ಉದಯಪುರ: ಉದಯಪುರದ ಅರಮನೆಯಲ್ಲಿ ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಅವರು ಇಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.
ಇಂದು ಬೆಳಿಗ್ಗೆ ಸರಿಯಾಗಿ 10 ಗಂಟೆ 10 ನಿಮಿಷಕ್ಕೆ ರಾಜಸ್ಥಾನದ ಉದಯಪುರದಲ್ಲಿ ಹಿಂದೂ ಸಂಪ್ರದಾಯದಂತೆ ಇವರ ವಿವಾಹ ಮಹೋತ್ಸವ ಜರುಗಿತು.
ಅತ್ಯಂತ ಆಪ್ತರು ಹಾಗೂ ಕುಟುಂಬ ಸದಸ್ಯರ ಸಮ್ಮುಖದಲ್ಲಿ ಈ ಜೋಡಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.
ವೇದ ಮಂತ್ರ ಘೋಷಗಳು ಹಾಗೂ ಮಂಗಳ ವಾದ್ಯಗಳ ನಡುವೆ ವಿಜಯ್, ರಶ್ಮಿಕಾ ಕೊರಳಿಗೆ ಮಾಂಗಲ್ಯ ಧಾರಣೆ ಮಾಡಿದರು. ಹಿಂದೂ ಸಂಪ್ರದಾಯದಂತೆ ನಡೆದ ಈ ಮದುವೆಯಲ್ಲಿ ವಿಜಯ್ ಹಾಗೂ ರಶ್ಮಿಕಾ ನೋಡಲು ಬಹಳ ಸುಂದರವಾಗಿ ಕಾಣುತ್ತಿದ್ದರು.
ಮಾಹಿತಿ ಪ್ರಕಾರ ಇಂದು ಬೆಳಿಗ್ಗೆ ಹಿಂದೂ ಸಂಪ್ರದಾಯದಂತೆ ಮದುವೆಯಾಗಿದ್ದು, ಸಂಜೆ 4.30 ಗಂಟೆಗೆ ರಶ್ಮಿಕಾ ಅವರ ಮೂಲದ ಕೊಡವ ಸಂಪ್ರದಾಯದ ಪ್ರಕಾರ ವಿವಾಹದ ವಿಧಿವಿಧಾನಗಳು ನಡೆಯಲಿದೆ.
ಮೈಸೂರು: ಮೊದಲ ಬಾರಿ ಗೆದ್ದವರು ಸಚಿವ ಸ್ಥಾನ ಕೇಳುವುದರಲ್ಲಿ ತಪ್ಪಿಲ್ಲ ಎಂದು ಶಾಸಕ ಕೆ.ಹರೀಶ್ ಗೌಡ ಹೇಳಿದ್ದಾರೆ. ಈ ಕುರಿತು…
ಮೈಸೂರು: ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸುವಲ್ಲಿ ವಿಫಲರಾಗಿದ್ದೇವೆ ಎಂದು ಶಾಸಕ ತನ್ವೀರ್ ಸೇಠ್ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು, ಗ್ಯಾರಂಟಿ…
ಮೈಸೂರು: ಅಧಿಕಾರ ಹಸ್ತಾಂತರ ವಿಚಾರದಲ್ಲಿ ರಾಜ್ಯದಲ್ಲಿ ಗೊಂದಲವಿದೆ ಎಂದು ಶಾಸಕ ತನ್ವೀರ್ ಸೇಠ್ ಹೇಳಿದ್ದಾರೆ. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ…
ಯಾದಗಿರಿ: ಪೋಕ್ಸೋ ಪ್ರಕರಣ ದಾಖಲಾಗುತ್ತಿದ್ದಂತೆ ನಾಪತ್ತೆಯಾಗಿರುವ ಸ್ವಯಂ ಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ಅಜ್ಞಾತ ಸ್ಥಳದಿಂದ ವಿಡಿಯೋ ಹೇಳಿಕೆ ಬಿಡುಗಡೆ…
ಟಿ.ನರಸೀಪುರ: ತಾಲ್ಲೂಕಿನಲ್ಲಿ ಚಿರತೆಗಳ ಹಾವಳಿ ಮಿತಿಮೀರಿದ್ದು, ಜನತೆ ಭಯಭೀತರಾಗಿದ್ದಾರೆ. ತಾಲ್ಲೂಕಿನ ಎಸ್.ಕೆಬ್ಬೆಹುಂಡಿ, ಕನ್ನಾಯಕನಹಳ್ಳಿ ಗ್ರಾಮದ ಮಧ್ಯೆ ಚಿರತೆ ಪ್ರತ್ಯಕ್ಷವಾಗಿದ್ದು, ಈ…
ಬೆಂಗಳೂರು: ರಾಷ್ಟ್ರ ರಾಜಧಾನಿ ದೆಹಲಿಯಂತೆ ಬೆಂಗಳೂರು ಸಹ ಮತ್ತೊಂದು ಗ್ಯಾಸ್ ಛೇಂಬರ್ ಆಗದಂತೆ ಕ್ರಮ ವಹಿಸಲು ಶೀಘ್ರವೇ ನಗರದ ಎಲ್ಲ…