Categories: ಮನರಂಜನೆ

ಕೊಡಗು ಜಿಲ್ಲೆಯಲ್ಲಿ ಆದಾಯ ತೆರಿಗೆ ಪಾವತಿದಾರರಲ್ಲಿ ರಶ್ಮಿಕಾ ಮಂದಣ್ಣ ನಂಬರ್.‌1

ಮಡಿಕೇರಿ: ಕೊಡಗು  ಜಿಲ್ಲೆಯಲ್ಲಿ ಆದಾಯ ತೆರಿಗೆ ಪಾವತಿದಾರರಲ್ಲಿ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಮೊದಲ ಸ್ಥಾನದಲ್ಲಿದ್ದಾರೆ.

ಕಿರಿಕ್‌ ಪಾರ್ಟಿ ಮೂಲಕ ಕನ್ನಡದ ಚಿತ್ರರಂಗಕ್ಕೆ ಎಂಟ್ರಿಕೊಟ್ಟ ರಶ್ಮಿಕಾ ಮಂದಣ್ಣ ನಂತರ ಟಾಲಿವುಡ್‌, ಬಾಲಿವುಡ್‌ ಸೇರಿದಂತೆ ಬಹುಭಾಷಾ ಚಿತ್ರಗಳಲ್ಲಿ ನಟಿಸಿದ್ದಾರೆ.

ತಮ್ಮ ಉದ್ಯಮದ ಹಣಕಾಸಿನ ವ್ಯವಹಾರವನ್ನು ರಶ್ಮಿಕಾ ಮಂದಣ್ಣ ಪ್ರೊಡಕ್ಷನ್ಸ್‌ ಎಲ್‌ಎಲ್‌ಪಿ ಹೆಸರಿನಲ್ಲಿ ಮಾಡುತ್ತಿದ್ದು, ಮಡಿಕೇರಿಯಿಂದಲೇ ಅವರು ಆದಾಯ ತೆರಿಗೆ ಪಾವತಿಸುತ್ತಿದ್ದಾರೆ.

2025-26ನೇ ಆರ್ಥಿಕ ವರ್ಷದಲ್ಲಿ ಕೊಡಗು ಜಿಲ್ಲೆಯಿಂದ ಅತಿ ಹೆಚ್ಚು ತೆರಿಗೆ ಪಾವತಿದಾರರಾಗಿ ರಶ್ಮಿಕಾ ಮಂದಣ್ಣ ಗುರುತಿಸಿಕೊಂಡಿದ್ದಾರೆ. ಪ್ರಸಕ್ತ ವರ್ಷದಲ್ಲಿ ಅವರು ನಾಲ್ಕು ಕೋಟಿಗೂ ಅಧಿಕ ತೆರಿಗೆ ಪಾವತಿ ಮಾಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಓದುಗರ ಪತ್ರ: ಸಾರ್ವಜನಿಕ ಶೌಚಾಲಯಗಳ ಬೀಗ ತೆರವು

ಮೈಸೂರಿನ ಮೆಟ್ರೋಪೋಲ್ ವೃತ್ತದ ಸಮೀಪ ಹಾಗೂ ಕುವೆಂಪುನಗರದ ಉದಯರವಿ ರಸ್ತೆಯಲ್ಲಿರುವ ಸಾರ್ವಜನಿಕ ಶೌಚಾಲಯಗಳಿಗೆ ಬೀಗ ಹಾಕಿರುವುದರಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿರುವ ಬಗ್ಗೆ…

57 mins ago

ಓದುಗರ ಪತ್ರ: ಬಾಂಬ್ ಬೆದರಿಕೆ: ಕಠಿಣ ಶಿಕ್ಷೆ ನೀಡಿ

ಇತ್ತೀಚಿನ ದಿನಗಳಲ್ಲಿ ಶಾಲಾ ಕಾಲೇಜುಗಳು, ನ್ಯಾಯಾಲಯ ಮೊದಲಾದ ಕಡೆ ಬಾಂಬ್ ಇಡಲಾಗಿದೆ ಎಂದು ದುಷ್ಕರ್ಮಿಗಳು ಫೋನ್, ಇ-ಮೇಲ್ ಮೂಲಕ ಬೆದರಿಕೆ…

59 mins ago

ಓದುಗರ ಪತ್ರ: ದಾಖಲೆ ಸಿದ್ದರಾಮಯ್ಯನವರಿಗೆ ಅಭಿನಂದನೆಗಳು

ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾಜ್ಯದ ಅತಿಹೆಚ್ಚು ದೀರ್ಘಾವಧಿಯ ಮುಖ್ಯಮಂತ್ರಿ ಎಂಬ ದಾಖಲೆ ಬರೆದಿದ್ದಾರೆ. ಇದಕ್ಕೆ ಸಂಬಂಧಿಸಿದ ಹಾಗೆ ರಾಜ್ಯದ ಅನೇಕ…

1 hour ago

ಕಕ್ಕೆಹೊಳೆ, ಗಾಂಧಿ ವೃತ್ತದಲ್ಲಿ ಕ್ಯಾಮೆರಾ ಕಾರ್ಯಾರಂಭ

ಸಂಚಾರ ನಿಯಮ ಉಲ್ಲಂಸಿದವರ ವಿರುದ್ಧ ೮೧ ಪ್ರಕರಣ ದಾಖಲು! ಲಕ್ಷ್ಮೀಕಾಂತ್ ಕೊಮಾರಪ್ಪ ಸೋಮವಾರಪೇಟೆ: ಹೊಸ ವರ್ಷಾಚರಣೆ ಹಾಗೂ ರಸ್ತೆ ಸುರಕ್ಷತಾ ಸಪ್ತಾಹದ…

1 hour ago

ರಸ್ತೆಗಳು ಗುಂಡಿಮಯ; ಸಂಚಾರ ಅಯೋಮಯ

ಪ್ರಶಾಂತ್ ಎಸ್. ಮೈಸೂರು: ನಗರದ ಸುಗಮ ಸಂಚಾರಕ್ಕಾಗಿ ನಿರ್ಮಿಸಿದ ರಸ್ತೆಗಳು ಸಂಪೂರ್ಣ ಹಾಳಾಗಿದ್ದು, ವಾಹನ ಸಂಚಾರಕ್ಕೆ ತುಂಬಾ ತೊಡಕಾಗಿದೆ. ಗಂಗೋತ್ರಿ…

1 hour ago

‘ಶಾಲೆಗೆ ಹೋಗಲು ವಾಹನ ವ್ಯವಸ್ಥೆ ಮಾಡಿಕೊಡಿ’

ಕುರುಬನದೊಡ್ಡಿ ಗ್ರಾಮದ ಶಾಲಾ ವಿದ್ಯಾರ್ಥಿಗಳಿಂದ ಸಿಎಂ, ಶಾಸಕರಿಗೆ ಪತ್ರ ಹನೂರು: ತಾಲ್ಲೂಕಿನ ಬೈಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಂಡೆ ಕುರುಬನದೊಡ್ಡಿ…

1 hour ago