ಮನರಂಜನೆ

‘ರಾಕ್ಷಸ’ನಿಗೆ ಸೋನಲ್ ಮೊಂಥೆರೋ ನಾಯಕಿ; ಶಿವರಾತ್ರಿಗೆ ಚಿತ್ರ ಬಿಡುಗಡೆ

ಪ್ರಜ್ವಲ್ ದೇವರಾಜ್ ಅಭಿನಯದ ‘ರಾಕ್ಷಸ’ ಚಿತ್ರವು ಮಹಾಶಿವರಾತ್ರಿ ಪ್ರಯುಕ್ತ ಫೆಬ್ರವರಿ 26ಕ್ಕೆ ಬಿಡುಗಡೆ ಆಗುವುದಕ್ಕೆ ಸಜ್ಜಾಗಿದೆ. ಇದುವರೆಗೂ ಚಿತ್ರತಂಡದವರು ಚಿತ್ರದ ನಾಯಕಿ ಯಾರು ಎಂಬ ವಿಷಯವನ್ನು ಬಿಟ್ಟುಕೊಟ್ಟಿರಲಿಲ್ಲ. ಇದೀಗ ಘೋಷಣೆಯಾಗಿದ್ದು, ಸೋನಲ್‍ ಮೊಂಥೆರೋ ಚಿತ್ರದ ನಾಯಕಿಯಾಗಿ ನಟಿಸಿದ್ದಾರೆ.

ನಿರ್ದೇಶಕ ಲೋಹಿತ್‍ ನಾಯಕಿ ಪ್ರಧಾನ ಚಿತ್ರಗಳನ್ನು ಹೆಚ್ಚು ನಿರ್ದೇಶಿಸಿದವರು. ಈ ಹಿಂದೆ ಅವರು ನಿರ್ದೇಶನ ಮಾಡಿರುವ ‘ಮಮ್ಮಿ – ಸೇವ್‍ ಮೀ’ ಮತ್ತು ‘ದೇವಕಿ’ ಚಿತ್ರಗಳಲ್ಲಿ ಪ್ರಿಯಾಂಕಾ ಉಪೇಂದ್ರ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದರು. ಇದೀಗ ‘ರಾಕ್ಷಸ’ ಚಿತ್ರವನ್ನು ಮಾಡಿ ಮುಗಿಸಿರುವ ಲೋಹಿತ್‍, ಚಿತ್ರದಲ್ಲೊಂದು ಪ್ರಮುಖ ಪಾತ್ರವನ್ನು ಸೋನಲ್‍ಗೆ ಕೊಟ್ಟಿದ್ದಾರೆ.

ಕನ್ನಡ ಹಾಗೂ ತೆಲುಗು ಎರಡು ಭಾಷೆಯಲ್ಲಿ ಫೆಬ್ರವರಿ 26ರಂದು ಬಿಡುಗಡೆಯಾಗುತ್ತಿರುವ ‘ರಾಕ್ಷಸ’ ಚಿತ್ರವು ಕನ್ನಡದ ಮೊಟ್ಟ ಮೊದಲ ಬಾರಿಗೆ ಟೈಮ್‍ ಲೂಪ್‍ ಹಾರರ್ ಚಿತ್ರವೆಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಇದಕ್ಕೂ ಮುನ್ನ ಹಾರರ್‍ ಮತ್ತು ಟೈಮ್‍ ಲೂಪ್‍ ಚಿತ್ರಗಳು ಕನ್ನಡದಲ್ಲಿ ಬಂದಿವೆ. ಈಗ ಅವೆರಡೂ ಜಾನರ್‍ಗಳನ್ನು ಸೇರಿಸಿ, ‘ರಾಕ್ಷಸ’ ಮಾಡಿದ್ದಾರೆ ಲೋಹಿತ್‍.

‘ರಾಕ್ಷಸ’ ಚಿತ್ರದಲ್ಲಿ ಪ್ರಜ್ವಲ್ ದೇವರಾಜ್ ಹಾಗೂ ಸೋನಲ್ ಮೊಂಥೆರೋ ಜೊತೆಗೆ ಶೋಭರಾಜ್, ವತ್ಸಲಾ ಮೋಹನ್, ‘ಸಿದ್ಲಿಂಗು’ ಶ್ರೀಧರ್, ಆರ್ನ ರಾಥೋಡ್ ಮುಂತಾದವರು ನಟಿಸಿದ್ದು, ಜೇಬಿನ್ ಪಿ. ಜೋಕಬ್ ಛಾಯಾಗ್ರಹಣ ಮಾಡಿದ್ದಾರೆ. ವರುಣ್ ಉನ್ನಿ ಸಂಗೀತ ಮತ್ತು ಅವಿನಾಶ್ ಬಸುತ್ಕರ್ ಹಿನ್ನಲೆ ಸಂಗೀತವಿದೆ. ಶಾನ್ವಿ ಎಂಟರ್‌ಟೇನ್ಮೆಂಟ್ ಮೂಲಕ ದೀಪು ಬಿ.ಎಸ್ ಈ ಚಿತ್ರವನ್ನು ನಿರ್ಮಿಸಿದ್ದಾರೆ.

ಪ್ರಜ್ವಲ್‍ ಅಭಿನಯದ ‘ಗಣ’ ಚಿತ್ರವು ಜನವರಿ 31ರಂದು ಬಿಡುಗಡೆಯಾಗುತ್ತಿದ್ದು, ಇದು ಸಹ ಒಂದು ಟೈಮ್‍ ಲೂಪ್‍ ಚಿತ್ರವಾಗಿದೆ. ಇದು ತೆಲುಗಿನಲ್ಲಿ 2021ರಲ್ಲಿ ಬಿಡುಗಡೆಯಾದ ‘ಪ್ಲೇ ಬ್ಯಾಕ್‍’ ಎಂಬ ಚಿತ್ರದ ರೀಮೇಕ್‍ ಆಗಿದ್ದು, ಮೂಲ ಚಿತ್ರವನ್ನು ನಿರ್ದೇಶಿಸಿದ್ದ ಹರಿಪ್ರಸಾದ್‍ ಜಕ್ಕ ಈ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ.

ಭೂಮಿಕಾ

Recent Posts

ತಿರುವಿನಲ್ಲಿ ಉರುಳಿಬಿದ್ದ ಲಾರಿ: ತಪ್ಪಿದ ಭಾರೀ ಅನಾಹುತ

ಕೊಡಗು: ಕೊಡಗು ಜಿಲ್ಲೆ ಶನಿವಾರಸಂತೆ ಬಳಿಯ ಗುಡುಗಳಲೆಯಲ್ಲಿ ಸಿಮೆಂಟ್ ತುಂಬಿದ್ದ ಲಾರಿ ಉರುಳಿಬಿದ್ದಿದೆ. ಶನಿವಾರಸಂತೆ–ಅರಕಲಗೂಡು ರಸ್ತೆಯ ಗುಡುಗಳಲೆ ತಿರುವಿನಲ್ಲಿ ಘಟನೆ…

9 hours ago

ದುಬಾರೆ ಆನೆ ಶಿಬಿರದಲ್ಲಿ19 ವರ್ಷದ ಗಂಡಾನೆ ಸಾವು

ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ…

9 hours ago

ಪ್ರೀತಿಗೆ ನಿರಾಕರಣೆ: ಮೈಸೂರಿನಲ್ಲಿ ಬೆಚ್ಚಿಬೀಳಿಸಿದ ಒನ್‌ ಸೈಡ್‌ ಲವ್‌ ಕೃತ್ಯ

ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್‌ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…

11 hours ago

ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣ: ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಅಧ್ಯಕ್ಷ ಶಿವಕುಮಾರ್ ಅರೆಸ್ಟ್​!

ಮಂಡ್ಯ: ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…

13 hours ago

ಭಾರೀ ಮಳೆಗೆ ರೈತರ ಬೆಳೆ ನಾಶ: ಲಕ್ಷಾಂತರ ರೂ. ನಷ್ಟ, ಮನೆ ಗೋಡೆ ಕುಸಿತ

ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…

13 hours ago

ಸ್ಕೂಲ್ ಬಸ್‌ ಹರಿದು ಒಂದೂವರೆ ವರ್ಷದ ಮಗು ಸಾವು

ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…

14 hours ago