Mysore
36
scattered clouds

Social Media

ಶುಕ್ರವಾರ, 17 ಏಪ್ರಿಲ 2026
Light
Dark

ರೇಣುಕಾಸ್ವಾಮಿ ಕೊಲೆ ಪ್ರಕರಣ: ಇಂದು ದರ್ಶನ್‌ ಜಾಮೀನು ಅರ್ಜಿ ವಿಚಾರಣೆ

ಬಳ್ಳಾರಿ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ದರ್ಶನ್‌ ಅವರ ಜಾಮೀನು ಅರ್ಜಿ ವಿಚಾರಣೆ ಇಂದು ನಡೆಯಲಿದೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದಡಿ ಬಳ್ಳಾರಿ ಜೈಲಿನಲ್ಲಿರುವ ನಟ ದರ್ಶನ್‌ಗೆ ಇಂದು ಮಹತ್ವದ ದಿನವಾಗಿದ್ದು, ಇಂದು ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ.

ಶನಿವಾರ ದರ್ಶನ್‌ ಪರ ವಕೀಲರು, ತುರ್ತಾಗಿ ವಿಚಾರಣೆ ಮಾಡುವಂತೆ ಮನವಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಅರ್ಜಿ ವಿಚಾರಣೆಯನ್ನು ಇಂದಿಗೆ ಮುಂದೂಡಿಕೆ ಮಾಡಲಾಗಿತ್ತು.

ಹೀಗಾಗಿ ಇಂದು ಜಾಮೀನು ಅರ್ಜಿ ವಿಚಾರಣೆ ನಡೆಯಲಿದ್ದು, ದರ್ಶನ್‌ಗೆ ಜಾಮೀನು ಸಿಗುತ್ತಾ ಅಥವಾ ಇಲ್ಲವೇ ಎಂಬ ಆತಂಕ ಶುರುವಾಗಿದೆ.

ಜಾಮೀನು ಅರ್ಜಿ ವಿಚಾರವಾಗಿ ಜೈಲಿನಲ್ಲಿ ನಟ ದರ್ಶನ್‌ ಸಿಬ್ಬಂದಿಯಿಂದ ಪದೇ ಪದೇ ಮಾಹಿತಿ ಪಡೆಯುತ್ತಿದ್ದಾರೆ ಎನ್ನಲಾಗಿದೆ. ಒಂದು ವೇಳೆ ಜಾಮೀನು ಸಿಗದಿದ್ದರೆ ಮುಂದೆ ಜೈಲು ಬದಲಾವಣೆ ಬಗ್ಗೆಯೂ ಚರ್ಚೆ ನಡೆಯುವ ಸಾಧ್ಯತೆಯಿದೆ.

ಜೈಲಿನಲ್ಲಿ ಬೆನ್ನು ನೋವಿನಿಂದ ಬಳಲುತ್ತಿರುವ ನಟ ದರ್ಶನ್‌, ಪ್ಲಾಸ್ಟಿಕ್‌ ಚೇರ್‌, ದಿಂಬು, ಬೆಡ್‌ಗೆ ಬೇಡಿಕೆ ಇಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು ಜಾಮೀನು ಭವಿಷ್ಯ ಏನಾಗಲಿದೆ ಎಂದು ಅಭಿಮಾನಿಗಳಿಗೆ ಆತಂಕ ಶುರುವಾಗಿದೆ.

Tags:
error: Content is protected !!