Mysore
27
broken clouds

Social Media

ಶುಕ್ರವಾರ, 23 ಜನವರಿ 2026
Light
Dark

ಗುಟ್ಟಾಗಿ ನಿಶ್ಚಿತಾರ್ಥ ಮಾಡಿಕೊಂಡ ರಶ್ಮಿಕಾ ಮಂದಣ್ಣ-ವಿಜಯ್‌ ದೇವರಕೊಂಡ ; ಮದುವೆ ಯಾವಾಗ?

ಬೆಂಗಳೂರು : ಟಾಲಿವುಡ್‌ ನಟ ವಿಜಯ್‌ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ಡೇಟಿಂಗ್‌ ಮಾಡುತ್ತಿದ್ದಾರೆ ಎಂಬ ಸುದ್ದಿ ನಿನ್ನೆ ಮೊನ್ನೆಯದಲ್ಲ. ಹಲವು ವರ್ಷಗಳಿಂದ ಇವರಿಬ್ಬರು ಪ್ರೀತಿಯಲ್ಲಿದ್ದಾರೆ, ಶೀಘ್ರದಲ್ಲೇ ಮದುವೆಯಾಗಲಿದ್ದಾರೆ ಎಂದೆಲ್ಲಾ ಹೇಳಲಾಗುತ್ತಿತ್ತು. ಇದೀಗ ಇವರಿಬ್ಬರು ಗುಟ್ಟಾಗಿ ನಿಶ್ಚಿತಾರ್ಥ ಮಾಡಿಕೊಂಡಿದ್ದು, ಮುಂದಿನ ವರ್ಷ ಹಸಮಣೆ ಏರಲಿದ್ದಾರೆ ಎಂದು ವರದಿಯಾಗಿದೆ.

ರಶ್ಮಿಕಾ ಮಂದಣ್ಣ ಮತ್ತು ವಿಜಯ್‌ ದೇವರಕೊಂಡ ಅವರು ಶುಕ್ರವಾರ (ಅ.3) ಹೈದರಾಬಾದ್‌ನಲ್ಲಿ ನಡೆದ ಖಾಸಗಿ ಸಮಾರಂಭದಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಸುದ್ದಿ, ಟಾಲಿವುಡ್‌ನಲ್ಲಿ ದೀರ್ಘಕಾಲದಿಂದ ಅವರ ಡೇಟಿಂಗ್‌ ಬಗ್ಗೆ ಇದ್ದ ಊಹಾಪೋಹಗಳಿಗೆ ಒಂದು ಮಹತ್ವದ ತಿರುವು ನೀಡಿದೆ. ರಶ್ಮಿಕಾ ಆಗಲಿ, ಅಥವಾ ವಿಜಯ್‌ ದೇವರಕೊಂಡ ಆಗಲಿ, ಈ ಬಗ್ಗೆ ಅಧಿಕೃತ ಹೇಳಿಕೆ ನೀಡಿಲ್ಲವಾದರೂ, ಇವರಿಬ್ಬರ ನಿಶ್ಚಿತಾರ್ಥವು ಆಪ್ತ ಕುಟುಂಬ ಸದಸ್ಯರ ಸಮ್ಮುಖದಲ್ಲಿ ನಡೆದಿದೆ ಎಂದು ವರದಿಯಾಗಿದೆ.

ಇದನ್ನೂ ಓದಿ:-ಮ.ಬೆಟ್ಟ | ಹುಲಿ ಸಂರಕ್ಷಿತ ಪ್ರದೇಶ ಘೋಷಣೆಗೆ ಸ್ಥಳೀಯರೊಂದಿಗೆ ಸಭೆ ನಡೆಸಲು ಖಂಡ್ರೆ ಸೂಚನೆ

2026ರ ಫೆಬ್ರವರಿಯಲ್ಲಿ ವಿವಾಹವಾಗಲಿದ್ದಾರೆ ಎನ್ನಲಾಗುತ್ತಿದೆ. ಇಬ್ಬರು ಈ ನಿಶ್ಚಿತಾರ್ಥದ ಕುರಿತು ಯಾವುದೇ ಅಧಿಕೃತ ಹೇಳಿಕೆಯನ್ನ ಬಿಡುಗಡೆ ಮಾಡಿಲ್ಲ. ಆದಾಗ್ಯೂ, ಈ ಸುದ್ದಿಯು ಸೋಶಿಯಲ್‌ ಮೀಡಿಯಾದಲ್ಲಿ ಸಖತ್‌ ವೈರಲ್‌ ಆಗುತ್ತಿದೆ.

ಈ ಹಿಂದೆ ರಶ್ಮಿಕಾ ಮಂದಣ್ಣ ನಟ ರಕ್ಷಿತ್‌ ಶೆಟ್ಟಿ ಜೊತೆಗೆ ತಮ್ಮ ನಿಶ್ಚಿತಾರ್ಥವನ್ನ ಮುರಿದುಕೊಂಡಿದ್ದರು. ಇದೇ ಸಮಯದಲ್ಲಿ ʻಗೀತಾ ಗೋವಿಂದಂʼ ಚಿತ್ರದ ಸೆಟ್‌ನಲ್ಲಿ ವಿಜಯ್‌ ದೇವರಕೊಂಡ ಅವರನ್ನ ರಶ್ಮಿಕಾ ಭೇಟಿಯಾದರು. ರಶ್ಮಿಕಾ ಹಾಗೂ ವಿಜಯ್‌ ದೇವರಕೊಂಡ ನಡುವಿನ ಸಂಬಂಧದ ಬಗ್ಗೆ ಚರ್ಚೆಯು ʻಡಿಯರ್‌ ಕಾಮ್ರೇಡ್‌ʼ ಚಿತ್ರದೊಂದಿಗೆ ಮತ್ತಷ್ಟು ತೀವ್ರಗೊಂಡಿತು. ಚಿತ್ರದಲ್ಲಿನ ಇವರಿಬ್ಬರ ಕೆಮಿಸ್ಟ್ರೀ ಪ್ರೇಕ್ಷಕರನ್ನ ಆಕರ್ಷಿಸಿತು. ಅಲ್ಲದೇ, ಇವರಿಬ್ಬರ ನಡುವಿನ ಲವ್‌ ಗಾಸಿಪ್‌ ಚರ್ಚೆಗೆ ಬಂದಿತು.

Tags:
error: Content is protected !!