ಮನರಂಜನೆ

‘ರಕ್ಕಿ’ಯಾದ ರಕ್ಕಿ; ಅಶ್ವಿನಿ ಪುನೀತ್ ರಾಜಕುಮಾರ್ ಅವರಿಂದ ಚಿತ್ರಕ್ಕೆ ಚಾಲನೆ

ನಿರ್ದೇಶಕ ವೆಂಕಟ್‍ ಭಾರದ್ವಾಜ್‍ ಸಿನಿಮಾ ಮೇಲೆ ಸಿನಿಮಾ ಮಾಡುವುದಕ್ಕೆ ಜನಪ್ರಿಯರು. ಅವರ ‘ಹೇ ಪ್ರಭು’ ಎಂಬ ಚಿತ್ರವು ನವೆಂಬರ್ 07ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಅದಕ್ಕೂ ಮೊದಲು ಅವರ ಇನ್ನೊಂದು ಚಿತ್ರ ಸದ್ದಿಲ್ಲದೆ ಪ್ರಾರಂಭವಾಗಿದೆ. ಅದೇ ‘ರಕ್ಕಿ’.

‘ರಕ್ಕಿ’ ಚಿತ್ರದ ಮುಹೂರ್ತ ಸಮಾರಂಭ ಇತ್ತೀಚೆಗೆ ರೇಣುಕಾಂಬ ಥಿಯೇಟರ್ ನಲ್ಲಿ ನೆರವೇರಿತು. ‌ಅಶ್ವಿನಿ ಪುನೀತ್ ರಾಜಕುಮಾರ್ ಅವರು ಚಿತ್ರದ ಮೊದಲ ಸನ್ನಿವೇಶಕ್ಕೆ ಆರಂಭಫಲಕ ತೋರಿಸುವ ಮೂಲಕ ಚಾಲನೆ ನೀಡಿ, ಚಿತ್ರ ಯಶಸ್ವಿಯಾಗಲೆಂದು ಹಾರೈಸಿದರು. ಈ ಚಿತ್ರವನ್ನು ಎಸ್.ಎನ್.ಆರ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ಸಾಲಿಗ್ರಾಮ ಸುರೇಶ್ ನಿರ್ಮಿಸುತ್ತಿದ್ದು, ವೆಂಕಟ್‍ ಭಾರದ್ವಾಜ್‍ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶಿಸುತ್ತಿದ್ದಾರೆ. ವಿಶೇಷವೆಂದರೆ, ಈ ಚಿತ್ರದ ನಾಯಕನ ಹೆಸರೂ ರಕ್ಕಿ. ನಿರ್ಮಾಪಕರ ಮಗನಾಗಿರುವ ರಕ್ಕಿ, ಈ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡುತ್ತಿದ್ದಾರೆ. ಆಶಿಕಾ ಸೋಮಶೇಖರ್ ಮತ್ತು ಪಲ್ಲವಿ ಮಂಜುನಾಥ್ ನಾಯಕಿಯಾಗಿ ನಟಿಸುತ್ತಿದ್ದಾರೆ.

ಈ ಚಿತ್ರದ ಕುರಿತು ಮಾತನಾಡುವ ವೆಂಕಟ್‍ ಭಾರದ್ವಾಜ್‍, ‘ನಿರ್ಮಾಪಕರಿಗೆ ನಾನು ಮೊದಲು ಎರಡು ಕಥೆ ಹೇಳಿದ್ದೆ. ಅವರು ಈ ಕಥೆಯನ್ನು ಅಶ್ವಿನಿ ಪುನೀತ್ ರಾಜಕುಮಾರ್ ಅವರ ಬಳಿ ಹೇಳಿ, ಅವರು ಒಪ್ಪುವ ಕಥೆಯನ್ನು ಸಿನಿಮಾ ಮಾಡೋಣ ಎಂದರು. ಅಶ್ವಿನಿ ಪುನೀತ್ ರಾಜಕುಮಾರ್ ಅವರು ಈ ಚಿತ್ರದ ಕಥೆ ಕೇಳಿ ಚೆನ್ನಾಗಿದೆ ಅಂತ ಹೇಳಿದರು. ಚಿತ್ರಕ್ಕೆ ಇಂದು ಅವರೇ ಚಾಲನೆ ನೀಡಿದ್ದು ಬಹಳ ಸಂತೋಷವಾಗಿದೆ. ಆಕ್ಷನ್ ಸಸ್ಪೆನ್ಸ್ ಥ್ರಿಲ್ಲರ್ ಕಥೆ ಇರುವ ಈ ಚಿತ್ರಕ್ಕೆ ಬೆಂಗಳೂರಿನಲ್ಲೇ ಹೆಚ್ಚಿನ ಚಿತ್ರೀಕರಣ ನಡೆಯಲಿದೆ’ ಎಂದರು.

ಇದನ್ನು ಓದಿ: ಸತ್ಯಪ್ರಕಾಶ್ ‍ನಿರ್ದೇಶನದಲ್ಲಿ ಧೀರೇನ್‍ ಹೊಸ ಸಿನಿಮಾ

‘ರಕ್ಕಿ’ ಎಂದರೇನು? ಉತ್ತರಿಸಿದ ವೆಂಕಟ್, ‘’ರಕ್ಕಿ’ ಎಂದರೆ ಹಚ್ಚಿರುವ ಪಟಾಕಿ ಇದ್ದ ಹಾಗೆ. ಯಾವಾಗ ಸಿಡಿಯುತ್ತದೆ ಗೊತ್ತಿಲ್ಲ. ಚಿತ್ರದಲ್ಲಿ ನಾಯಕನ ಪಾತ್ರ ಕೂಡ ಹೀಗೆ ಇರುತ್ತದೆ. ಚಿತ್ರದಲ್ಲಿ ಬಿ. ಸುರೇಶ್, ಹರಿಣಿ ಶ್ರೀಕಾಂತ್, ಸುಂದರರಾಜ್, ರಮೇಶ್ ಪಂಡಿತ್, ಸಂಪತ್ ಮೈತ್ರೇಯ ಮುಂತಾದವರು ನಟಿಸುತ್ತಿದ್ದಾರೆ. ಲೋಕಿ ತವಸ್ಯ ಸಂಗೀತ ನಿರ್ದೇಶನ ಹಾಗೂ ಐಸ್ಸಾಕ್ಸ್ ಪ್ರಭಾಕರ್ ಛಾಯಾಗ್ರಹಣವಿರಲಿದೆ’ ಎಂದು ಮಾಹಿತಿ ನೀಡಿದರು.

ನಿರ್ಮಾಪಕ ಸಾಲಿಗ್ರಾಮ ಸುರೇಶ್‍ ಅವರ ತಂದೆ ರಾಜಶೇಖರ್, ಈ ಹಿಂದೆ ಡಾ. ರಾಜಕುಮಾರ್ ಅಭಿನಯದ ‘ಹೊಸ ಬೆಳಕು’ ಚಿತ್ರವನ್ನು ನಿರ್ಮಿಸಿದ್ದರಂತೆ. ‘ನಾನು ಮೂಲತಃ ಸಾಲಿಗ್ರಾಮದವನು. ಐಟಿ ಉದ್ಯೋಗಿ. 20 ವರ್ಷಗಳಿಂದ ಜರ್ಮನಿಯಲ್ಲೇ ವಾಸಿಸುತ್ತಿದ್ದೇನೆ. ಈಗ ನಾನು ‘ರಕ್ಕಿ’ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದೇನೆ. ನನ್ನ ಮಗನೇ ಚಿತ್ರಕ್ಕೆ ಹೀರೋ. ವೆಂಕಟ್ ಭಾರದ್ವಾಜ್ ಎರಡು ಕಥೆ ಸಿದ್ದ ಮಾಡಿಕೊಂಡಿದ್ದರು. ನಮ್ಮ ಕುಟುಂಬದ ಸ್ನೇಹಿತರಾದ ಅಶ್ವಿನಿ ಪುನೀತ್ ರಾಜಕುಮಾರ್ ಅವರ ಹತ್ತಿರ ಕಥೆ ಹೇಳಿ, ಅವರು‌ ಒಪ್ಪುವ ಕಥೆಯನ್ನು ಚಿತ್ರ ಮಾಡೋಣ ಎಂದು ವೆಂಕಟ್ ಭಾರದ್ವಾಜ್ ಅವರಿಗೆ ಹೇಳಿದ್ದೆ. ಈ ಕಥೆಯನ್ನು ಅಶ್ವಿನಿ ಅವರು ಒಪ್ಪಿಕೊಂಡರು. ಈಗ ಚಿತ್ರೀಕರಣ ಆರಂಭ ಮಾಡುತ್ತಿದ್ದೇವೆ’ ಎಂದರು.

ಬಿ. ಸುರೇಶ ಈ ಚಿತ್ರದಲ್ಲಿ ಡ್ಯಾನಿ ಎಂಬ ಭೂಗತ ಲೋಕದ ದೊರೆಯಾಗಿ ಕಾಣಿಸಿಕೊಳ್ಳುತ್ತಿದ್ದಾರಂತೆ. ‘ಈ ಚಿತ್ರ ಹತ್ತರಲ್ಲಿ ಒಂದು ಆಗುವುದು ಬೇಡ. ಇದೇ ಒಂದು ಆಗಲಿ’ ಎಂದು ಹಾರೈಸಿದರು.

ಆಂದೋಲನ ಡೆಸ್ಕ್

Recent Posts

ಕೇರ್ ಟೇಕರ್ ಕೆಲಸಕ್ಕೆ ಸೇರಿ ಮನೆ ದರೋಡೆ; ಆರೋಪಿ ಬಂಧನ

ಮಡಿಕೇರಿ: ವಯೋವೃದ್ಧರೊಬ್ಬರ ಮನೆಯಲ್ಲಿ ಹೋಂ ನರ್ಸಿಂಗ್(ಕೇರ್ ಟೇಕರ್) ಕೆಲಸಕ್ಕೆಂದು ಸೇರಿಕೊಂಡು ಚಿನ್ನಾಭರಣ ಹಾಗೂ ನಗದು ಕಳ್ಳತನ ಮಾಡಿದ ಆರೋಪಿಯನ್ನು ಬಂಧಿಸುವಲ್ಲಿ…

6 hours ago

ಮಹದೇಶ್ವರ ಬೆಟ್ಟ : ವಿವಿಧ ಸೇವೆಗಳಿಂದ 1.16 ಕೋಟಿ ಸಂಗ್ರಹ

ಹನೂರು: ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಎರಡನೇ ಶನಿವಾರ ಹಾಗೂ ಯುಗಾದಿ ಜಾತ್ರಾ…

6 hours ago

ಹೊರ್ಮುಜ್‌ ಜಲಸಂಧಿ ಶತ್ರುಗಳಿಗೆ ಮಾತ್ರ ಮುಚ್ಚಿದೆ : ಇರಾನ್

ಟೆಹ್ರಾನ್ : ಅಮೆರಿಕ-ಇಸ್ರೇಲ್ ಸಂಘರ್ಷದ ನಡುವೆಯೂ ಹೊರ್ಮುಜ್ ಜಲಸಂಧಿಯನ್ನು ಸಂಪೂರ್ಣವಾಗಿ ಮುಚ್ಚಲಾಗಿಲ್ಲ ಎಂದು ಇರಾನ್ ಸ್ಪಷ್ಟಪಡಿಸಿದೆ. ಶತ್ರು ರಾಷ್ಟ್ರ ಮತ್ತು…

7 hours ago

ಹುಣಸೂರು | ಗುಡುಗು-ಸಿಡಿಲು ಸಹಿತ ಸಾಧಾರಣ ಮಳೆ

ಹುಣಸೂರು : ತಾಲ್ಲೂಕಿನ ಹನಗೋಡು ಹೋಬಳಿ ವ್ಯಾಪ್ತಿ ಸೇರಿದಂತೆ ನಾಗರಹೊಳೆ ರಾಷ್ಟ್ರೀಯ ಉದ್ಯಾನದ ಅಂಚಿನ ಗ್ರಾಮಗಳಲ್ಲಿ ಸೋಮವಾರ ಸಂಜೆ ಗುಡುಗು-ಸಿಡಿಲು…

8 hours ago

ಕುಕ್ಕರಹಳ್ಳಿ ಕೆರೆಯಲ್ಲಿ ಕಟ್ಟಡ ನಿರ್ಮಾಣಕ್ಕೆ ವಿರೋಧ ; ಪ್ರತಿಭಟನೆ

ಮೈಸೂರು : ಕುಕ್ಕರಹಳ್ಳಿ ಕೆರೆಯ ಪರಿಸರ ಸಂರಕ್ಷಣೆ ಮಾಡಬೇಕು ಎಂದು ಒತ್ತಾಯಿಸಿ ಪರಿಸರ ಸಂರಕ್ಷಿಸಿ ಹೋರಾಟ ಸಮಿತಿ ವತಿಯಿಂದ ಕುಕ್ಕರಹಳ್ಳಿ…

8 hours ago

2 ಸಾವಿರ ಬೋಧಕ ಹುದ್ದೆಗಳಿಗೆ ನೇಮಕಾತಿ : ಉನ್ನತ ಶಿಕ್ಷಣ ಸಚಿವ ಸುಧಾಕರ್‌

ಬೆಂಗಳೂರು : ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಎಂಜಿನಿಯರಿಂಗ್ ಕಾಲೇಜು, ಪಾಲಿಟೆಕ್ನಿಕ್ ಎಂಜಿನಿಯರಿಂಗ್ ಕಾಲೇಜು ಹಾಗೂ ವಿವಿಯಲ್ಲಿ ಖಾಲಿ ಇರುವ…

8 hours ago