ಮನರಂಜನೆ

ಮೈಸೂರಿನಲ್ಲಿ ಸಾವಿರ ಡ್ಯಾನ್ಸರ್ಸ್ ಜೊತೆ ಹೆಜ್ಜೆ ಹಾಕಿದ ರಾಮ್‍ ಚರಣ್‍ ತೇಜ

ರಾಮ್ ಚರಣ್ ತೇಜ ಅಭಿನಯದ ‘ಪೆದ್ದಿ’ ಚಿತ್ರವು 2026ರ ಮಾರ್ಚ್.27ರಂದು ಜಗತ್ತಿನಾದ್ಯಂತ ಬಿಡುಗಡೆಯಾಗುತ್ತಿದೆ. ಈ ಮಧ್ಯೆ, ಚಿತ್ರದ ಚಿತ್ರೀಕರಣ ಭರದಿಂದ ಸಾಗಿದ್ದು, ಈ ಚಿತ್ರದ ಹಾಡೊಂದಕ್ಕೆ ಮೈಸೂರಿನಲ್ಲಿ ಚಿತ್ರೀಕರಣ ಸಾಗುತ್ತಿದೆ.

ಎ.ಆರ್.ರೆಹಮಾನ್‍ ಸಂಗೀತ ಸಂಯೋಜಿಸಿರುವ ಈ ಹಾಡನ್ನು ಅದ್ಧೂರಿ ಸೆಟ್ ಹಾಕಿ ಚಿತ್ರೀಕರಣ ನಡೆಸಲಾಗಿದೆ. ರಾಮ್‍ ಚರಣ್‍ ತೇಜ ಜೊತೆಗೆ ಸಾವಿರಕ್ಕೂ ಹೆಚ್ಚು ನೃತ್ಯಗಾರರು ಹೆಜ್ಜೆ ಹಾಕುತ್ತಿದ್ದು, ಖ್ಯಾತ ನೃತ್ಯ ನಿರ್ದೇಶಕ ಜಾನಿ ಮಾಸ್ಟರ್ ಈ ಹಾಡಿನ ನೃತ್ಯ ನಿರ್ದೇಶನ ಮಾಡುತ್ತಿದ್ದಾರೆ.

ವಿಶೇಷವೆಂದರೆ, ಈ ಚಿತ್ರದಲ್ಲಿ ಶಿವರಾಜಕುಮಾರ್ ಒಂದು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದು, ಈಗಾಗಲೇ ಒಂದು ಹಂತದ ಚಿತ್ರೀಕರಣದಲ್ಲಿ ಭಾಗವಹಿಸಿದ್ದಾರಂತೆ. ಮೂಲಗಳ ಪ್ರಕಾರ, ಶಿವರಾಜಕುಮಾರ್ ಈ ಚಿತ್ರದಲ್ಲಿ ರಾಮ್‍ ಚರಣ್‍ ತೇಜ ಅವರ ಸಹೋದರನ ಪಾತ್ರದಲ್ಲಿ ನಟಿಸುತ್ತಿದ್ದಾರಂತೆ. ಇತ್ತೀಚೆಗೆ, ಶಿವರಾಜಕುಮಾರ್ ಹುಟ್ಟುಹಬ್ಬದ ಸಂದರ್ಭದಲ್ಲಿ ಶಿವರಾಜಕುಮಾರ್ ಅವರ ಫಸ್ಟ್ ಲುಕ್‍ ಪೋಸ್ಟರ್ ಬಿಡುಗಡೆಯಾಗಿದೆ.

ಈ ಹಿಂದೆ ‘ಉಪ್ಪೆನ’ ಚಿತ್ರವನ್ನು ನಿರ್ದೇಶಿಸಿದ್ದ ಬುಚ್ಚಿ ಬಾಬು ಸನ, ಈ ಚಿತ್ರಕ್ಕೆ ಕಥೆ-ಚಿತ್ರಕಥೆ ಬರೆಯುವುದರ ಜೊತೆಗೆ ನಿರ್ದೇಶನ ಮಾಡುತ್ತಿದ್ದಾರೆ. ಮೈತ್ರಿ ಮೂವೀ ಮೇಕರ್ಸ್, ಸುಕುಮಾರ್ ರೈಟಿಂಗ್ ಹಾಗೂ ವೃದ್ಧಿ ಸಿನಿಮಾಸ್ ನಿರ್ಮಾಣದಲ್ಲಿ ಈ ಚಿತ್ರ ತಯಾರಾಗುತ್ತಿದ್ದು, ಚಿತ್ರಕ್ಕೆ ಎ.ಆರ್. ರೆಹಮಾನ್ ಸಂಗೀತ ಹಾಗೂ ರತ್ನವೇಲು ಛಾಯಾಗ್ರಹಣವಿದೆ.

‘ಪೆದ್ದಿ’ ಚಿತ್ರದಲ್ಲಿ ರಾಮ್‍ ಚರಣ್‍ಗೆ ಜೋಡಿಯಾಗಿ ಶ್ರೀದೇವಿ ಮಗಳು ಜಾಹ್ನವಿ ಕಪೂರ್ ಅಭಿನಯಿಸುತ್ತಿದ್ದು, ಜೊತೆಗೆ ಶಿವರಾಜಕುಮಾರ್, ಜಗಪತಿ ಬಾಬು, ದಿವ್ಯೆಂದು ಶರ್ಮಾ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ನಟಿಸುತ್ತಿದ್ದಾರೆ.

‘ಪೆದ್ದಿ’ ಚಿತ್ರವು ಮುಂದಿನ ವರ್ಷ ರಾಮ ನವಮಿಯ ಸಂದರ್ಭದಲ್ಲಿ ಜಗತ್ತಿನಾದ್ಯಂತ ಬಿಡುಗಡೆಯಾಗುತ್ತಿದೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ವಿದ್ಯುತ್ ಕಡಿತ ಮುಂಚಿತವಾಗಿ ಪ್ರಕಟಿಸಿ

ಮಳೆ ಸರಿಯಾಗಿ ಆಗದೆ ಜಲವಿದ್ಯುತ್ ಉತ್ಪಾದನೆ ಕಡಿಮೆಯಾಗಿ ವಿದ್ಯುತ್ ಅಭಾವ ಎದುರಾಗಿರುವುದು ನಿಜ. ಆದರೆ ಯಾವುದೇ ಮುನ್ಸೂಚನೆ ಇಲ್ಲದೆ ಇದ್ದಕ್ಕಿದ್ದಂತೆ…

1 hour ago

ಓದುಗರ ಪತ್ರ: ಖುಷಿ ಕೊಡುವ ಮಾತುಗಳಷ್ಟೇ ಸ್ಪಂದನೆಯೂ ಮುಖ್ಯ

ಮೈಸೂರು ಮಹಾ ನಗರಪಾಲಿಕೆ ವತಿಯಿಂದ ಕಲಾಮಂದಿರದಲ್ಲಿ ಆಯೋಜಿಸಿದ್ದ ಪೌರ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮದಲ್ಲಿ, ಮೈಸೂರು ಸ್ವಚ್ಛ ನಗರಿಯಾಗಲು ಪೌರ ಕಾರ್ಮಿಕರ…

2 hours ago

ಓದುಗರ ಪತ್ರ: ಬ್ಯಾಂಕ್ ಒಕ್ಕೂಟಗಳಿಗೆ ಜವಾಬ್ದಾರಿ ಇರಲಿ

ಸೆಪ್ಟೆಂಬರ್ ಕೊನೆಯಲ್ಲಿ ಆರ್ಥಿಕ ವರ್ಷದ ಅರ್ಧವಾರ್ಷಿಕ ಲೆಕ್ಕಪತ್ರ ಮುಕ್ತಾಯಗೊಳಿಸುವ ಅತ್ಯಂತ ನಿರ್ಣಾಯಕ ಸಮಯದಲ್ಲಿ ಬ್ಯಾಂಕ್ ಒಕ್ಕೂಟಗಳು (ಯುಎಫ್ಬಿ) ಮೂರು ದಿನಗಳ…

2 hours ago

ಪ್ರಶಸ್ತಿ ಪ್ರದಾನದಿಂದ ಚಿತ್ರೋತ್ಸವವರೆಗೆ ಹೊಸ ಪಯಣ

ವೈಡ್‌ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ದೆಹಲಿ ಸಹಜ ವಿಳಾಸವಾಗಿತ್ತು. ದೇಶದ…

2 hours ago

ಜಂಬೂಸವಾರಿಯಲ್ಲಿ ಸ್ತಬ್ಧ ಚಿತ್ರಗಳ ‘ತ್ರಿಸಂಗಮ’

ಕೆ.ಬಿ.ರಮೇಶನಾಯಕ ಕರ್ನಾಟಕ ರಾಜ್ಯದ ಗತವೈಭವ, ದೇಶದ ಅಖಂಡತೆ ಬಿಂಬಿಸುವ ಮಾದರಿಗಳ ಸವಾರಿ ೩೧ ಜಿಲ್ಲೆಗಳ ಬದಲಿಗೆ ಆಯ್ದ ೧೫ ಜಿಲ್ಲೆಗಳ…

2 hours ago