ಮನರಂಜನೆ

‘ರಾಮಾಯಣ’ಕ್ಕೆ ಬಂದ ಹಾಲಿವುಡ್‍ ಸಾಹಸ ನಿರ್ದೇಶಕ ಗೈ ನೋರಿಸ್‍

ಕಳೆದ ತಿಂಗಳಷ್ಟೇ ನಟ ಯಶ್‍, ಉಜ್ಜಯಿನಿಯಲ್ಲಿರುವ ಶ್ರೀ ಮಹಾಕಾಳೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ದೈವಿಕ ಆಶೀರ್ವಾದವನ್ನು ಪಡೆದಿದ್ದರು. ಸದ್ಯದಲ್ಲೇ, ‘ರಾಮಾಯಣ’ ಚಿತ್ರದ ಚಿತ್ರೀಕರಣದಲ್ಲಿ ಭಾಗವಹಿಸುವುದಾಗಿ ಹೇಳಿದ್ದರು. ಅದರಂತೆ ಅವರು ಇದೀಗ ಮುಂಬೈನಲ್ಲಿ ‘ರಾಮಾಯಣ’ ಚಿತ್ರದ ಚಿತ್ರೀಕರಣದಲ್ಲಿ ತೊಡಗಿಸಿಕೊಂಡಿದ್ದಾರೆ.

ಭಾರತೀಯ‌ ಚಿತ್ರರಂಗದ ನಿರೀಕ್ಷೆಯ ಚಿತ್ರಗಳಲ್ಲಿ ಒಂದಾಗಿರುವ ‘ರಾಮಾಯಣ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದ್ದು, ಈ ಭಾಗದ ಚಿತ್ರೀಕರಣದಲ್ಲಿ ನಟ ಯಶ್‍ ಭಾಗವಹಿಸಿದ್ದಾರೆ. ಚಿತ್ರಕ್ಕಾಗಿ ಸಾಹಸ ದೃಶ್ಯಗಳ ಚಿತ್ರೀಕರಣ ನಡೆಯುತ್ತಿದ್ದು, ಅದಕ್ಕಾಗಿ, ಹಾಲಿವುಡ್‌ನ ಖ್ಯಾತ ಮ್ಯಾಡ್ ಮ್ಯಾಕ್ಸ್ ಸ್ಟಂಟ್ ನಿರ್ದೇಶಕ ಗೈ ನೋರಿಸ್ ಅವರನ್ನು ಕರೆಸಲಾಗಿದೆ. ಇದಕ್ಕೂ ಮೊದಲು ಹಾಲಿವುಡ್‍ನ‌ ‘ಮ್ಯಾಡ್ ಮ್ಯಾಕ್ಸ್: ಫ್ಯೂರಿ ರೋಡ್ ಮತ್ತು ದಿ ಸುಸೈಡ್ ಸ್ಕ್ವಾಡ್‌’ ಮುಂತಾದ ಚಿತ್ರಗಳಿಗೆ ಸಾಹಸ ನಿರ್ದೇಶನ ಮಾಡಿದ್ದ ನೋರಿಸ್‍, ಇದೇ ಮೊದಲ ಬಾರಿಗೆ ಭಾರತೀಯ ಚಿತ್ರವೊಂದಕ್ಕೆ ಕೆಲಸ ಮಾಡುತ್ತಿದ್ದಾರೆ ಎಂದು ಹೇಳಲಾಗಿದೆ.

ಈ ಹಿಂದೆ ‘ದಂಗಲ್‍’ ಚಿತ್ರವನ್ನು ನಿರ್ದೇಶಿಸಿದ್ದ ನಿತೇಶ್ ತಿವಾರಿ, ‘ರಾಮಾಯಣ’ ಚಿತ್ರವನ್ನು ನಿರ್ದೇಶನ‌ ಮಾಡುತ್ತಿದ್ದಾರೆ. ನಮಿತ್ ಮಲ್ಹೋತ್ರಾ ಅವರ ಪ್ರೈಮ್ ಫೋಕಸ್ ಸ್ಟುಡಿಯೋಸ್ ಮತ್ತು ಯಶ್ ಅವರ ಮಾನ್ಸ್ಟರ್ ಮೈಂಡ್ ಕ್ರಿಯೇಷನ್ಸ್ ಈ ಚಿತ್ರವನ್ನು ಜಂಟಿಯಾಗಿ ನಿರ್ಮಿಸುತ್ತಿದೆ. ‘ರಾಮಾಯಣ’ ಚಿತ್ರವು ಎರಡು ಭಾಗಗಳಲ್ಲಿ ಬಿಡುಗಡೆಯಾಗುತ್ತಿದ್ದು, ಈ ಪೈಕಿ ಮೊದಲ ಭಾಗವು 2026ರ ದೀಪಾವಳಿಗೆ ಬಿಡುಗಡೆಯಾದರೆ, ಎರಡನೇ ಭಾಗ 2027ರ ದೀಪಾವಳಿಗೆ ಬಿಡುಗಡೆಯಾಗಲಿದೆ.

‘ರಾಮಾಯಣ’ ಸಿನಿಮಾದಲ್ಲಿ ರಾಮನ ಪಾತ್ರದಲ್ಲಿ ರಣಬೀರ್ ಕಪೂರ್ ಅಭಿನಯಿಸುತ್ತಿದ್ದಾರೆ. ಸೀತೆಯಾಗಿ ಸಾಯಿಪಲ್ಲವಿ ಕಾಣಿಸಿಕೊಳ್ಳುತ್ತಿದ್ದಾರೆ. ಇನ್ನು, ಸನ್ನಿ ಡಿಯೋಲ್‍, ಆಂಜನೇಯನಾಗಿ ಅಭಿನಯಿಸುತ್ತಿದ್ದಾರೆ.

ಆಂದೋಲನ ಡೆಸ್ಕ್

Recent Posts

ಕಮಿಷನ್ ಆರೋಪ ಸುಳ್ಳು, ಎಸ್‌ಐಆರ್ ರದ್ದಾಗಬೇಕು: ಸಚಿವ ಪುಟ್ಟರಂಗಶೆಟ್ಟಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶಾಸಕರು ಕಮಿಷನ್ ಕೇಳುತ್ತಿದ್ದಾರೆ ಎಂಬ ಗುತ್ತಿಗೆದಾರರ ಆರೋಪ ಸುಳ್ಳು,ಮತದಾರರ ಪಟ್ಟಿಯ…

30 mins ago

ಯಳಂದೂರು ತಾಲ್ಲೂಕಿನಲ್ಲಿ ವರುಣನ ಕೃಪೆ: ಭತ್ತದ ನಾಟಿಗೆ ಮುಂದಾದ ರೈತರು

ಯಳಂದೂರು: ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಕಳೆದ ಕೆಲ ದಿನಗಳಿಂದ ಸತತವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ರೈತರು ಭತ್ತದ ನಾಟಿ ಕಾರ್ಯದಲ್ಲಿ…

35 mins ago

ಕಾವೇರಿ ತೀರ್ಥೋದ್ಭವಕ್ಕೆ ದಿನಗಣನೆ: ಕಾವೇರಿ ನೀರಾವರಿ ನಿಗಮದಿಂದ 2 ಕೋಟಿ ರೂ ಬಿಡುಗಡೆ

ಮಡಿಕೇರಿ: ನಾಡಿನ ಜೀವನದಿ ಕಾವೇರಿ ಉಗಮಸ್ಥಾನ ತಲಕಾವೇರಿಯಲ್ಲಿ ನಡೆಯಲಿರುವ ಪವಿತ್ರ ತೀರ್ಥೋದ್ಭವಕ್ಕೆ ದಿನಗಣನೆ ಶುರುವಾಗಿದ್ದು, ಇನ್ನೇನು ಕೇವಲ 15 ದಿನಗಳಷ್ಟೇ…

1 hour ago

ಮಂಡ್ಯ | ಕೇಂದ್ರದ ಬರ ಅಧ್ಯಯನ ತಂಡದಿಂದ ಕೆಆರ್‌ಎಸ್‌ ಹಾಗೂ ಬರಪೀಡಿತ ಹಳ್ಳಿಗಳ ಪರಿಶೀಲನೆ

ಮಂಡ್ಯ: ರಾಜ್ಯದಲ್ಲಿ ಕಂಡು ಕೇಳರಿಯದ ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ ಇಂದು ಕೇಂದ್ರ ಬರ ಅಧ್ಯಯನ ಸಮಿತಿ ಸದಸ್ಯರು ಮಂಡ್ಯಕ್ಕೆ ಆಗಮಿಸಿ…

1 hour ago

ಓದುಗರ ಪತ್ರ: ಐತಿಹಾಸಿಕ ಸಂಗತಿ!

ಐತಿಹಾಸಿಕ ಸಂಗತಿ! ಸರ್ಕಾರದ ನಿರ್ದೇಶನದ ಮೇರೆಗೆ ಬೆಳಗಾವಿ ನಗರಪಾಲಿಕೆ ‘ಗಡಿ ವಿಷಯದಲ್ಲಿ ಮಹಾಜನ್ ವರದಿಯೇ ಅಂತಿಮ’ಎಂಬ ನಿರ್ಣಯ ಅಂಗೀಕರಿಸಿರುವುದು ಐತಿಹಾಸಿಕ…

5 hours ago

ಓದುಗರ ಪತ್ರ: ಟ್ರಾಫಿಕ್ ದಂಡ: ಸುಪ್ರೀಂ ಸಲಹೆ ಸ್ವಾಗತಾರ್ಹ

ಟ್ರಾಫಿಕ್ ನಿಯಮ ಉಲ್ಲಂಘಿಸಿ ದಂಡ ಪಾವತಿಸದೆ ಬಾಕಿ ಉಳಿಸಿಕೊಂಡಿರುವವರಿಂದ ಹಣ ವಸೂಲಿ ಮಾಡಲು, ಆ ದಂಡದ ಮೊತ್ತವನ್ನು ಅವರ ಮನೆ…

5 hours ago