ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿ ಜಾಮೀನಿನ ಮೇಲೆ ಹೊರಗಿರುವ ನಟ ದರ್ಶನ್‌ಗೆ ಮತ್ತೊಂದು ಬಿಗ್ ಶಾಕ್ ಎದುರಾಗಿದ್ದು, ಗನ್ ಸೀಜ್ ಆಗಿದೆ.
ಕಮಿಷನರ್ ಆದೇಶದ ಬೆನ್ನಲ್ಲೇ ದರ್ಶನ್ ಗನ್ ಸೀಜ್ ಮಾಡಲಾಗಿದೆ. ತಾತ್ಕಾಲಿಕವಾಗಿ ಗನ್ ಪರವಾನಗಿ ರದ್ದು ಮಾಡಲಾಗಿತ್ತು. ಪರವಾನಗಿ ರದ್ದು ಮಾಡಿದ್ದ ಬೆನ್ನಲ್ಲೇ ದರ್ಶನ್‌ಗೆ ಪೊಲೀಸರು ನೋಟಿಸ್ ಜಾರಿ ಮಾಡಿದ್ದರು.
ಆದರೂ ಗನ್ ಜಮೆ ಮಾಡಲು ದರ್ಶನ್ ಹಿಂದೇಟು ಹಾಕಿದ್ದ ಹಿನ್ನೆಲೆಯಲ್ಲಿ ಖುದ್ದು ಮನೆಗೆ ತೆರಳಿದ ಪೊಲೀಸರು ದರ್ಶನ್ ಗನ್ ಸೀಜ್ ಮಾಡಿದ್ದಾರೆ.