ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎ2 ಆರೋಪಿಯಾಗಿರುವ ದರ್ಶನ್ ಜಾಮೀನು ಅರ್ಜಿಯನ್ನು ಅಕ್ಟೋಬರ್.22ರಂದು ವಿಚಾರಣೆ ನಡೆಸಲು ಹೈಕೋರ್ಟ್ ಸಮ್ಮತಿ ನೀಡಿದೆ.
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎ2 ಆರೋಪಿ ದರ್ಶನ್ ಜಾಮೀನು ಅರ್ಜಿಯನ್ನು 57ನೇ ಸಿಸಿಎಚ್ ನ್ಯಾಯಾಲಯ ವಜಾಗೊಳಿಸಿತ್ತು.
ಆದರೆ, ಆರೋಪಿ ದರ್ಶನ್ ಬೆನ್ನನೋವಿನಿಂದ ಬಳಲುತ್ತಿರುವ ಹಿನ್ನೆಲೆಯಲ್ಲಿ ದರ್ಶನ್ ಪರ ವಕೀಲ ಸುನೀಲ್ ಕುಮಾರ್ ಅವರು, ಜಾಮೀನು ಕೋರಿ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು.
ಹೈಕೋರ್ಟ್ ಈ ಅರ್ಜಿಯನ್ನು ಸ್ವೀಕರಿಸಿದ್ದು, ಅಕ್ಟೋಬರ್.22ರಂದು ನ್ಯಾಯಮೂರ್ತಿ ವಿಶ್ವಜಿತ್ ಏಕಸದಸ್ಯ ಪೀಠದಲ್ಲಿ ವಿಚಾರಣೆ ನಡೆಯಲಿದೆ ಎಂದು ಉನ್ನತ ಮೂಲಗಳಿಂದ ತಿಳಿದುಬಂದಿದೆ.