ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎ.1 ಆರೋಪಿ ಪವಿತ್ರಾ ಗೌಡ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಕೋರ್ಟ್ ಆಗಸ್ಟ್.22ಕ್ಕೆ ಮುಂದೂಡಿಕೆ ಮಾಡಿದೆ.
ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್‌ಗೆ ಎ1 ಆರೋಪಿ ಪವಿತ್ರಾಗೌಡ ಪರ ವಕೀಲ ಟಾಮಿ ಸೆಬಾಸ್ಟಿಯನ್ ಅರ್ಜಿ ಸಲ್ಲಿಕೆ ಮಾಡಿದ್ದರು. ಜಾಮೀನು ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಕೋರ್ಟ್ ಪೊಲೀಸರಿಗೆ ನೋಟಿಸ್ ನೀಡಿ ವಿಚಾರಣೆಯನ್ನು ಆಗಸ್ಟ್.22ಕ್ಕೆ ಮುಂದೂಡಿಕೆ ಮಾಡಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಹಾಗೂ ಅವರ ಆಪ್ತೆ ಪವಿತ್ರಾಗೌಡ ಸೇರಿದಂತೆ ಹಲವರನ್ನು ಪೊಲೀಸರು ಬಂಧಿಸಿದ್ದಾರೆ. ಈಗ ನಟ ದರ್ಶನ್ ಸೇರಿದಂತೆ ಎಲ್ಲಾ ಆರೋಪಿಗಳು ನ್ಯಾಯಾಂಗ ಬಂಧನದಲ್ಲಿದ್ದಾರೆ.
ಇನ್ನು ಪರಪ್ಪನ ಅಗ್ರಹಾರದಲ್ಲಿರುವ ನಟ ದರ್ಶನ್‌ರನ್ನು ನೋಡಲು ವಾರಕ್ಕೊಮ್ಮೆ ಪತ್ನಿ ವಿಜಯಲಕ್ಷ್ಮೀ ಜೈಲಿಗೆ ಆಗಮಿಸುತ್ತಿದ್ದಾರೆ. ಈ ವೇಳೆ ಮುಂದಿನ ಕಾನೂನು ಹೋರಾಟದ ಬಗ್ಗೆಯೂ ದರ್ಶನ್ ಜೊತೆ ಚರ್ಚೆ ನಡೆಸುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಈ ಎಲ್ಲಾ ಬೆಳವಣಿಗೆಗಳ ಮಧ್ಯೆ ನಟ ದರ್ಶನ್ ಸೇರಿದಂತೆ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಿಗೆ ಯಾವಾಗ ಜಾಮೀನು ಮಂಜೂರು ಆಗುತ್ತೆ ಎಂಬುದೇ ಈಗ ಭಾರೀ ಕುತೂಹಲಕ್ಕೆ ಕಾರಣವಾಗಿದೆ.