ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಆದಾಯ ತೆರಿಗೆ ಪಾವತಿದಾರರಲ್ಲಿ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಮೊದಲ ಸ್ಥಾನದಲ್ಲಿದ್ದಾರೆ.
ಕಿರಿಕ್ ಪಾರ್ಟಿ ಮೂಲಕ ಕನ್ನಡದ ಚಿತ್ರರಂಗಕ್ಕೆ ಎಂಟ್ರಿಕೊಟ್ಟ ರಶ್ಮಿಕಾ ಮಂದಣ್ಣ ನಂತರ ಟಾಲಿವುಡ್, ಬಾಲಿವುಡ್ ಸೇರಿದಂತೆ ಬಹುಭಾಷಾ ಚಿತ್ರಗಳಲ್ಲಿ ನಟಿಸಿದ್ದಾರೆ.
ತಮ್ಮ ಉದ್ಯಮದ ಹಣಕಾಸಿನ ವ್ಯವಹಾರವನ್ನು ರಶ್ಮಿಕಾ ಮಂದಣ್ಣ ಪ್ರೊಡಕ್ಷನ್ಸ್ ಎಲ್‌ಎಲ್‌ಪಿ ಹೆಸರಿನಲ್ಲಿ ಮಾಡುತ್ತಿದ್ದು, ಮಡಿಕೇರಿಯಿಂದಲೇ ಅವರು ಆದಾಯ ತೆರಿಗೆ ಪಾವತಿಸುತ್ತಿದ್ದಾರೆ.
2025-26ನೇ ಆರ್ಥಿಕ ವರ್ಷದಲ್ಲಿ ಕೊಡಗು ಜಿಲ್ಲೆಯಿಂದ ಅತಿ ಹೆಚ್ಚು ತೆರಿಗೆ ಪಾವತಿದಾರರಾಗಿ ರಶ್ಮಿಕಾ ಮಂದಣ್ಣ ಗುರುತಿಸಿಕೊಂಡಿದ್ದಾರೆ. ಪ್ರಸಕ್ತ ವರ್ಷದಲ್ಲಿ ಅವರು ನಾಲ್ಕು ಕೋಟಿಗೂ ಅಧಿಕ ತೆರಿಗೆ ಪಾವತಿ ಮಾಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.




