ಮನರಂಜನೆ

ಸಿನಿಮಾ ಮುಂದಿನ ವರ್ಷ; ಸದ್ಯ ‘ರಾಮಾಯಣ’ ಚಿತ್ರದ ಟೀಸರ್ ಬಿಡುಗಡೆ

ಭಾರತೀಯ‌ ಚಿತ್ರರಂಗದ ನಿರೀಕ್ಷೆಯ ಸಿನಿಮಾಗಳಲ್ಲಿ ಒಂದಾಗಿರೋ ‘ರಾಮಾಯಣ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದ್ದು, ಈಗಾಗಲೇ ಯಶ್‍ ಸಹ ಒಂದು ಹಂತದ ಚಿತ್ರೀಕರಣದಲ್ಲಿ ಭಾಗಿಯಾಗಿ, ಇದೀಗ ಅಮೇರಿಕಾಗೆ ಹಾರಿದ್ದಾರೆ.

ಈ ಮಧ್ಯೆ, ಗುರುವಾರ ಬೆಳಿಗ್ಗೆ ಚಿತ್ರದ ಟೈಟಲ್‍ ಟೀಸರ್ ಬಿಡುಗಡೆಯಾಗಿದೆ. ‘ರಾಮಾಯಣ’ ಸಿನಿಮಾದಲ್ಲಿ ರಾಮನ ಪಾತ್ರದಲ್ಲಿ ರಣಬೀರ್ ಕಪೂರ್ ಅಭಿನಯಿಸುತ್ತಿದ್ದಾರೆ. ಸೀತೆಯಾಗಿ ಸಾಯಿಪಲ್ಲವಿ ಕಾಣಿಸಿಕೊಳ್ಳುತ್ತಿದ್ದಾರೆ. ಇನ್ನು, ರಾವಣನ ಪಾತ್ರ ಮಾಡುತ್ತಿದ್ದಾರೆ ಯಶ್‍. ಸನ್ನಿ ಡಿಯೋಲ್‍, ಆಂಜನೇಯನಾಗಿ ಅಭಿನಯಿಸುತ್ತಿದ್ದಾರೆ. ಈ ಚಿತ್ರವನ್ನು ನಿತೇಶ್ ತಿವಾರಿ ನಿರ್ದೇಶನ‌ ಮಾಡುತ್ತಿದ್ದು, ನಮಿತ್ ಮಲ್ಹೋತ್ರಾ ಅವರ ಪ್ರೈಮ್ ಫೋಕಸ್ ಸ್ಟುಡಿಯೋಸ್ ಮತ್ತು ಯಶ್ ಅವರ ಮಾನ್ಸ್ಟರ್ ಮೈಂಡ್ ಕ್ರಿಯೇಷನ್ಸ್ ನಲ್ಲಿ ನಿರ್ಮಾಣವಾಗುತ್ತಿದೆ.

‘ರಾಮಾಯಣ’ ಚಿತ್ರದ ಚಿತ್ರೀಕರಣ ಕಳೆದ ತಿಂಗಳಿನಿಂದ ಭರದಿಂದ ಸಾಗುತ್ತಿದ್ದು, ಚಿತ್ರೀಕರಣದಲ್ಲಿ ನಟ ಯಶ್‍ ಸಹ ಭಾಗವಹಿಸಿದ್ದಾರೆ. ಚಿತ್ರಕ್ಕಾಗಿ ಸಾಹಸ ದೃಶ್ಯಗಳ ಚಿತ್ರೀಕರಣ ನಡೆಯುತ್ತಿದ್ದು, ಅದಕ್ಕಾಗಿ ಹಾಲಿವುಡ್‌ನ ಜನಪ್ರಿಯ ಸ್ಟಂಟ್ ನಿರ್ದೇಶಕ ಗೈ ನೋರಿಸ್ ಅವರನ್ನು ಕರೆಸಲಾಗಿದೆ. ಇದಕ್ಕೂ ಮೊದಲು ಹಾಲಿವುಡ್‍ನ‌ ‘ಮ್ಯಾಡ್ ಮ್ಯಾಕ್ಸ್: ಫ್ಯೂರಿ ರೋಡ್ ಮತ್ತು ದಿ ಸುಸೈಡ್ ಸ್ಕ್ವಾಡ್‌’ ಮುಂತಾದ ಚಿತ್ರಗಳಿಗೆ ಸಾಹಸ ನಿರ್ದೇಶನ ಮಾಡಿದ್ದ ನೋರಿಸ್‍, ಇದೇ ಮೊದಲ ಬಾರಿಗೆ ಭಾರತೀಯ ಚಿತ್ರವೊಂದಕ್ಕೆ ಕೆಲಸ ಮಾಡುತ್ತಿದ್ದಾರೆ ಎಂದು ಹೇಳಲಾಗಿದೆ.

‘ರಾಮಾಯಣ’ ಚಿತ್ರವು ಎರಡು ಭಾಗಗಳಲ್ಲಿ ಬಿಡುಗಡೆಯಾಗುತ್ತಿದ್ದು, ಈ ಪೈಕಿ ಮೊದಲ ಭಾಗವು 2026ರ ದೀಪಾವಳಿಗೆ ಬಿಡುಗಡೆಯಾದರೆ, ಎರಡನೇ ಭಾಗ 2027ರ ದೀಪಾವಳಿಗೆ ಬಿಡುಗಡೆಯಾಗಲಿದೆ.

ಆಂದೋಲನ ಡೆಸ್ಕ್

Recent Posts

ಸಿಜೆಪಿ ನಾಯಕ ಅಭಿಜಿತ್ ದೀಪ್ಕೆ ಅಜ್ಜಿ ನಿಧನ

ಮುಂಬೈ: ಸಿಜೆಪಿ ಸಂಸ್ಥಾಪಕ ಅಭಿಜಿತ್‌ ದೀಪ್ಕೆ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದ ಗಂಟೆಗಳಲ್ಲಿ ಅವರ ಅಜ್ಜಿ ನಿಧನರಾಗಿದ್ದಾರೆ. ದೀರ್ಘಕಾಲದ…

10 hours ago

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ: ನಾಳೆ ಅಧಿಕೃತ ಚಾಲನೆ

ಮೈಸೂರು: ಮೈಸೂರಿನ ದಸರಾ ಮಹೋತ್ಸವದ ಉದ್ಘಾಟನೆಗೆ ಚಾಮುಂಡಿಬೆಟ್ಟದಲ್ಲಿ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ಉದ್ಘಾಟನಾ ಸಮಾರಂಭಕ್ಕಾಗಿ ಬೃಹತ್ ವೇದಿಕೆ ನಿರ್ಮಾಣ ಕಾರ್ಯ…

11 hours ago

ಮಲೆ ಮಹದೇಶ್ವರ ಬೆಟ್ಟದಲ್ಲಿ ಮಹಾಲಯ ಅಮಾವಾಸ್ಯೆ ಪ್ರಯುಕ್ತ ವಿಶೇಷ ಪೂಜೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಲಯ ಅಮಾವಾಸ್ಯೆ ಪ್ರಯುಕ್ತ ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ…

12 hours ago

ಅಭಿಜಿತ್ ದೀಪ್ಕೆ ಪೊಲೀಸ್ ವಶಕ್ಕೆ: ಜಂತರ್ ಮಂತರ್‌ನಲ್ಲಿ ಪ್ರತಿಭಟನೆಗೆ ಅಜಿಂಕ್ಯ ಶಿಂಧೆ ಸಾರಥ್ಯ

ನವದೆಹಲಿ: ಅಭಿಜಿತ್ ದೀಪ್ಕೆ ಪೊಲೀಸ್ ವಶದಲ್ಲಿರುವ ಹಿನ್ನೆಲೆಯಲ್ಲಿ, ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಸಿಜೆಪಿಯ ಸಂಘಟನಾ ಉಸ್ತುವಾರಿ ಅಜಿಂಕ್ಯ ಶಿಂಧೆ…

13 hours ago

ಓದುಗರ ಪತ್ರ: ಹೋರಾಟಗಳು ರಚನಾತ್ಮಕವಾಗಿರಲಿ, ಗಂಭೀರವಾಗಿರಲಿ

ಚುನಾವಣಾ ಆಯೋಗದ ವಿರುದ್ಧ ವಿಪಕ್ಷಗಳು ಹಾಗೂ ಕೆಲವು ಸಂಘಟನೆಗಳು ಪ್ರತಿಭಟನೆಗಳನ್ನು ಮಾಡುತ್ತಿರುವುದು ಪ್ರಸ್ತುತ ರಾಜಕೀಯ ಮತ್ತು ಸಾಮಾಜಿಕ ವಾತಾವರಣ ದಲ್ಲಿ…

16 hours ago

ಓದುಗರ ಪತ್ರ: ಒಂದು ವರ್ಷ ಅಲೆದಾಡಿಸಿದ ನಂತರ… !

ಮೈಸೂರಿನಲ್ಲಿ ಇ-ಖಾತಾ ಹಾಗೂ ಸಿ ಆರ್ ವಿತರಣೆ ಸಂಬಂಧ ಸಾರ್ವಜನಿಕರಿಂದ ಕುಂದು ಕೊರತೆ ಆಲಿಸಿದ ನಂತರ ಮೈಸೂರು ನಗರ ಪಾಲಿಕೆಯ…

16 hours ago