ಬೆಂಗಳೂರು: ಹಲವು ಕನ್ನಡ ಧಾರಾವಾಹಿಗಳ ಮೂಲಕ ಖ್ಯಾತಿ ಪಡೆದಿರುವ ನಟಿ ರಂಜಿನಿ ರಾಘವನ್‌ಗೆ ಯುವ ಸಾಹಿತ್ಯ ರತ್ನ ಬಿರುದು ನೀಡಲಾಗಿದೆ.
ಹಲವು ಕನ್ನಡ ಧಾರಾವಾಹಿಗಳ ಮೂಲಕ ಮನೆ ಮಾತಾಗಿರುವ ನಟಿ ರಂಜಿನಿ ರಾಘವನ್ ಅವರು, ನಟಿಯ ಜೊತೆ ಜೊತೆಗೆ ಒಳ್ಳೆಯ ಬರಹಗಾರ್ತಿ. ಇವರು ಕತೆಡಬ್ಬಿ ಎಂಬ ಕಥಾಸಂಕಲನ ಮತ್ತು ಸ್ವೈಪ್ ರೈಟ್ ಎಂಬ ಕಾದಂಬರಿ ಬರೆದು ಸಾಹಿತ್ಯ ಲೋಕದಲ್ಲಿಯೂ ಮಿಂಚುತ್ತಿದ್ದಾರೆ. ರಂಜಿನಿ ಅವರಿಗೆ ಕನ್ನಡದ ಮೇಲೆ ಅತೀ ಹೆಚ್ಚು ಆಸಕ್ತಿ. ಸಾಹಿತ್ಯ ಕ್ಷೇತ್ರದಲ್ಲಿ ಗುರುತಿಸಿಕೊಳ್ಳುವ ಮೂಲಕ ಇದನ್ನು ಅವರು ಸಾಬೀತು ಮಾಡಿದ್ದಾರೆ.
ಶೂಟಿಂಗ್‌ನ ಬಿಜಿ ಶೆಡ್ಯೂಲ್ ನಡುವೆಯೂ ಪುಸ್ತಕ ಬರೆಯಲು ಟೈಂ ಮಾಡಿಕೊಳ್ಳುತ್ತಾರೆ. ನಟನೆಯಲ್ಲಿ ತೊಡಗಿಸಿಕೊಂಡವರು ಬರವಣಿಗೆ ಬಗ್ಗೆ ಗಮನ ನೀಡೋಕೆ ಸಮಯ ಸಿಗೋದು ಕಡಿಮೆ. ಅದರಲ್ಲೂ ಧಾರಾವಾಹಿ ನಟ-ನಟಿಯರು ಪ್ರತಿ ದಿನ ಶೂಟಿಂಗ್‌ನಲ್ಲೇ ಮುಳುಗಿರುತ್ತಾರೆ. ಅದರ ನಡುವೆಯೂ ಕಥೆ, ಕಾದಂಬರಿ ಬರೆಯಬೇಕು ಎಂದರೆ ಸಮಯ ಹೊಂದಿಸಿಕೊಳ್ಳುವುದು ಸುಲಭದ ಮಾತಲ್ಲ. ಆ ಎಲ್ಲಾ ನೆಪಗಳನ್ನು ಬದಿಗಿಟ್ಟು ನಟಿ ರಂಜಿನಿ ರಾಘವನ್ ಅವರು ಲೇಖಕಿಯಾಗಿ ಗುರುತಿಸಿಕೊಂಡಿದ್ದಾರೆ.
ಇದೀಗ ನಟಿಗೆ ಇನ್ನೊಂದು ಹೆಮ್ಮೆಯ ಗರಿ ಮೂಡಿದೆ. ಇವರ ಸಾಹಿತ್ಯ ಪ್ರೇಮವನ್ನು ಗುರುತಿಸಿ ಕರ್ನಾಟಕ ಕನ್ನಡ ಬರಹಗಾರರ ಮತ್ತು ಪ್ರಕಾಶಕರ ಸಂಘದ ವತಿಯಿಂದ ಯುವ ಸಾಹಿತ್ಯ ರತ್ನ ಬಿರುದು ನೀಡಿ ಗೌರವಿಸಲಾಗಿದೆ. ಇದನ್ನು ನಟಿ ರಂಜಿನಿ ರಾಘವನ್ ತಮ್ಮ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಶೇರ್ ಮಾಡಿಕೊಂಡಿದ್ದಾರೆ.
ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…
ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…
ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…
ರಾಜ್ಯದ ನಗರ ಪ್ರದೇಶಗಳಲ್ಲಿ ದಿನಂಪ್ರತಿ ಶೇ.೭೦ ಕ್ಕೂ ಹೆಚ್ಚು ಹಸಿ ತ್ಯಾಜ್ಯ ಸೃಷ್ಟಿಯಾಗುತ್ತಿದೆ. ಈ ತ್ಯಾಜ್ಯವನ್ನು ಸುಮ್ಮನೆ ಸುರಿಯುವ ಬದಲು…
ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಇಂಡಿಯಾ ಯೋಜನೆಯಡಿ ಯುಪಿಐ ಪಾವತಿ ವ್ಯವಸ್ಥೆಯು ಭಾರತೀಯರ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿದೆ. ಜೇಬಿನಲ್ಲಿ ಹಣವಿಲ್ಲದಿದ್ದರೂ…
ನರೇಂದ್ರ ಮೋದಿ ಅವರು ೨೦೦೧ರಲ್ಲಿ ಮೊದಲ ಬಾರಿಗೆ ಗುಜರಾತ್ ಸಿಎಂ ಆಗಿ ಅಧಿಕಾರ ಸ್ವೀಕರಿಸಿದರು. ಸತತ ೧೫ ವರ್ಷಗಳು ಅಲ್ಲಿ…