ಮನರಂಜನೆ

ರೇಣುಕಾಸ್ವಾಮಿ ಕೊಲೆ ಪ್ರಕರಣ: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನು ಕೋರಿ ನಟ ದರ್ಶನ್‌ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್‌ ಆದೇಶವನ್ನು ನಾಳೆಗೆ ಕಾಯ್ದಿರಿಸಿದೆ.

ಇಂದು ಹೈಕೋರ್ಟ್‌ನಲ್ಲಿ ನಟ ದರ್ಶನ್‌ ಪರ ಹಿರಿಯ ವಕೀಲ ಸಿ.ವಿ ನಾಗೇಶ್‌ ತಮ್ಮ ವಾದ ಮಂಡಿಸಿದರು. ನಟ ದರ್ಶನ್‌ಗೆ ತೀವ್ರ ಬೆನ್ನು ನೋವಿನ ಸಮಸ್ಯೆಯಿದ್ದು, ಅದರ ಜೊತೆಗೆ ಪದೇ ಪದೇ ಕಾಲು ಮರುಗಟ್ಟುವಿಕೆ ಸಮಸ್ಯೆ ಕಾಡುತ್ತಿದೆ. ಹೀಗಾಗಿ ಅವರಿಗೆ ತುರ್ತುಚಿಕಿತ್ಸೆಯ ಅವಶ್ಯಕತೆ ಇರುವುದರಿಂದ ಮಧ್ಯಂತರ ಜಾಮೀನು ನೀಡಬೇಕಾಗಿ ನ್ಯಾಯಾಧೀಶರ ಮುಂದೆ ಮನವಿ ಮಾಡಿದರು. ಇದಕ್ಕೆ ಪ್ರತಿಯಾಗಿ ಎಸ್‌ಪಿಪಿ ಕೂಡ ದರ್ಶನ್‌ ಜಾಮೀನು ಅರ್ಜಿಗೆ ಕೆಲ ತಕರಾರು ಎತ್ತಿದರು.

ಬಳಿಕ ವಾದ ಮುಂದುವರಿಸಿದ ನಾಗೇಶ್‌ ಅವರು, ಆರೋಗ್ಯ ಪ್ರತಿಯೊಬ್ಬರ ಹಕ್ಕು, ಅವರ ಕಷ್ಟದ ಸಮಯದಲ್ಲಿ ಯಾವುದೇ ಮೆರಿಟ್‌ಗಳನ್ನು ನೋಡದೆ ಜಾಮೀನು ನೀಡಬೇಕಾಗುತ್ತದೆ ಎಂದರು. ಆದರೆ ಜಾಮೀನಿಗೆ ವಿರೋಧ ವ್ಯಕ್ತಪಡಿಸಿದ ಎಸ್‌ಪಿಪಿ ಪ್ರಸನ್ನ ಕುಮಾರ್‌, ಈಗ ವೈದ್ಯರು ನೀಡಿರುವ ವರದಿಯಲ್ಲಿ ಅಷ್ಟೇನೂ ಸಮಸ್ಯೆಯಿಲ್ಲ ಎಂದರು.

ಹಾಗೇಯೆ ʼವೈದ್ಯರ ವರದಿಯಲ್ಲಿ ಯಾವ ರೀತಿಯ ಶಸ್ತ್ರಚಿಕಿತ್ಸೆ ಮಾಡಬೇಕಿದೆ? ಎಷ್ಟು ದಿನದ ಅವಶ್ಯಕತೆ ಇದೆ? ಎಲ್ಲಿ ಆಪರೇಷನ್‌ ಮಾಡಬೇಕು ಎಂಬ ವಿಷಯ ಪ್ರಸ್ತಾಪವಿಲ್ಲʼ ಎಂದರು.

ಇದಕ್ಕೆ ಉತ್ತರಿಸಿದ ಸಿ.ವಿ ನಾಗೇಶ್‌, ಈ ಹಿಂದೆ ದರ್ಶನ್‌ ಮೈಸೂರು ಅಪೋಲೊ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಈಗಲೂ ಅಲ್ಲಿಯೇ ಚಿಕಿತ್ಸೆ ಪಡೆಯುತ್ತಾರೆ ಎಂದು ವಾದಿಸಿದರು. ಇಬ್ಬರೂ ವಕೀಲರ ವಾದ-ಪ್ರತಿವಾದ ಆಲಿಸಿದ ನ್ಯಾಯಾಧೀಶರು ಜಾಮೀನು ಅರ್ಜಿ ಆದೇಶವನ್ನು ನಾಳೆಗೆ ಮುಂದೂಡಿದ್ದಾರೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಪಂಜುಗಂಗೊಳ್ಳಿ ಅವರ ವಾರದ ಅಂಕಣ: ‘ನಿಯೋನೇಟಲ್ ಕೇರ್’ ಸೇವೆಯ ಮಾತೆ ಡಾ.ಅರ್ಮಿಡಾ ಫೆರ್ನಾಂಡೀಸ್

ಏಷ್ಯಾದ ಪ್ರಪ್ರಥಮ ಎದೆಹಾಲಿನ ಬ್ಯಾಂಕನ್ನು ಆರಂಭಿಸಿದ ಕೀರ್ತಿ ಕರ್ನಾಟಕದಲ್ಲಿ ಹುಟ್ಟಿದ, ಗೋವಾ ಮೂಲದ, ಈಗ ಮುಂಬೈಯಲ್ಲಿ ತನ್ನ ಸಾಮಾಜಿಕ ಕಾರ್ಯಗಳನ್ನು…

20 seconds ago

ಮಲೆ ಮಹದೇಶ್ವರ ಬೆಟ್ಟ| ಕಾಲ್ನಡಿಗೆ ಪಾದಯಾತ್ರಿಗಳಿಗೆ ಸೌಲಭ್ಯ ಕಲ್ಪಿಸಿ: ಡಿಸಿಎಂ ಡಿಕೆಶಿ ಸೂಚನೆ

ಮಹಾದೇಶ್‌ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ಪ್ರತಿ ವರ್ಷದಂತೆ ಈ ವರ್ಷವೂ ಸಹ…

5 mins ago

ಕೊಳ್ಳೇಗಾಲ: ಕೇರಳ ಲಾಟರಿ ಮಾರಾಟ: ವ್ಯಕ್ತಿಯ ಬಂಧನ

ಕೊಳ್ಳೇಗಾಲ: ಅಕ್ರಮವಾಗಿ ಕೇರಳ ಲಾಟರಿಗಳನ್ನು ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಅಗರ ಮಾಂಬಳ್ಳಿ ಠಾಣೆಯ ಪೊಲೀಸರು ಬಂಧಿಸಿರುವ ಘಟನೆ ಮಂಗಳವಾರ ಜರುಗಿದೆ.…

6 mins ago

ಸ್ವಚ್ಛತೆಗೆ ಮೈಸೂರಿನ ಮಾರ್ಗದರ್ಶನ!

ಕೆ.ಬಿ.ರಮೇಶನಾಯಕ ರಾಯಚೂರು, ಮಸ್ಕಿ ತಂಡಗಳಿಗೆ ತರಬೇತಿ; ಸ್ವಚ್ಛ ಶೆಹರ್ ಯೋಜನೆಯಡಿ ಒಡಂಬಡಿಕೆ ಮೈಸೂರು: ಸ್ವಚ್ಛತೆಯಲ್ಲಿ ಹಲವು ಬಾರಿ ದೇಶದ ಗಮನ…

7 mins ago

ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸರ ದಾಳಿ: ಇಬ್ಬರ ಬಂಧನ

ಮಹೇಂದ್ರ ಹಸಗೂಲಿ, ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ಪಟ್ಟಣದ ಜನತಾ ಕಾಲೋನಿಯ ಮನೆಯೊಂದರ ಮೇಲೆ ಪೊಲೀಸರು ದಾಳಿ ನಡೆಸಿ ವೇಶ್ಯಾವಾಟಿಕೆ…

9 hours ago