ramayana movie shoting
ಕಳೆದ ತಿಂಗಳಷ್ಟೇ ನಟ ಯಶ್, ಉಜ್ಜಯಿನಿಯಲ್ಲಿರುವ ಶ್ರೀ ಮಹಾಕಾಳೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ದೈವಿಕ ಆಶೀರ್ವಾದವನ್ನು ಪಡೆದಿದ್ದರು. ಸದ್ಯದಲ್ಲೇ, ‘ರಾಮಾಯಣ’ ಚಿತ್ರದ ಚಿತ್ರೀಕರಣದಲ್ಲಿ ಭಾಗವಹಿಸುವುದಾಗಿ ಹೇಳಿದ್ದರು. ಅದರಂತೆ ಅವರು ಇದೀಗ ಮುಂಬೈನಲ್ಲಿ ‘ರಾಮಾಯಣ’ ಚಿತ್ರದ ಚಿತ್ರೀಕರಣದಲ್ಲಿ ತೊಡಗಿಸಿಕೊಂಡಿದ್ದಾರೆ.
ಭಾರತೀಯ ಚಿತ್ರರಂಗದ ನಿರೀಕ್ಷೆಯ ಚಿತ್ರಗಳಲ್ಲಿ ಒಂದಾಗಿರುವ ‘ರಾಮಾಯಣ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದ್ದು, ಈ ಭಾಗದ ಚಿತ್ರೀಕರಣದಲ್ಲಿ ನಟ ಯಶ್ ಭಾಗವಹಿಸಿದ್ದಾರೆ. ಚಿತ್ರಕ್ಕಾಗಿ ಸಾಹಸ ದೃಶ್ಯಗಳ ಚಿತ್ರೀಕರಣ ನಡೆಯುತ್ತಿದ್ದು, ಅದಕ್ಕಾಗಿ, ಹಾಲಿವುಡ್‌ನ ಖ್ಯಾತ ಮ್ಯಾಡ್ ಮ್ಯಾಕ್ಸ್ ಸ್ಟಂಟ್ ನಿರ್ದೇಶಕ ಗೈ ನೋರಿಸ್ ಅವರನ್ನು ಕರೆಸಲಾಗಿದೆ. ಇದಕ್ಕೂ ಮೊದಲು ಹಾಲಿವುಡ್‍ನ ‘ಮ್ಯಾಡ್ ಮ್ಯಾಕ್ಸ್: ಫ್ಯೂರಿ ರೋಡ್ ಮತ್ತು ದಿ ಸುಸೈಡ್ ಸ್ಕ್ವಾಡ್’ ಮುಂತಾದ ಚಿತ್ರಗಳಿಗೆ ಸಾಹಸ ನಿರ್ದೇಶನ ಮಾಡಿದ್ದ ನೋರಿಸ್, ಇದೇ ಮೊದಲ ಬಾರಿಗೆ ಭಾರತೀಯ ಚಿತ್ರವೊಂದಕ್ಕೆ ಕೆಲಸ ಮಾಡುತ್ತಿದ್ದಾರೆ ಎಂದು ಹೇಳಲಾಗಿದೆ.
ಈ ಹಿಂದೆ ‘ದಂಗಲ್’ ಚಿತ್ರವನ್ನು ನಿರ್ದೇಶಿಸಿದ್ದ ನಿತೇಶ್ ತಿವಾರಿ, ‘ರಾಮಾಯಣ’ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ನಮಿತ್ ಮಲ್ಹೋತ್ರಾ ಅವರ ಪ್ರೈಮ್ ಫೋಕಸ್ ಸ್ಟುಡಿಯೋಸ್ ಮತ್ತು ಯಶ್ ಅವರ ಮಾನ್ಸ್ಟರ್ ಮೈಂಡ್ ಕ್ರಿಯೇಷನ್ಸ್ ಈ ಚಿತ್ರವನ್ನು ಜಂಟಿಯಾಗಿ ನಿರ್ಮಿಸುತ್ತಿದೆ. ‘ರಾಮಾಯಣ’ ಚಿತ್ರವು ಎರಡು ಭಾಗಗಳಲ್ಲಿ ಬಿಡುಗಡೆಯಾಗುತ್ತಿದ್ದು, ಈ ಪೈಕಿ ಮೊದಲ ಭಾಗವು 2026ರ ದೀಪಾವಳಿಗೆ ಬಿಡುಗಡೆಯಾದರೆ, ಎರಡನೇ ಭಾಗ 2027ರ ದೀಪಾವಳಿಗೆ ಬಿಡುಗಡೆಯಾಗಲಿದೆ.
‘ರಾಮಾಯಣ’ ಸಿನಿಮಾದಲ್ಲಿ ರಾಮನ ಪಾತ್ರದಲ್ಲಿ ರಣಬೀರ್ ಕಪೂರ್ ಅಭಿನಯಿಸುತ್ತಿದ್ದಾರೆ. ಸೀತೆಯಾಗಿ ಸಾಯಿಪಲ್ಲವಿ ಕಾಣಿಸಿಕೊಳ್ಳುತ್ತಿದ್ದಾರೆ. ಇನ್ನು, ಸನ್ನಿ ಡಿಯೋಲ್, ಆಂಜನೇಯನಾಗಿ ಅಭಿನಯಿಸುತ್ತಿದ್ದಾರೆ.
• ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ : ಹತ್ತಿರತ್ತಿರ ಒಂದೂ ಕಾಲು ಶತಮಾನದ ಚಿರನೂತನ ಶಾಲೆ... ವೃದ್ಧಾಪ್ಯದಲ್ಲೂ ಆಧುನಿಕ ತಂತ್ರಜ್ಞಾನಕ್ಕೆ ತೆರೆದುಕೊಂಡು…
ಕೃಷಿ ಫಸಲು ನಾಶ ಮಾಡಿ, ಕಾರ್ಮಿಕರು, ಬೆಳೆಗಾರರಲ್ಲಿ ಆತಂಕ ಸೃಷ್ಟಿಸಿದ್ದ ಕಾಡಾನೆ ಸಿದ್ದಾಪುರ : ವಿರಾಜಪೇಟೆ ತಾಲೂಕಿನ ಚೆಂಬೆಬೆಳ್ಳೂರು ಸುತ್ತಮುತ್ತಲ…
ಜೆರುಸಲೆಂ : ಮಧ್ಯಪ್ರಾಚ್ಯದಲ್ಲಿ ಯುದ್ಧ ಆರಂಭವಾದ ಬಳಿಕ ಇರಾನ್‌ನಿಂದ ಇಸ್ರೇಲ್ ಮೇಲೆ ಈವರೆಗೆ 400ಕ್ಕೂ ಹೆಚ್ಚು ಬ್ಯಾಲಿಸ್ಟಿಕ್ ಕ್ಷಿಪಣಿ ದಾಳಿ…
ಬೆಂಗಳೂರು : ಏಪ್ರಿಲ್ 1 ರಿಂದ ಬೆಂಗಳೂರು-ಮೈಸೂರು ಹೆದ್ದಾರಿ ಸೇರಿದಂತೆ ರಾಜ್ಯದ 9 ರಾಷ್ಟ್ರೀಯ ಹೆದ್ದಾರಿಗಳಲ್ಲಿ ಶೇಕಡಾ 3 ರಿಂದ…
ಹೊಸದಿಲ್ಲಿ : ಪಶ್ಚಿಮ ಏಷ್ಯಾದಲ್ಲಿ ಯುದ್ಧ ತೀವ್ರಗೊಳ್ಳುತ್ತಿರುವುದನ್ನು ಗಮನದಲ್ಲಿಟ್ಟುಕೊಂಡು, ಪೆಟ್ರೋಲಿಯಂ, ವಿದ್ಯುತ್ ಮತ್ತು ರಸಗೊಬ್ಬರ ವಲಯಗಳ ಪರಿಶೀಲನೆಗಾಗಿ ಪ್ರಧಾನಿ ನರೇಂದ್ರ…
ಬೆಂಗಳೂರು : 70 ಸಹಾಯಕ ನ್ಯಾಯಾಲಯ ಕಾರ್ಯದರ್ಶಿ ಹುದ್ದೆಗಳಿಗೆ ಕರ್ನಾಟಕ ಹೈಕೋರ್ಟ್ ಅರ್ಜಿ ಆಹ್ವಾನಿಸಿದೆ. ಕಾನೂನು ಪದವಿ ಸೇರಿದಂತೆ ವಿವಿಧ…