ಮನರಂಜನೆ

‘ಮೈಸಾ’ ಚಿತ್ರದಲ್ಲಿ ಉಗ್ರಾವತಾರ ತಾಳಿದ ರಶ್ಮಿಕಾ ಮಂದಣ್ಣ …

ರಶ್ಮಿಕಾ ಮಂದಣ್ಣ ಸಿನಿಮಾ ಮೇಲೆ ಸಿನಿಮಾ ಮಾಡುತ್ತಿದ್ದಾರೆ. ಇತ್ತೀಚಿಗಷ್ತೇ ಅವರು ಹಿಂದಿಯ ‘ಕಾಕ್ಟೇಲ್‍ 2’ ಎಂಬ ಚಿತ್ರದಲ್ಲಿ ನಟಿಸುತ್ತಿರುವ ಸುದ್ದಿ ಬಂದಿತ್ತು. ಇದೀಗ ಅವರು ‘ಮೈಸಾ’ ಎಂಬ ಹೊಸ ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಇದೊಂದು ಒಂದು ಪ್ಯಾನ್ ಇಂಡಿಯಾ ಚಿತ್ರವಾಗಿದ್ದು, ಐದು ಭಾಷೆಗಳಲ್ಲಿ ಬಿಡುಗಡೆಯಾಗಲಿದೆ.

‘ಮೈಸಾ’ ಚಿತ್ರದ ಘೋಷಣೆ ಇತ್ತೀಚೆಗೆ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ಅಧಿಕೃತವಾಗಿ ಆಗಿದೆ. ವಿಶೇಷವೆಂದರೆ, ಒಂದೊಂದು ಭಾಷೆಯಲ್ಲಿ ಒಬ್ಬೊಬ್ಬ ಸೆಲೆಬ್ರಿಟಿ ಈ ಪೋಸ್ಟರ್ ಬಿಡುಡೆ ಮಾಡಿದ್ದಾರೆ. ತೆಲುಗಿನ ಪೋಸ್ಟರನ್ನು ನಿರ್ದೇಶಕ ಹನು ರಾಘವಪುಡಿ ಬಿಡುಗಡೆ ಮಾಡಿದರೆ, ತಮಿಳಿನಲ್ಲಿ ‘ಕುಬೇರ’ ನಟ ಧನುಷ್‍ ಬಿಡುಗಡೆ ಮಾಡಿದ್ದರೆ. ಕನ್ನಡದಲ್ಲಿ ಶಿವರಾಜಕುಮಾರ್, ಹಿಂದಿಯಲ್ಲಿ ವಿಕ್ಕಿ ಕೌಶಾಲ್‍ ಮತ್ತು ಮಲಯಾಳಂ ಪೋಸ್ಟರನ್ನು ದುಲ್ಕರ್ ಸಲ್ಮಾನ್‍ ಬಿಡುಗಡೆ ಮಾಡಿ ರಶ್ಮಿಕಾ ಮತ್ತು ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ.

ಇದುವರೆಗೂ ಸಾಫ್ಟ್ ಆದಂತಹ ಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತಿದ್ದ ರಶ್ಮಿಕಾ, ಈ ಚಿತ್ರದಲ್ಲಿ ಉಗ್ರವಾತಾರ ತಾಳಿರುವುದು ವಿಶೇಷ. ಈ ಚಿತ್ರವನ್ನು ರವೀಂದ್ರ ಪುಲ್ಲೇ ನಿರ್ದೇಶನ ಮಾಡುತ್ತಿದ್ದು, ಅಜಯ್ ಹಾಗೂ ಅನಿಲ್ ಸಯ್ಯಾಪುರೆಡ್ಡಿ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ.

ಈ ಚಿತ್ರದ ಕುರಿತು ಮಾತನಾಡುವ ನಿರ್ದೇಶಕ ರವೀಂದ್ರ, ‘ಸುಮಾರು ಎರಡು ವರ್ಷಗಳ ಪರಿಶ್ರಮದಿಂದ ಈ ಕಥೆ ರೂಪುಗೊಂಡಿದೆ. ಸದ್ಯದಲ್ಲೇ ಚಿತ್ರೀಕರಣ ಪ್ರಾರಂಭವಾಗಲಿದೆ’ ಎಂದು ಹೇಳಿದ್ದಾರೆ.

ಇದಲ್ಲದೆ, ತೆಲುಗಿನಲ್ಲಿ ‘ದಿ ಗರ್ಲ್‍ಫ್ರೆಂಡ್‍’ ಮತ್ತು ಹಿಂದಿಯಲ್ಲಿ ‘ತಮ’ ಎಂಬ ಎರಡು ಚಿತ್ರಗಳಲ್ಲಿ ರಶ್ಮಿಕಾ ಅಭಿನಯಿಸಿದ್ದು, ಈ ಚಿತ್ರಗಳು ಇನ್ನಷ್ಟೇ ಬಿಡುಗಡೆ ಆಗಬೇಕಿವೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ವಿದ್ಯುತ್ ಕಡಿತ ಮುಂಚಿತವಾಗಿ ಪ್ರಕಟಿಸಿ

ಮಳೆ ಸರಿಯಾಗಿ ಆಗದೆ ಜಲವಿದ್ಯುತ್ ಉತ್ಪಾದನೆ ಕಡಿಮೆಯಾಗಿ ವಿದ್ಯುತ್ ಅಭಾವ ಎದುರಾಗಿರುವುದು ನಿಜ. ಆದರೆ ಯಾವುದೇ ಮುನ್ಸೂಚನೆ ಇಲ್ಲದೆ ಇದ್ದಕ್ಕಿದ್ದಂತೆ…

2 hours ago

ಓದುಗರ ಪತ್ರ: ಖುಷಿ ಕೊಡುವ ಮಾತುಗಳಷ್ಟೇ ಸ್ಪಂದನೆಯೂ ಮುಖ್ಯ

ಮೈಸೂರು ಮಹಾ ನಗರಪಾಲಿಕೆ ವತಿಯಿಂದ ಕಲಾಮಂದಿರದಲ್ಲಿ ಆಯೋಜಿಸಿದ್ದ ಪೌರ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮದಲ್ಲಿ, ಮೈಸೂರು ಸ್ವಚ್ಛ ನಗರಿಯಾಗಲು ಪೌರ ಕಾರ್ಮಿಕರ…

2 hours ago

ಓದುಗರ ಪತ್ರ: ಬ್ಯಾಂಕ್ ಒಕ್ಕೂಟಗಳಿಗೆ ಜವಾಬ್ದಾರಿ ಇರಲಿ

ಸೆಪ್ಟೆಂಬರ್ ಕೊನೆಯಲ್ಲಿ ಆರ್ಥಿಕ ವರ್ಷದ ಅರ್ಧವಾರ್ಷಿಕ ಲೆಕ್ಕಪತ್ರ ಮುಕ್ತಾಯಗೊಳಿಸುವ ಅತ್ಯಂತ ನಿರ್ಣಾಯಕ ಸಮಯದಲ್ಲಿ ಬ್ಯಾಂಕ್ ಒಕ್ಕೂಟಗಳು (ಯುಎಫ್ಬಿ) ಮೂರು ದಿನಗಳ…

2 hours ago

ಪ್ರಶಸ್ತಿ ಪ್ರದಾನದಿಂದ ಚಿತ್ರೋತ್ಸವವರೆಗೆ ಹೊಸ ಪಯಣ

ವೈಡ್‌ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ದೆಹಲಿ ಸಹಜ ವಿಳಾಸವಾಗಿತ್ತು. ದೇಶದ…

2 hours ago

ಜಂಬೂಸವಾರಿಯಲ್ಲಿ ಸ್ತಬ್ಧ ಚಿತ್ರಗಳ ‘ತ್ರಿಸಂಗಮ’

ಕೆ.ಬಿ.ರಮೇಶನಾಯಕ ಕರ್ನಾಟಕ ರಾಜ್ಯದ ಗತವೈಭವ, ದೇಶದ ಅಖಂಡತೆ ಬಿಂಬಿಸುವ ಮಾದರಿಗಳ ಸವಾರಿ ೩೧ ಜಿಲ್ಲೆಗಳ ಬದಲಿಗೆ ಆಯ್ದ ೧೫ ಜಿಲ್ಲೆಗಳ…

2 hours ago