misa rashmika
ರಶ್ಮಿಕಾ ಮಂದಣ್ಣ ಚಿತ್ರದಿಂದ ಚಿತ್ರಕ್ಕೆ ವಿವಿಧ ಪಾತ್ರಗಳನ್ನು ಮಾಡುತ್ತಿದ್ದಾರೆ. ಈಗ ಅವರು ‘ಮೈಸಾ’ ಎಂಬ ಹೊಸ ಚಿತ್ರದಲ್ಲಿ ನಟಿಸುತ್ತಿದ್ದು, ಈ ಚಿತ್ರದಲ್ಲಿ ಅವರು ಗೊಂಡಾ ಬುಡಕಟ್ಟು ಮಹಿಳೆಯ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ ಎಂಬ ಸುದ್ದಿ ಇದೆ. ‘ಮೈಸಾ’ ಒಂದು ಪ್ಯಾನ್ ಇಂಡಿಯಾ ಚಿತ್ರವಾಗಿದ್ದು, ಐದು ಭಾಷೆಗಳಲ್ಲಿ ಬಿಡುಗಡೆಯಾಗಲಿದೆ.
ಈ ಚಿತ್ರದ ಮುಹೂರ್ತ ಸಮಾರಂಭ ಭಾನುವಾರ ನಡೆದಿದ್ದು, ಚಿತ್ರಕ್ಕೆ ಚಾಲನೆ ಸಿಕ್ಕಿದೆ. ತೆಲುಗಿನ ಖ್ಯಾತ ನಿರ್ಮಾಪಕ ಸುರೇಶ್ ಚಿತ್ರದ ಮೊದಲ ದೃಶ್ಯಕ್ಕೆ ಕ್ಲಾಪ್ ಮಾಡಿದ್ದಾರೆ. ಈ ಸಂದರ್ಭದಲ್ಲಿ ರಶ್ಮಿಕಾ ಬುಡಕಟ್ಟು ಮಹಿಳೆಯರೊಂದಿಗೆ ಗೋಂಡ್ ಹಾಡಿಗೆ ಡಾನ್ಸ್ ಮಾಡಿ ಸಂಭ್ರಮಿಸಿದರು. ಭಾನುವಾರ ಚಿತ್ರದ ಮುಹೂರ್ತವಾಗಿದ್ದು, ಇಂದಿನಿಂದ ಚಿತ್ರೀಕರಣ ಪ್ರಾರಂಭವಾಗಲಿದೆ.
ಈ ಚಿತ್ರವನ್ನು ರವೀಂದ್ರ ಪುಲ್ಲೇ ನಿರ್ದೇಶನ ಮಾಡುತ್ತಿದ್ದು, ಅಜಯ್ ಹಾಗೂ ಅನಿಲ್ ಸಯ್ಯಾಪುರೆಡ್ಡಿ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ. ಇದುವರೆಗೂ ಸಾಫ್ಟ್ ಆದಂತಹ ಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತಿದ್ದ ರಶ್ಮಿಕಾ, ಈ ಚಿತ್ರದಲ್ಲಿ ಉಗ್ರಾವತಾರ ತಾಳಿದ್ದಾರೆ.
ಇತ್ತೀಚೆಗೆ ಈ ಚಿತ್ರದ ಪೋಸ್ಟರ್ ಬಿಡುಗಡೆಯಾಗಿದ್ದು, ವಿಶೇಷವೆಂದರೆ ಒಂದೊಂದು ಭಾಷೆಯಲ್ಲಿ ಒಬ್ಬೊಬ್ಬ ಸೆಲೆಬ್ರಿಟಿ ಈ ಪೋಸ್ಟರ್ ಬಿಡುಡೆ ಮಾಡಿದ್ದಾರೆ. ತೆಲುಗಿನ ಪೋಸ್ಟರನ್ನು ನಿರ್ದೇಶಕ ಹನು ರಾಘವಪುಡಿ ಬಿಡುಗಡೆ ಮಾಡಿದರೆ, ತಮಿಳಿನಲ್ಲಿ ‘ಕುಬೇರ’ ನಟ ಧನುಷ್ ಬಿಡುಗಡೆ ಮಾಡಿದ್ದರೆ. ಕನ್ನಡದಲ್ಲಿ ಶಿವರಾಜಕುಮಾರ್, ಹಿಂದಿಯಲ್ಲಿ ವಿಕ್ಕಿ ಕೌಶಾಲ್ ಮತ್ತು ಮಲಯಾಳಂ ಪೋಸ್ಟರನ್ನು ದುಲ್ಕರ್ ಸಲ್ಮಾನ್ ಬಿಡುಗಡೆ ಮಾಡಿ ರಶ್ಮಿಕಾ ಮತ್ತು ಚಿತ್ರತಂಡಕ್ಕೆ ಶುಭಹಾರೈಸಿದ್ದಾರೆ.
ರಶ್ಮಿಕಾ ಅಭಿನಯದ ‘ಛಾವಾ’, ‘ಕುಬೇರ’ ಮತ್ತು ‘ಸಿಕಂದರ್’ ಚಿತ್ರಗಳು ಈ ವರ್ಷ ಈಗಾಗಲೇ ಬಿಡುಗಡೆಯಾಗಿವೆ. ‘ದಿ ಗರ್ಲ್‍ಫ್ರೆಂಡ್’ ಮತ್ತು ‘ತಮಾ’ ಚಿತ್ರಗಳು ಬಿಡುಗಡೆಯಾಗಬೇಕಿದ್ದು, ‘ಮೈಸಾ’ ಚಿತ್ರದ ಚಿತ್ರೀಕರಣ ಪ್ರಾರಂಭವಾಗಿದೆ.
ಮೈಸೂರಿನ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಮಾಜಿ ಸಚಿವ ಜಿ.ಟಿ.ದೇವೇಗೌಡರ ನೇತೃತ್ವದಲ್ಲಿ ಇಸ್ಕಾನ್ ಸಂಸ್ಥೆಯ ಅಕ್ಷಯಪಾತ್ರೆ ಫೌಂಡೇಶನ್ ಸಹಯೋಗದೊಂದಿಗೆ…
ರಾಜ್ಯದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಅವರ ಕಚೇರಿಯಲ್ಲಿ ಸಮವಸ್ತ್ರದಲ್ಲಿದ್ದಾಗಲೇ ಮಹಿಳೆಯೊಂದಿಗೆ ನಡೆಸಿದ್ದಾರೆ ಎನ್ನಲಾದ ರಾಸಲೀಲೆಯ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್…
ಉತ್ತರ ಅಟ್ಲಾಂಟಿಕ್ ಸಮುದ್ರದಲ್ಲಿ ಇರುವ ವಿಶ್ವದ ಅತಿದೊಡ್ಡ ದ್ವೀಪವಾಗಿರುವ ಹಾಗೂ ಡೆನ್ಮಾರ್ಕ್ ದೇಶದ ನಿಯಂತ್ರಣದಲ್ಲಿರುವ ‘ಗ್ರೀನ್ ಲ್ಯಾಂಡ್’ ದ್ವೀಪವನ್ನು ತನ್ನ…
ನವೀನ್ ಡಿಸೋಜ ಅರಣ್ಯ ಇಲಾಖೆಯಿಂದ ಬೆಂಕಿ ರೇಖೆ ನಿರ್ಮಾಣ ಕಾರ್ಯ ಚುರುಕು; ಜನರಲ್ಲಿ ಜಾಗೃತಿ ಮೂಡಿಸಲು ಚಿಂತ ಮಡಿಕೇರಿ: ಬೇಸಿಗೆ…
ಎಂ ಯೋಗಾನಂದ್ ಜ.೨೩ರಿಂದ ೨೬ರವರೆಗೆ ಜಾತ್ರಾ ಮಹೋತ್ಸವ; ಮೆರುಗು ನೀಡಲಿರುವ ಗಾಡಿ ಓಡಿಸುವ ಸ್ಪರ್ಧೆ ಹುಣಸೂರು: ತಾಲ್ಲೂಕಿನ ಬಾಚಳ್ಳಿ ಗ್ರಾಮದಲ್ಲಿ…