ಮನರಂಜನೆ

ರೇಣುಕಾಸ್ವಾಮಿ ಕೊಲೆ ಪ್ರಕರಣ: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ನಟ ದರ್ಶನ್‌ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆಯನ್ನು ಹೈಕೋರ್ಟ್‌ ಅಕ್ಟೋಬರ್.‌28ಕ್ಕೆ ಮುಂದೂಡಿಕೆ ಮಾಡಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್‌ ಹೈಕೋರ್ಟ್‌ಗೆ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಇಂದು ಅರ್ಜಿ ವಿಚಾರಣೆಯು ನ್ಯಾಯಮೂರ್ತಿ ಎಸ್.ವಿಶ್ವಜಿತ್‌ ಶೆಟ್ಟಿ ಪೀಠದಲ್ಲಿ ನಡೆಯಿತು.

ಈ ವೇಳೆ ವಾದ ಮಂಡಿಸಿದ ದರ್ಶನ್‌ ಪರ ವಕೀಲ ಸಿ.ವಿ.ನಾಗೇಶ್‌ ಅವರು, ದರ್ಶನ್‌ಗೆ ಬೆನ್ನು ಹುರಿ ನೋವಿದೆ. ಆದ ಕಾರಣ ಅವರನ್ನು ವಿಮ್ಸ್‌ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಎಲ್ಲಿ ಎಂಆರ್‌ಐ ಸ್ಕ್ಯಾನ್‌ ಮಾಡಲಾಗಿದ್ದು, ಬೆನ್ನು ಹುರಿಯ ಸರ್ಜರಿ ಮಾಡಬೇಕೆಂದು ವೈದ್ಯರು ಹೇಳಿದ್ದಾರೆ.

ಹೀಗಾಗಿ ಅನಾರೋಗ್ಯದ ಕಾರಣಕ್ಕೆ ಜಾಮೀನು ನೀಡಬೇಕು ಎಂದು ನ್ಯಾಯಾಧೀಶರ ಮುಂದೆ ಮನವಿ ಮಾಡಿದರು.

ಜೈಲು ಅಧಿಕಾರಿಗಳಿಂದ ವೈದ್ಯಕೀಯ ವರದಿ ಕೇಳಿದ ಹೈಕೋರ್ಟ್‌ ಪ್ರಕರಣದ ವಿಚಾರಣೆಯನ್ನು ಅಕ್ಟೋಬರ್.‌28ಕ್ಕೆ ಮುಂದೂಡಿಕೆ ಮಾಡಿದೆ.

 

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಕಾನೂನು ಸುವ್ಯವಸ್ಥೆಗೂ ಜಿಡಿಪಿಗೂ ನೇರ ಸಂಬಂಧವಿದೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಸೈಬರ್ ಅಪರಾಧಗಳು ಸೇರಿದಂತೆ ನಾನಾ ಅಪರಾಧಗಳಲ್ಲಿ ನಮ್ಮ ರಾಜ್ಯ ರಾಷ್ಟ್ರೀಯ ಸರಾಸರಿಗಿಂತ ಹೆಚ್ಚಾಗಿದ್ದು ಇದನ್ನು ಕಟ್ಟುನಿಟ್ಟಾಗಿ ತಡೆಗಟ್ಟಿ ಎಂದು…

12 mins ago

ಹಾಸನ: ನಿಯಂತ್ರಣ ತಪ್ಪಿ ಅಡಿಕೆ ತೋಟಕ್ಕೆ ನುಗ್ಗಿದ ಕಾರು

ಹಾಸನ: ಕಾರೊಂದು ನಿಯಂತ್ರಣ ತಪ್ಪಿ ಅಡಿಕೆ ತೋಟಕ್ಕೆ ನುಗ್ಗಿ ಪಲ್ಟಿಯಾದ ಪರಿಣಾಮ ಚಾಲಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ಹಾಸನ ಜಿಲ್ಲೆ…

25 mins ago

ಟ್ರಂಪ್‌ ಭಾಷಣದ ಬೆನ್ನಲ್ಲೇ ಕಚ್ಚಾ ತೈಲದ ಬೆಲೆ ಭಾರೀ ಏರಿಕೆ

ವಾಷಿಂಗ್ಟನ್:‌ ಯುದ್ಧಕ್ಕೆ ಸಂಬಂಧಿಸಿದಂತೆ ಅಮೇರಿಕಾ ಪ್ರಜೆಗಳನ್ನು ಉದ್ದೇಶಿಸಿ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಭಾಷಣ ಮಾಡಿದ ಬೆನ್ನಲ್ಲೇ ಕಚ್ಚಾ ತೈಲದ ಬೆಲೆ…

39 mins ago

ಮಂಡ್ಯದಲ್ಲಿಂದು ವಿಶ್ವ ಹಿಂದೂ ಪರಿಷತ್‌ ಬೃಹತ್‌ ಶೋಭಾಯಾತ್ರೆ

ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ಇಂದು ವಿಶ್ವ ಹಿಂದೂ ಪರಿಷತ್‌ ವತಿಯಿಂದ ಶೋಭಾಯಾತ್ರೆ ಹಮ್ಮಿಕೊಳ್ಳಲಾಗಿದೆ. ನಗರದಾದ್ಯಂತ ಕೇಸರಿ ಬಾವುಟ, ಬ್ಯಾನರ್‌,…

57 mins ago

2 ಅಥವಾ ಮೂರು ವಾರಗಳಲ್ಲಿ ಯುದ್ಧ ಅಂತ್ಯ: ಡೊನಾಲ್ಡ್‌ ಟ್ರಂಪ್‌

ವಾಷಿಂಗ್ಟನ್:‌ ಇನ್ನು ಎರಡು ಅಥವಾ ಮೂರು ವಾರಗಳಲ್ಲಿ ಯುದ್ಧ ಅಂತ್ಯಗೊಳ್ಳಲಿದೆ ಎಂದು ಅಮೇರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಹೇಳಿದ್ದಾರೆ. ದೇಶವನ್ನು…

1 hour ago

ಶ್ರೀ ಸಬ್ಬಮ್ಮ ನೆಲೆಯ ಮಲೆನಾಡಿನಾದ್ಯಂತ ಸುಗ್ಗಿ ಉತ್ಸವ ಶುರು

ಲಕ್ಷ್ಮಿಕಾಂತ್ ಕೊಮಾರಪ್ಪ ಗ್ರಾಮೀಣ ಭಾಗದಲ್ಲಿ ಮನೆಮಾಡಿದ ಸಂಭ್ರಮ; ಭಕ್ತಿ ಭಾವದಿಂದ ಪ್ರಕೃತಿ-ಗ್ರಾಮದೇವಿಗೆ ಪೂಜೆ ಸೋಮವಾರಪೇಟೆ: ಗ್ರಾಮೀಣ ಪ್ರದೇಶದ ಜನಪದದ ಪ್ರಮುಖ…

2 hours ago