ಮನರಂಜನೆ

‘ಶಾಖಾಹಾರಿ’ ಆಯ್ತು; ಈಗ ‘ಅಜ್ಞಾತವಾಸಿ’ಯಾಗಿ ಬಂದ ರಂಗಾಯಣ ರಘು

ಕಳೆದ ವರ್ಷ ಬಿಡುಗಡೆಯಾದ ‘ಶಾಖಾಹಾರಿ’ ಚಿತ್ರದಲ್ಲಿ ತಮ್ಮ ಪಾತ್ರದ ಮೂಲಕ ಎಲ್ಲರಿಗೂ ಇಷ್ಟವಾಗಿದ್ದರು ರಂಗಾಯಣ ರಘು. ಈಗ ಆ ತರಹದ ಇನ್ನೊಂದು ವಿಭಿನ್ನ ಮತ್ತು ಗಂಭೀರವಾದ ಪಾತ್ರದೊಂದಿಗೆ ಅವರು ವಾಪಸ್ಸಾಗುತ್ತಿದ್ದಾರೆ, ಅದು ‘ಅಜ್ಞಾತವಾಸಿ’ ಚಿತ್ರದ ಮೂಲಕ.

ಈ ‘ಅಜ್ಞಾತವಾಸಿ’ಯ ಒಂದು ವಿಶೇಷತೆಯೆಂದರೆ, ಈ ಚಿತ್ರವನ್ನು ಇಬ್ಬರು ನಿರ್ದೇಶಕರು ರೂಪಿಸಿದ್ದಾರೆ. ‘ಗೋಧಿ ಬಣ್ಣ ಸಾಧಾರಣ ಮೈಕಟ್ಟು’ ಖ್ಯಾತಿಯ ಹೇಮಂತ್‍ ಎಂ.ರಾವ್‍ ಈ ಚಿತ್ರವನ್ನು ನಿರ್ಮಿಸಿದರೆ, ‘ಗುಳ್ಟು’ ಖ್ಯಾತಿಯ ಜನಾರ್ಧನ್‍ ಚಿಕ್ಕಣ್ಣ ಈ ಚಿತ್ರವನ್ನು ನಿರ್ದೇಶಿಸಿದ್ದಾರೆ. ಈ ಚಿತ್ರವು ಏಪ್ರಿಲ್‍.11ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.

ರಂಗಾಯಣ ರಘು, ಶರತ್‍ ಲೋಹಿತಾಶ್ವ, ಪಾವನಾ ಗೌಡ, ಸಿದ್ದು ಮೂಲಿಮನಿ, ರವಿಶಂಕರ್‍ ಗೌಡ ಮುಂತಾದವರು ನಟಿಸಿರುವ ಈ ಚಿತ್ರದ ಟ್ರೇಲರ್‍ ಇತ್ತೀಚೆಗೆ ಬಿಡುಗಡೆಯಾಗಿದೆ. ಮಲೆನಾಡಿನಲ್ಲಿ 90ರ ಕಾಲಘಟ್ಟದಲ್ಲಿ ನಡೆಯುವ ಒಂದಿಷ್ಟು ಕೊಲೆಗಳ ಸುತ್ತ ಈ ಚಿತ್ರ ಸಾಗುತ್ತದೆ.

ಈ ಚಿತ್ರದ ಕುರಿತು ಮಾತನಾಡುವ ರಂಗಾಯಣ ರಘು, ‘ಒಬ್ಬ ನಿರ್ದೇಶಕ ಇನ್ನೊಬ್ಬ ನಿರ್ದೇಶಕರ ಕಥೆ ಕೇಳಿ ಮೆಚ್ಚಿ ಸಿನಿಮಾ ನಿರ್ಮಿಸಿದ್ದು ವಿಶೇಷ. ಈ ಚಿತ್ರವನ್ನು ಹೇಮಂತ್‍ ನಿರ್ದೇಶಿಸಬಹುದಿತ್ತು. ಏಕೆಂದರೆ, ಅವರು ಈಗಾಗಲೇ ಸಾಕಷ್ಟು ಒಳ್ಳೆಯ ಚಿತ್ರಗಳನ್ನು ಮಾಡಿರುವವರು. ಆದರೆ, ಅವರು ಜನಾರ್ಧನ್‍ ಚಿಕ್ಕಣ್ಣಗೆ ಚಿತ್ರ ನಿರ್ದೇಶಿಸುವ ಅವಕಾಶ ಕೊಟ್ಟರು’ ಎಂದರು.

ಈ ಚಿತ್ರದಲ್ಲಿ ಎಲ್ಲಾ ಪಾತ್ರಗಳೂ ಹೊಟ್ಟೆಕಿಚ್ಚಾಗುವಂತೆ ಇವೆಯಂತೆ. ‘ಶರತ್‍ ಪಾತ್ರವಂತೂ ಡಬ್ಬಲ್‍ ಹೊಟ್ಟೆಕಿಚ್ಚಾಗುತ್ತದೆ. ಪಾವನಾ, ಸಿದ್ದು, ರವಿಶಂಕರ್‍ ಗೌಡ ಎಲ್ಲಾ ಪಾತ್ರಗಳೂ ಚೆನ್ನಾಗಿವೆ. ಈಗಾಗೇ ಕೊಲೆಗಳ ಬಗ್ಗೆ ಸಾಕಷ್ಟು ಒಳ್ಳೆಯ ಚಿತ್ರಗಳು ಬಂದಿವೆ. ಆ ಸಾಲಿಗೆ ಇದು ಸಹ ಸೇರುತ್ತದೆ ಎಂಬ ನಂಬಿಕೆ ಇದೆ’ ಎಂದರು.

ಸಣ್ಣ ಹಳ್ಳಿಯೊಂದರಲ್ಲಿ ನಡೆಯುವ ಕಾಲ್ಪನಿಕ ಕಥೆ ಇದು ಎನ್ನುವ ಜನಾರ್ಧನ್ ಚಿಕ್ಕಣ್ಣ, ‘ಮಲೆನಾಡಿನಲ್ಲಿ ನಡೆಯುವ ಕಥೆ. ಹಳ್ಳಿಯಲ್ಲಿ ಪೊಲೀಸ್ ಸ್ಟೇಷನ್ ಸ್ಥಾಪನೆಯಾಗಿ 25 ವರ್ಷವಾಗಿರುತ್ತದೆ. ಯಾವುದೇ ಸಣ್ಣ ಕೇಸ್ ಕೂಡ ಅಲ್ಲಿ ದಾಖಲಾಗಿರುವುದಿಲ್ಲ. 1997ರಲ್ಲಿ ಮರ್ಡರ್ ಕೇಸ್ ದಾಖಲಾಗುತ್ತದೆ. ಅನುಭವ ಇಲ್ಲದ ಪೊಲೀಸ್ ಅಲ್ಲಿಗೆ ಬಂದಾಗ ಈ ಕೇಸ್ ಹೇಗೆ ಬಗೆಹರಿಸುತ್ತಾರೆ ಎಂಬುವುದೇ ಕಥೆ’ ಎಂದರು.

‘ಅಜ್ಞಾತವಾಸಿ’ ಚಿತ್ರಕ್ಕೆ ಚರಣ್ ರಾಜ್ ಸಂಗೀತ, ಅದ್ವೈತ ಗುರುಮೂರ್ತಿ ಛಾಯಾಗ್ರಹಣವಿದೆ.

ಆಂದೋಲನ ಡೆಸ್ಕ್

Recent Posts

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ:  ಚಳಿಗಾಲದ ಸಂಸತ್ ಅಧಿವೇಶನದ ಒಂದು ವಾರೆನೋಟ

ದೆಹಲಿ ಕಣ್ಣೋಟ -ಶಿವಾಜಿ ಗಣೇಶನ್‌  ಹತ್ತೊಂಬತ್ತು ದಿನಗಳ ಸಂಸತ್ತಿನ ಚಳಿಗಾಲದ ಅಧಿವೇಶನ ಮುಕ್ತಾಯಗೊಂಡಿದೆ. ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರ ಎಂದಿನಂತೆ…

6 mins ago

ಅಕ್ರಮ ಗಾಂಜಾ ಮಾರಾಟ: ಮಹಿಳೆ ಬಂಧನ

ಹನೂರು : ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ಮಹಿಳೆಯೋರ್ವಳನ್ನು ಮಲೆ ಮಹದೇಶ್ವರ ಬೆಟ್ಟ ಪೊಲೀಸರು ಬಂಧಿಸಿರುವ ಘಟನೆ ಜರುಗಿದೆ. ಹನೂರು…

16 mins ago

ಓದುಗರ ಪತ್ರ:  ಸಾಮಾಜಿಕ ಬಹಿಷ್ಕಾರಕ್ಕೆ ಜೈಲು ಶಿಕ್ಷೆ ಸ್ವಾಗತಾರ್ಹ

ಸಾಮಾಜಿಕ ಬಹಿಷ್ಕಾರ ಹಾಕಿದವರಿಗೆ ಜೈಲು ಶಿಕ್ಷೆ ಹಾಗೂ ಲಕ್ಷ ರೂ. ದಂಡವನ್ನು ವಿಧಿಸುವ ಮಸೂದೆಗೆ ವಿಧಾನಸಭೆ ಚಳಿಗಾಲದ ಅಧಿವೇಶನದಲ್ಲಿ ಅನುಮೋದನೆ…

1 hour ago

ಓದುಗರ ಪತ್ರ: ಬಿಎಂಟಿಸಿ ಜನಹಿತ ಕಾಯಲಿ

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಆರ್ಥಿಕ ನಷ್ಟದಿಂದ ಹೊರಬರಲು ಬಸ್‌ಗಳ ಮೇಲೆ ಜಾಹೀರಾತು ಪ್ರದರ್ಶನಕ್ಕೆ ಅವಕಾಶ ನೀಡಿದೆ. ಆದರೆ ಈ…

1 hour ago

ಓದುಗರ ಪತ್ರ: ಸಾರ್ವಜನಿಕ ಗ್ರಂಥಾಲಯದಲ್ಲಿ ಮೂಲಭೂತ ಸೌಕರ್ಯ ಕಲ್ಪಿಸಿ

ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ಪಟ್ಟಣದ ಊಟಿ ರಸ್ತೆಯಲ್ಲಿರುವ ಜಿಲ್ಲಾ ಕೇಂದ್ರ ಗ್ರಂಥಾಲಯ ಶಾಖೆಗೆ ಪ್ರತಿನಿತ್ಯ ಹಿರಿಯ ನಾಗರಿಕರು, ವಿದ್ಯಾರ್ಥಿಗಳು, ಸ್ಪರ್ಧಾತ್ಮಕ…

1 hour ago

‘ಶಕ್ತಿ’ ಸ್ಕೀಮ್‌ನಿಂದ ಸಾರಿಗೆ ನಿಗಮಗಳಿಗೆ ನಿಶ್ಶಕ್ತಿ!

ನಿಗಮಗಳಿಗೆ ಸಕಾಲಕ್ಕೆ ಹಣ ಬಿಡುಗಡೆ ಮಾಡದ ಸರ್ಕಾರ; ಏದುಸಿರು ಬಿಡುತ್ತಿರುವ ನಿಗಮಗಳು ಮೈಸೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಯ ಪಂಚ…

2 hours ago