ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳ ನ್ಯಾಯಾಂಗ ಬಂಧನದ ಅವಧಿ ಇಂದಿಗೆ ಮುಕ್ತಾಯವಾಗಲಿದೆ.
ಈ ಹಿನ್ನೆಲೆಯಲ್ಲಿ ನಟ ದರ್ಶನ್ ಸೇರಿದಂತೆ ಎಲ್ಲಾ ಆರೋಪಿಗಳು ವಿವಿಧ ಜೈಲಿನಲ್ಲಿದ್ದು, ಎಲ್ಲರನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಕೋರ್ಟ್ ಮುಂದೆ ಹಾಜರುಪಡಿಸಲಾಗುತ್ತದೆ.
ಕೋರ್ಟ್‌ಗೆ ಹಾಜರುಪಡಿಸಿದ ಬಳಿಕ ನಟ ದರ್ಶನ್ ಜಾಮೀನು ಕೋರಿ ಅರ್ಜಿ ಸಲ್ಲಿಸಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಸದ್ಯ ಬಳ್ಳಾರಿ ಜೈಲಿನಲ್ಲಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಫಿಟ್ನೆಸ್ ಮೇಂಟೇನ್ ಮಾಡಲು ಒದ್ದಾಟ ನಡೆಸುತ್ತಿದ್ದಾರೆ. ಜೈಲಿನಲ್ಲಿ ಅನ್ನ ಬಿಟ್ಟು ಚಪಾತಿ, ಮುದ್ದೆ ಊಟಕ್ಕೆ ಮೊರೆ ಹೋಗಿರುವ ಜೊತೆಗೆ ವಿಟಮಿನ್ ಟ್ಯಾಬ್ಲೆಟ್‌ಗಳನ್ನು ಸೇವಿಸುತ್ತಿದ್ದಾರೆ.
ಈಗಾಗಲೇ ದರ್ಶನ್ ಪತ್ನಿ ವಿಜಯಲಕ್ಷ್ಮಿ ಹಾಗೂ ಸಹೋದರ ದಿನಕರ್ ಜೊತೆ ಜಾಮೀನು ಅರ್ಜಿ ಸಲ್ಲಿಕೆ ಮಾಡುವ ಕುರಿತು ದರ್ಶನ್ ಚರ್ಚೆ ಮಾಡಿದ್ದಾರೆ. ಆದ್ದರಿಂದ ಇಂದು ಅಥವಾ ನಾಳೆ ಕೋರ್ಟ್‌ಗೆ ಜಾಮೀನು ಕೋರಿ ಅರ್ಜಿ ಸಲ್ಲಿಕೆ ಮಾಡಲಿದ್ದಾರೆ ಎಂದು ತಿಳಿದುಬಂದಿದೆ.