ಬಳ್ಳಾರಿ: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ಬಳ್ಳಾರಿ ಜೈಲಿಗೆ ಶಿಫ್ಟ್ ಆಗಿರುವ ನಟ ದರ್ಶನ್, ಜೈಲು ಸಿಬ್ಬಂದಿ ಬಳಿ ಮತ್ತೊಂದು ಬೇಡಿಕೆ ಇಟ್ಟಿದ್ದಾರೆ.
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ಮೂರು ತಿಂಗಳಿನಿಂದಲೂ ಜೈಲಿನಲ್ಲಿ ಕಂಬಿ ಎಣಿಸುತ್ತಿರುವ ನಟ ದರ್ಶನ್ ದಿನದಿಂದ ದಿನಕ್ಕೆ ಒಂದಲ್ಲಾ ಒಂದು ಕಿರಿಕ್ ಮಾಡುತ್ತಲೇ ಇದ್ದಾರೆ.
ಜೈಲು ಸಿಬ್ಬಂದಿಗೆ ಒಂದೊಂದೇ ಬೇಡಿಕೆ ಇಡುತ್ತಿರುವ ದರ್ಶನ್ ಈಗ ಚೇರ್‌ಗೆ ಬೇಡಿಕೆ ಇಟ್ಟಿದ್ದಾರೆ ಎನ್ನಲಾಗಿದ್ದು, ದರ್ಶನ್ ಬೇಡಿಕೆಗೆ ಜೈಲಾಧಿಕಾರಿಗಳು ತಣ್ಣೀರು ಎರಚಿದ್ದಾರೆ.
ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿ ಬಿಂದಾಸ್ ಆಗಿ ಎಂಜಾಯ್ ಮಾಡುತ್ತಿದ್ದ ನಟ ದರ್ಶನ್, ಈಗ ಬಳ್ಳಾರಿ ಜೈಲಿನಲ್ಲಿ ಕಳೆದ ಎರಡು ದಿನದಿಂದ ತೆಪ್ಪಗಾಗಿದ್ದಾರೆ ಎನ್ನಲಾಗಿದೆ. ಬಳ್ಳಾರಿ ಜೈಲಿನಲ್ಲಿ ದರ್ಶನ್‌ಗೆ ಜೈಲಾಧಿಕಾರಿಗಳು ನಿಜ ಜೈಲು ಹೇಗಿರುತ್ತದೆ ಎಂಬುದನ್ನು ತೋರಿಸುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಇನ್ನೂ ಚೇರ್ ವಿಚಾರದಲ್ಲೂ ಕ್ಲಿಯರ್ ಆಗಿರುವ ಬಳ್ಳಾರಿ ಜೈಲಾಧಿಕಾರಿಗಳು ಯಾವುದನ್ನೂ ಮೈ ಮೇಲೆ ಎಳೆದುಕೊಳ್ಳದೇ ಕೋರ್ಟ್ ಅವಕಾಶ ಕೊಟ್ಟರೆ ಮಾತ್ರ ಕೊಡುತ್ತೇವೆ ಎಂಬ ನಿರ್ಧಾರಕ್ಕೆ ಬಂದಿದ್ದಾರೆ.
ಮೈಸೂರು: ಸ್ನೇಹಮಯಿ ಕೃಷ್ಣಗೆ ಫಂಡಿಂಗ್ ಮಾಡುತ್ತಿರುವವರು ಯಾರು ಅನ್ನೋದು ಗೊತ್ತಿದೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಕಿಡಿಕಾರಿದ್ದಾರೆ. ಮುಡಾ ಪ್ರಕರಣಕ್ಕೆ…
ನವದೆಹಲಿ: ಸಂಸತ್ ಭವನದ ಸಂಕೀರ್ಣದಲ್ಲಿ ಬಿಜೆಪಿ ಸಂಸದರು ನನ್ನನ್ನು ತಳ್ಳಿದ್ದಾರೆ ಎಂದು ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ…
ಬೆಳಗಾವಿ: ಕೇಂದ್ರ ಗ್ರಹ ಸಚಿವ ಅಮಿತ್ ಶಾ ಅವರು ಡಾ.ಬಿ.ಆರ್. ಅಂಬೇಡ್ಕರ್ ಕುರಿತು ನೀಡಿರುವ ಹೇಳಿಕೆ ವಿರುದ್ಧ ದೇಶಾದ್ಯಂತ ವ್ಯಾಪಕ…
ಬೆಳಗಾವಿ: ಸಂಸತ್ತಿನಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ನೀಡಿರುವ ಹೇಳಿಕೆಗೆ ಸಂಬಂಧಿಸಿದಂತೆ ಕರ್ನಾಟಕ…
ಬೆಳಗಾವಿ: ನಕಲಿ ದಾಖಲೆ ಸೃಷ್ಟಿಸಿ ಅಕ್ರಮವಾಗಿ ರಾಜ್ಯದಲ್ಲಿ ನೆಲೆಸಿರುವ ಪಾಕಿಸ್ತಾನ ಹಾಗೂ ಬಾಂಗ್ಲಾದೇಶದ ಪ್ರಜೆಗಳನ್ನು ಬಂಧಿಸಲಾಗಿದೆ ಎಂದು ಗೃಹ ಸಚಿವ…
ಮಂಡ್ಯ: ಮೂರು ದಿನಗಳ ಕಾಲ ಸಕ್ಕರೆ ನಾಡು ಮಂಡ್ಯದಲ್ಲಿ ನಡೆಯಲಿರುವ ಕನ್ನಡ ನುಡಿ ಜಾತ್ರೆಗೆ ನಾಳೆ ಅದ್ಧೂರಿ ಚಾಲನೆ ಸಿಗಲಿದ್ದು,…