ಕನ್ನಡದ ಹಲವು ನಟಿಯರಿಗೆ ಕನ್ನಡದಲ್ಲೇ ಕೆಲಸವಿಲ್ಲ ಎನ್ನುವಂತಹ ಸ್ಥಿತಿ ಇರುವಾಗ ಕೊಡಗಿನ ಹುಡುಗಿ ರೀಷ್ಮಾ ನಾಣಯ್ಯ ಮಾತ್ರ ಕನ್ನಡದಲ್ಲಿ ಸಿನಿಮಾ ಮೇಲೆ ಸಿನಿಮಾ ಮಾಡುತ್ತಿದ್ದಾರೆ. ಈಗಾಗಲೇ ಉಪೇಂದ್ರ ಜೊತೆಗೆ ‘ಯುಐ’ ಮತ್ತು ಧ್ರುವ ಸರ್ಜಾ ಜೊತೆಗೆ ‘ಕೆಡಿ – ದಿ ಡೆವಿಲ್’ ಚಿತ್ರದಲ್ಲಿ ನಟಿಸುತ್ತಿರುವ ರೀಷ್ಮಾ, ಇದೀಗ ಧನಂಜಯ್ ಅಭಿನಯದ ‘ಅಣ್ಣ From Mexico’ ಚಿತ್ರಕ್ಕೆ ನಾಯಕಿಯಾಗಿ ಆಯ್ಕೆಯಾಗಿದ್ದಾರೆ.
‘ಅಣ್ಣ From Mexico’ ಚಿತ್ರವು ಕಳೆದ ವರ್ಷ ಧನಂಜಯ್ ಹುಟ್ಟುಹಬ್ಬದಂದು ಘೋಷಣೆಯಾಗಿತ್ತು. ಆ ನಂತರ ವರ್ಷದ ಕೊನೆಯಲ್ಲಿ ಚಿತ್ರದ ಮುಹೂರ್ತ ಸದ್ದಿಲ್ಲದೆ ನಡೆದಿತ್ತು. ಈಗಾಗಲೇ ಚಿತ್ರೀಕರಣ ಸಹ ಮುಗಿಯುವ ಹಂತಕ್ಕೆ ಬಂದಿದ್ದು, ಈ ಸಂದರ್ಭದಲ್ಲಿ ನಾಯಕಿಯ ಘೋಷಣೆಯಾಗಿದೆ. ಇತ್ತೀಚೆಗೆ ದಸರಾ ಹಬ್ಬದ ಸಂದರ್ಭದಲ್ಲಿ ಚಿತ್ರತಂಡವು ನಾಯಕಿಯ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ಚಿತ್ರತಂಡಕ್ಕೆ ಬರಮಾಡಿಕೊಂಡಿದೆ.
‘ಅಣ್ಣ From Mexico’ ಚಿತ್ರವನ್ನು ಶಂಕರ್ ಗುರು ಕಥೆ, ಚಿತ್ರಕಥೆ ಬರೆದು ನಿರ್ದೇಶಿಸಿದ್ದರು. 2021ರಲ್ಲಿ ತೆರೆಗೆ ಬಂದ ‘ಬಡವ ರಾಸ್ಕಲ್’ ಚಿತ್ರವನ್ನು ಶಂಕರ್ ಗುರು ನಿರ್ದೇಶಿಸಿದ್ದರು. ‘ಅಣ್ಣ From Mexico’ ಚಿತ್ರವು ಫ್ಯಾಮಿಲಿ ಎಂಟರ್ ಟ್ರೇನರ್ ಆಗಿದ್ದು, ದಿ ರಾಯಲ್ ಸ್ಟುಡಿಯೋಸ್ ಅಡಿಯಲ್ಲಿ ಸತ್ಯ ರಾಯಲ್ ನಿರ್ಮಿಸುತ್ತಿದ್ದು. ಐರಾ ಫಿಲ್ಮ್ಸ್ ಕೂಡ ಜೊತೆಯಾಗಿ ಕೈ ಜೋಡಿಸಿದೆ.
ಈ ಚಿತ್ರಕ್ಕೆ ವಾಸುಕಿ ವೈಭವ್ ಸಂಗೀತ ಸಂಯೋಜಿಸುತ್ತಿದ್ದು, ಎಸ್.ಕೆ. ರಾವ್ ಅವರ ಛಾಯಾಗ್ರಹಣವಿದೆ. ‘ಅಣ್ಣ From Mexico’ ಚಿತ್ರಕ್ಕೆ ಪ್ರಶಾಂತ್ ರಾಜಪ್ಪ ಸಂಭಾಷಣೆ ರಚಿಸಿದ್ದಾರೆ.
ಅಂದಹಾಗೆ, ರೀಷ್ಮಾ ಅಭಿನಯದ ‘ಯುಐ’ ಮತ್ತು ‘ಕೆಡಿ – ದಿ ಡೆವಿಲ್’ ಚಿತ್ರಗಳ ಚಿತ್ರೀಕರಣ ಮುಗಿದಿದ್ದು, ಸದ್ಯ ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿದೆ. ಈ ಮಧ್ಯೆ, ‘ಯುಐ’ ಚಿತ್ರವು ನವೆಂಬರ್‍ನಲ್ಲಿ ಬಿಡುಗಡೆಯಾದರೆ, ‘ಕೆಡಿ – ದಿ ಡೆವಿಲ್’ ಚಿತ್ರವು ಡಿಸೆಂಬರ್ ತಿಂಗಳಲ್ಲಿ ಬಿಡುಗಡೆಯಾಗಲಿದೆ.
ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಹಿನ್ನೆಲೆಯಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಗಂಭೀರವಾಗುತ್ತಿದ್ದು, ಮೊದಲ ಹಂತದಲ್ಲಿ ಘೋಷಿಸಲಾದ 101…
ಹನೂರು : ಕೆಲಸಕ್ಕೆ ಹೋಗಿ ವಾಪಸ್ ಬರುವಾಗ ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಗಾರೆ ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ಹನೂರು…
ನಂಜನಗೂಡು : ಗ್ರಾಮದ ಸ್ವಚ್ಛತೆಯ ಜವಾಬ್ದಾರಿ ಹೊತ್ತವರೇ ಪಂಚಾಯಿತಿ ಆವರಣವನ್ನೆ ಮೂತ್ರಾಲಯವಾಗಿಸಿ ಅನೈರ್ಮಲ್ಯಕ್ಕೆ ಕಾರಣರಾದರೆ ಬೇರೆಯವರಿಗೆ ಸ್ವಚ್ಚತೆ ಕಾಪಾಡುವ ಬಗ್ಗೆ…
ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…
ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…
ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…