ಆರು ವರ್ಷಗಳ ಹಿಂದೆ ಪ್ರಾರಂಭವಾಗಿತ್ತು ಫಸ್ಟ್ ರ‍್ಯಾಂಕ್ ರಾಜು ಖ್ಯಾತಿಯ ಗುರುನಂದನ್ ಅಭಿನಯದ ರಾಜು ಜೇಮ್ಸ್ ಬಾಂಡ್ ಚಿತ್ರ. ಆಗಿನ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರು ಚಿತ್ರದ ಮುಹೂರ್ತಕ್ಕೆ ಆಗಮಿಸಿ ಶುಭಕೋರಿದ್ದರು. ಈ ಸುದೀರ್ಘ ಪಯಣದ ನಂತರ ಚಿತ್ರ ಕೊನೆಗೂ ಮುಗಿದಿದ್ದು, ಇದೀಗ ಬಿಡುಗಡೆಗೆ ಸಜ್ಜಾಗಿದೆ.
ಕರ್ಮ ಬ್ರೋಸ್ ಪ್ರೊಡಕ್ಷನ್ಸ್ ನಿರ್ಮಾಣದ ರಾಜು ಜೇಮ್ಸ್ ಬಾಂಡ್ ಚಿತ್ರವು ವರ್ಷದ ಅಂತ್ಯದಲ್ಲಿ ರಾಜ್ಯದಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಲಿದೆ ಎಂದು ಖುದ್ದು ಚಿತ್ರತಂಡ ಹೇಳಿಕೊಂಡಿದೆ.
ಈ ಹಿಂದೆ ಭಾಗ್ಯರಾಜ್ ಚಿತ್ರವನ್ನು ನಿರ್ದೇಶಿಸಿದ್ದ ದೀಪಕ್ ಮಧುವನಹಳ್ಳಿ ಕಥೆ ಬರೆದು ನಿರ್ದೇಶಿಸಿದ್ದು, ಚಿತ್ರದಲ್ಲಿ ಗುರುನಂದನ್, ಮೃದುಲಾ, ಸಾಧು ಕೋಕಿಲ, ಅಚ್ಯುತ್ ಕುಮಾರ್, ಚಿಕ್ಕಣ್ಣ, ರವಿಶಂಕರ್, ಜೈಜಗದೀಶ್ ಮುಂತಾದವರು ನಟಿಸಿದ್ದಾರೆ.
ರಾಜು ಜೇಮ್ಸ್ ಬಾಂಡ್ ಚಿತ್ರವನ್ನು ಮಂಜುನಾಥ್ ವಿಶ್ವಕರ್ಮ (ಲಂಡನ್) ಮತ್ತು ಕಿರಣ್ ಭರ್ತೂರು (ಕ್ಯಾನೆಡಾ) ಜೊತೆಯಾಗಿ ನಿರ್ಮಿಸಿದ್ದಾರೆ. ಈ ಕುರಿತು ಮಾತನಾಡಿರುವ ಮಂಜುನಾಥ್, ‘ನಾವು ಪೂರ್ತಿ ಚಿತ್ರವನ್ನು ಇದುವರೆಗೂ ಹಲವಾರು ಭಾರಿ ನೋಡಿದ್ದರೂ ಒಂದು ಸಲಕ್ಕೂ ಬೇಸರವಾಗಿಲ್ಲ. ಹೊಟ್ಟೆ ತುಂಬಾ ನಕ್ಕಿದ್ದೇವೆ, ನಮಗೆ ಕತೆ ಗೊತ್ತಿದ್ದರೂ ಕೆಲವು ಸನ್ನಿವೇಶಗಳಲ್ಲಿ ಸೀಟಿನ ತುದಿಯಲ್ಲಿ ಕೂತು ಕುತೂಹಲದಿಂದ ನೋಡಿದ್ದೇವೆ. ಹಾಗಾಗಿ, ಪ್ರೇಕ್ಷಕರಿಗೂ ಇದೇ ಅನುಭವ ನೀಡುವಲ್ಲಿ ನಮ್ಮ ಸಿನಿಮಾ ಯಶ್ವಸಿಯಾಗುವುದು ಎಂದು ನಂಬಿದ್ದೇವೆ’ ಎಂದು ಹೇಳಿಕೊಂಡಿದ್ದಾರೆ.
ರಾಜು ಜೇಮ್ಸ್ ಬಾಂಡ್ ಚಿತ್ರವು ಸುಮಾರು ಎರಡು ತಾಸು 16 ನಿಮಿಷಗಳ ಅವಧಿಯದ್ದಾಗಿದ್ದು, ಅದರಲ್ಲಿ ಸುಮಾರು ೪೦ ನಿಮಿಷಗಳು ಪ್ರೇಕ್ಷಕರು ನಗುವಿನ ಅಲೆಯಲ್ಲಿ ತೇಲಾಡಲಿದ್ದಾರಂತೆ. ಚಿತ್ರದ ನಾಲ್ಕು ಹಾಡುಗಳನ್ನು ಲಂಡನ್ ಮತ್ತು ಸುತ್ತಮುತ್ತಲಿನ ಊರುಗಳಲ್ಲಿ ಚಿತ್ರೀಕರಣವಾಗಿರುವುದು ವಿಶೇಷ.
ಈಗಾಗಲೇ ಚಿತ್ರದ ಸೆನ್ಸಾರ್ ಮುಗಿದಿದ್ದು, ಚಿತ್ರಕ್ಕೆ ಸೆನ್ಸಾರ್ ಮಂಡಳಿಯು ಯು/ಎ ಪ್ರಮಾಣಪತ್ರ ನೀಡಿದೆ. ಚಿತ್ರತಂಡವು ಹೊಸ ಟೀಸರ್ ಬಿಡುಗಡೆ ಮೂಲಕ ಬಿಡುಗಡೆಯ ದಿನಾಂಕವನ್ನು ಅಧಿಕೃತವಾಗಿ ಘೋಷಿಸಲಿದೆ.
ಬೆಂಗಳೂರು: ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಶಾಸಕ ಸ್ಥಾನದಿಂದಲೇ ಅನರ್ಹಗೊಂಡು ನ್ಯಾಯಾಲಯದ ತಡೆಯಾಜ್ಞೆಯಿಂದ ಬಚಾವ್ ಆಗಿದ್ದ ಮಾಜಿ ಸಚಿವ ಹಾಗೂ ಶಾಸಕ…
ನವದೆಹಲಿ: ಉನ್ನಾವೋ ಅತ್ಯಾಚಾರ ಪ್ರಕರಣದಲ್ಲಿ ಉಚ್ಚಾಟಿತ ಬಿಜೆಪಿ ಶಾಸಕ ಕುಲದೀಪ್ ಸಿಂಗ್ ಸೆಂಗಾರ್ ಅವರ ಜೀವಾವಧಿ ಶಿಕ್ಷೆಯನ್ನು ಅಮಾನತುಗೊಳಿಸಿದ ದೆಹಲಿ…
ಬೆಂಗಳೂರು: ಮಹಾರಾಷ್ಟ್ರ ಪೊಲೀಸರಿಂದ ಬೆಂಗಳೂರಿನಲ್ಲಿ ಕೋಟ್ಯಾಂತರ ರೂ ಮೌಲ್ಯದ ಡ್ರಗ್ಸ್ ಸೀಜ್ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ವಿರುದ್ಧ…
ಬೆಂಗಳೂರು: ರಾಜ್ಯ ಸರ್ಕಾರದ ಮುಜರಾಯಿ ಇಲಾಖೆಯು ಕರ್ನಾಟಕ ರಾಜ್ಯದ ಅತ್ಯಂತ ಶ್ರೀಮಂತ ದೇವಸ್ಥಾನಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಪ್ರಮುಖವಾಗಿ ಪ್ರಸಿದ್ಧ…
ಟಿ.ನರಸೀಪುರ: ಹೊಸ ವರ್ಷದ ಸಂಭ್ರಮಾಚರಣೆ ಆಚರಿಸಲು ಐತಿಹಾಸಿಕ ಪಂಚಲಿಂಗಗಳ ಪುಣ್ಯಕ್ಷೇತ್ರ ತಲಕಾಡಿಗೆ ಪ್ರವಾಸಿಗರ ದಂಡೇ ಹರಿದು ಬರುತ್ತಿದೆ. ಕಳೆದ ಮೂರು…
ಬೆಂಗಳೂರು: ಬೆಂಗಳೂರಿನಲ್ಲಿ ಅಕ್ರಮವಾಗಿ ನಿರ್ಮಿಸಿದ್ದ ಶೆಡ್‌ಗಳ ತೆರವು ಪ್ರಕರಣವನ್ನು ಖಂಡಿಸಿ ಟ್ವೀಟ್ ಮಾಡಿದ್ದ ಕೇರಳ ಸಿಎಂ ಪಿಣರಾಯಿ ವಿಜಯನ್ ವಿರುದ್ಧ…