 hours ago

ಓದುಗರ ಪತ್ರ: ‘ಪ್ರತಾಪ’ಕ್ಕೆ ಸವಾಲು ಈ ನೀಲಿ

‘ಪ್ರತಾಪ’ಕ್ಕೆ ಸವಾಲು ಈ ನೀಲಿ ಇದು ನಮ್ಮ ಸೂರು ಆಕಾಶದ ನೀಲಿ ಇದು ನನ್ನವ್ವ ಸುತ್ತಿಕೊಂಡ ಸೀರೆಯ ನೀಲಿ ನನಗೆ…

10 hours ago