ಬಳ್ಳಾರಿ: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಳ್ಳಾರಿ ಜೈಲಿನಲ್ಲಿರುವ ನಟ ದರ್ಶನ್‌ರನ್ನು ನೋಡಲು ಪತ್ನಿ ವಿಜಯಲಕ್ಷ್ಮಿ ಇಂದು ಜೈಲಿಗೆ ಭೇಟಿ ನೀಡಿದ್ದರು.
ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್ ಅಂಡ್ ಗ್ಯಾಂಗ್ ವಿರುದ್ಧ ಪೊಲೀಸರು ನಿನ್ನೆ ತಾನೇ ಚಾರ್ಜ್‌ಶೀಟ್ ಸಲ್ಲಿಕೆ ಮಾಡಿದ್ದಾರೆ.
ಈ ಹಿನ್ನೆಲೆಯಲ್ಲಿ ಚಾರ್ಜ್‌ಶೀಟ್ ಸಲ್ಲಿಕೆಯ ಬಳಿಕ ಇಂದು ದರ್ಶನ್ ಭೇಟಿಗೆ ದಿನಕರ್ ತೂಗುದೀಪ್ ಜೊತೆ ವಿಜಯಲಕ್ಷ್ಮಿ ಬಳ್ಳಾರಿ ಜೈಲಿಗೆ ಭೇಟಿ ನೀಡಿದ್ದರು.
ಈ ವೇಳೆ ಹೈ ಸೆಕ್ಯುರಿಟಿ ಸೆಲ್‌ನಿಂದ ಹೊರಬಂದ ಆರೋಪಿ ದರ್ಶನ್, ಪತ್ನಿ ಮತ್ತು ಸಹೋದರನನ್ನು ನೋಡಿ ಭಾವುಕರಾಗಿದ್ದಾರೆ.
ಇನ್ನು ಬಳ್ಳಾರಿ ಸೆಂಟ್ರಲ್ ಜೈಲಿನ ಸಂದರ್ಶಕರ ಕೊಠಡಿಯಲ್ಲಿ ಸಹೋದರ ಮತ್ತು ಪತ್ನಿಯ ಜೊತೆ ದರ್ಶನ್ ಮಾತನಾಡಲು ಅರ್ಧ ಗಂಟೆ ಅವಕಾಶ ನೀಡಲಾಗಿತ್ತು. ಈ ವೇಳೆ ದರ್ಶನ್ ಜೊತೆ ದಿನಕರ್ ತೂಗುದೀಪ್ ಹಾಗೂ ವಿಜಯಲಕ್ಷ್ಮಿ ಅವರು, ಮುಂದಿನ ಕಾನೂನು ಸಮರದ ಬಗ್ಗೆ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.
ಪುನೀತ್ ಕೊಡವ ಹಾಕಿ ಅಕಾಡೆಮಿ ಆಶ್ರಯದಲ್ಲಿ ಆಯೋಜನೆ; ವಿಜೇತ ತಂಡಕ್ಕೆ ೨ ಲಕ್ಷ ರೂ. ಬಹುಮಾನ ಮಡಿಕೇರಿ: ಕೊಡವ ಹಾಕಿ…
ಪ್ರತಿದಿನ ರಾತ್ರಿ ಅರಮನೆಗೆ ದೀಪಾಲಂಕಾರ ಹೂವಿನಿಂದ ಶೃಂಗೇರಿ ದೇವಸ್ಥಾನದ ಮಾದರಿ ನಿರ್ಮಾಣ ಪುಷ್ಪ ಪ್ರಿಯರ ಕಣ್ಮನ ಸೆಳೆಯಲಿರುವ ವಿವಿಧ ಮಾದರಿಗಳು…
ಎಸ್.ಎಸ್.ಭಟ್ ಹಾಗಂತ ಇಲ್ಲಿ ಫಲಕ ಹಾಕಿಲ್ಲ, ವಾಹನ ನಿಲ್ಲುವುದು ತಪ್ಪುತ್ತಿಲ್ಲ; ಇದು ನಂಜನಗೂಡಿನ ತಾಯಿ-ಮಕ್ಕಳ ಆಸ್ಪತ್ರೆ ಆವರಣದ ಸ್ಥಿತಿ ನಂಜನಗೂಡು:…
ಮೈಸೂರು: ಕೇಂದ್ರದ ಯುಪಿಎ ಸರ್ಕಾರ ೨೦೦೫ರಲ್ಲಿ ಜಾರಿಗೆ ತಂದ ರಾಷ್ಟ್ರೀಯ ಉದ್ಯೋಗ ಖಾತರಿ ಕಾಯ್ದೆಯಡಿ ಗ್ರಾಮೀಣ ಕುಟುಂಬಗಳಲ್ಲಿ ಜೀವನೋಪಾಯಕ್ಕೆ ಭದ್ರತೆ…
ಹನೂರು : ತಾಲೂಕಿನ ಶೆಟ್ಟಳ್ಳಿ ಗ್ರಾಮದಲ್ಲಿ ಒಕ್ಕಣೆ ಕಣದಲ್ಲಿ ಹಾಕಲಾಗಿದ್ದ ರಾಗಿ ಫಸಲಿಗೆ ಬೆಂಕಿ ಬಿದ್ದು ಸುಮಾರು 30 ಕ್ವಿಂಟಾಲ್…