Mysore
29
few clouds

Social Media

ಮಂಗಳವಾರ, 11 ಮಾರ್ಚ್ 2025
Light
Dark

ದರ್ಶನ್‌ಗೆ ಖಡಕ್‌ ವಾರ್ನಿಂಗ್‌ ಕೊಟ್ಟ ಜೈಲಾಧಿಕಾರಿಗಳು

ಬಳ್ಳಾರಿ: ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿ ರಾಜಾತಿಥ್ಯ ಪಡೆದು ಬಳ್ಳಾರಿ ಜೈಲಿಗೆ ಶಿಫ್ಟ್‌ ಆಗಿರುವ ನಟ ದರ್ಶನ್‌ಗೆ ಜೈಲಾಧಿಕಾರಿಗಳು ಕ್ಲಾಸ್‌ ತೆಗೆದುಕೊಂಡಿದ್ದಾರೆ ಎನ್ನಲಾಗಿದೆ.

ಬಳ್ಳಾರಿ ಜೈಲಿನಲ್ಲಿ ನಟ ದರ್ಶನ್‌ ಭಾರೀ ಅಹಂಕಾರ ಹಾಗೂ ದರ್ಪ ತೋರಿಸುತ್ತಿದ್ದಾರೆ ಎನ್ನಲಾಗಿದ್ದು, ದರ್ಶನ್‌ಗೆ ಜೈಲಾಧಿಕಾರಿಗಳು ಕ್ಲಾಸ್‌ ತೆಗೆದುಕೊಂಡು, ಬುದ್ಧಿವಾದ ಹೇಳಿದ್ದಾರೆ ಎನ್ನಲಾಗಿದೆ.

ನೀವು ಜೈಲಿನಲ್ಲಿ ಎಷ್ಟು ದಿನ ಇರುತ್ತೀರಿ ಅಷ್ಟು ದಿನ ಜೈಲಿನ ನಿಯಮಗಳನ್ನು ಪಾಲನೆ ಮಾಡಬೇಕು. ಖೈದಿಗಳಿಗೆ ಶಿಕ್ಷೆ ಜೊತೆಗೆ ನಡವಳಿಕೆ ಸರಿಯಾಗುತ್ತದೆ ಎಂದು ಕೋರ್ಟ್‌ ಜೈಲಿಗೆ ಕಳುಹಿಸುತ್ತದೆ. ಆದರೆ ನೀವು ಜೈಲಿನ ಶಿಸ್ತನ್ನು ಉಲ್ಲಂಘನೆ ಮಾಡುತ್ತಿದ್ದೀರಿ ಎಂದು ಹೇಳಿದ್ದಾರೆ.

ಸೌಲಭ್ಯಗಳಿಗಾಗಿ ಪದೇ ಪದೇ ಜೈಲು ಸಿಬ್ಬಂದಿಗೆ ಕಿರಿಕಿರಿ ಮಾಡುತ್ತಿದ್ದೀರಿ. ನಾವು ಕಾನೂನು ಪ್ರಕಾರ ಏನು ಮಾಡಲು ಸಾಧ್ಯ ಅಷ್ಟನ್ನು ಮಾತ್ರ ಕೊಡುತ್ತೇವೆ. ಅದನ್ನು ಬಿಟ್ಟು ಹೆಚ್ಚಿನದನ್ನು ಕೊಡಲು ಸಾಧ್ಯವಿಲ್ಲ. ನಿಮಗೆ ಹೆಚ್ಚಿನ ಸೌಲಭ್ಯ ಬೇಕು ಎಂದರೆ ಕೋರ್ಟ್‌ಗೆ ಅರ್ಜಿ ಹಾಕಿ ಎಂದು ನಟ ದರ್ಶನ್‌ಗೆ ಜೈಲರ್ ಎಚ್ಚರಿಕೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.

 

Tags: