ಮನರಂಜನೆ

ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ಗೆ ಮತ್ತೆ ಜೈಲೇ ಗತಿ: ಸಂಜೆ ವೇಳೆಗೆ ಬಳ್ಳಾರಿ ಜೈಲಿಗೆ ಶಿಫ್ಟ್‌

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್‌ಗೆ ಮತ್ತೆ 13 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್‌ ಆದೇಶ ಹೊರಡಿಸಿದೆ.

ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ಎರಡು ತಿಂಗಳಿನಿಂದಲೂ ನಟ ದರ್ಶನ್‌ ಪರಪ್ಪನ ಅಗ್ರಹಾರ ಜೈಲಿನಲ್ಲಿ ಕಂಬಿ ಎಣಿಸುತ್ತಿದ್ದಾರೆ.

ಇಂದು ನಟ ದರ್ಶನ್‌ ಅವರನ್ನು ವಿಡಿಯೋ ಕಾನ್ಫರೆನ್ಸ್‌ ಮೂಲಕ 24ನೇ ಎಸಿಎಂಎಂ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಆರೋಪಿಗಳನ್ನು ಪುನಃ ನ್ಯಾಯಾಂಗ ಬಂಧನಕ್ಕೆ ನೀಡುವಂತೆ ಪೊಲೀಸರು ಮನವಿ ಮಾಡಿಕೊಂಡರು. ಮನವಿ ಪುರಸ್ಕರಿಸಿದ ನ್ಯಾಯಾಲಯ ದರ್ಶನ್‌ ಸೇರಿದಂತೆ ಎಲ್ಲಾ ಆರೋಪಿಗಳಿಗೂ 13 ದಿನಗಳ ಕಾಲ ಅಂದರೆ ಸೆಪ್ಟೆಂಬರ್.‌9ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದೆ.

ಈ ನಡುವೆ ಪರಪ್ಪನ ಅಗ್ರಹಾರದಲ್ಲಿ ರಾಜಾತಿಥ್ಯ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್‌ರನ್ನು ಬಳ್ಳಾರಿ ಜೈಲಿಗೆ ಸ್ಥಳಾಂತರಿಸುವಂತೆ ನಿನ್ನೆ ಕೋರ್ಟ್‌ ಆದೇಶ ಹೊರಡಿಸಿತ್ತು.

ಈ ಹಿನ್ನೆಲೆಯಲ್ಲಿ ಇಂದು ನಟ ದರ್ಶನ್‌ಗೆ ನ್ಯಾಯಾಂಗ ಬಂಧನ ವಿಸ್ತರಣೆಗೊಂಡ ಬೆನ್ನಲ್ಲೇ ಇಂದು ಸಂಜೆ ವೇಳೆಗೆ ಬಳ್ಳಾರಿ ಜೈಲಿಗೆ ಶಿಫ್ಟ್‌ ಮಾಡಲಾಗುತ್ತದೆ. ಶಿರಾ-ತುಮಕೂರು ಮಾರ್ಗವಾಗಿ ಜೈಲು ಅಧಿಕಾರಿಗಳು ಹಾಗೂ ಪೊಲೀಸರು ಬಳ್ಳಾರಿ ಜೈಲಿಗೆ ಕರೆದೊಯ್ಯುತ್ತಾರೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಸಾಲು ಸಾಲು ಸರಣಿ ರಜೆ : ಮೈಸೂರಿನ ಪ್ರವಾಸಿ ತಾಣಗಳಲ್ಲಿ ಜನಸ್ಥೋಮ

ಮೈಸೂರು : ಯುಗಾದಿ ಮತ್ತು ರಂಜಾನ್ ಹಬ್ಬದ ಪ್ರಯುಕ್ತ ಸಾಲು ಸಾಲು ಸರಣಿ ರಜೆ ಹಿನ್ನೆಲೆ ಮೈಸೂರಿನ ಪ್ರಮುಖ ಪ್ರವಾಸಿ…

35 mins ago

ಪ್ರಯಾಣಿಕರಿಗೆ ಗುಡ್‌ನ್ಯೂಸ್‌ ಕೊಟ್ಟ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ರಾಜ್ಯದಲ್ಲಿ ಸಾರಿಗೆ ಬಸ್‌ ಟಿಕೆಟ್‌ ದರವನ್ನು ಏರಿಕೆ ಮಾಡುವುದಿಲ್ಲ ಎಂದು ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು…

1 hour ago

ಜೂಜಾಡುವ ವೇಳೆ ಪೊಲೀಸರ ದಾಳಿ: ಆಯತಪ್ಪಿ ಬಿದ್ದು ವ್ಯಕ್ತಿ ಸಾವು

ಹಾಸನ: ಜೂಜಾಡುವ ವೇಲೆ ಪೊಲೀಸರು ದಾಳಿ ನಡೆಸಿದ ಪರಿಣಾಮ ತಪ್ಪಿಸಿಕೊಂಡು ಓಡುವ ವೇಳೆ ಆಯತಪ್ಪಿ ಬಿದ್ದು ವ್ಯಕ್ತಿ ಸಾವನ್ನಪ್ಪಿರುವ ಘಟನೆ…

1 hour ago

ಮೈಸೂರಿನಲ್ಲಿ ಸಂಭ್ರಮದಿಂದ ರಂಜಾನ್‌ ಹಬ್ಬ ಆಚರಣೆ

ಮೈಸೂರು: ನಾಡಿನಾದ್ಯಂತ ರಂಜಾನ್‌ ಹಬ್ಬದ ಸಂಭ್ರಮ ಮನೆಮಾಡಿದ್ದು, ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮುಸ್ಲಿಂ ಬಾಂಧವರು ಸಾಮೂಹಿಕ ಪ್ರಾರ್ಥನೆ ಸಲ್ಲಿಸುವ ಮೂಲಕ…

2 hours ago

ತೆಲುಗು ಚಿತ್ರರಂಗದ ಖ್ಯಾತ ನಟರ ವಿರುದ್ಧ ಪ್ರಕಾಶ್‌ ರಾಜ್‌ ಕಿಡಿ: ಕಾರಣ ಇಷ್ಟೇ

ಬೆಂಗಳೂರು: ಧುರಂಧರ್‌-2 ಚಿತ್ರವನ್ನು ಹಾಡಿ ಹೊಗಳಿರುವ ತೆಲುಗು ಚಿತ್ರರಂಗದ ಖ್ಯಾತ ನಟರ ವಿರುದ್ಧ ಪ್ರಕಾಶ್‌ ರಾಜ್‌ ಕಿಡಿಕಾರಿದ್ದಾರೆ. ತೆಲುಗಿನ ಖ್ಯಾತ…

2 hours ago

ರಾಜ್ಯದಲ್ಲಿ ಇದ್ದಕ್ಕಿದ್ದಂತೆ ಸುರಿದ ಮಳೆ: ಅಪಾರ ಪ್ರಮಾಣದ ಬೆಳೆ ಹಾನಿ

ಬೆಂಗಳೂರು: ರಾಜ್ಯದಲ್ಲಿ ಇದಕ್ಕಿದ್ದಂತೆ ಆಲಿಕಲ್ಲು ಸಹಿತ ವ್ಯಾಪಕ ಮಳೆ ದಾಖಲಾಗಿದ್ದರಿಂದ ಮತ್ತೆ ಅಪಾರ ಪ್ರಮಾಣದ ಬೆಳೆ ಹಾನಿ ಉಂಟಾಗಿದೆ. ಕೂಡಲೇ…

2 hours ago