ಬಳ್ಳಾರಿ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ದರ್ಶನ್ ಅವರ ಜಾಮೀನು ಅರ್ಜಿ ವಿಚಾರಣೆ ಇಂದು ನಡೆಯಲಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದಡಿ ಬಳ್ಳಾರಿ ಜೈಲಿನಲ್ಲಿರುವ ನಟ ದರ್ಶನ್‌ಗೆ ಇಂದು ಮಹತ್ವದ ದಿನವಾಗಿದ್ದು, ಇಂದು ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ.
ಶನಿವಾರ ದರ್ಶನ್ ಪರ ವಕೀಲರು, ತುರ್ತಾಗಿ ವಿಚಾರಣೆ ಮಾಡುವಂತೆ ಮನವಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಅರ್ಜಿ ವಿಚಾರಣೆಯನ್ನು ಇಂದಿಗೆ ಮುಂದೂಡಿಕೆ ಮಾಡಲಾಗಿತ್ತು.
ಹೀಗಾಗಿ ಇಂದು ಜಾಮೀನು ಅರ್ಜಿ ವಿಚಾರಣೆ ನಡೆಯಲಿದ್ದು, ದರ್ಶನ್‌ಗೆ ಜಾಮೀನು ಸಿಗುತ್ತಾ ಅಥವಾ ಇಲ್ಲವೇ ಎಂಬ ಆತಂಕ ಶುರುವಾಗಿದೆ.
ಜಾಮೀನು ಅರ್ಜಿ ವಿಚಾರವಾಗಿ ಜೈಲಿನಲ್ಲಿ ನಟ ದರ್ಶನ್ ಸಿಬ್ಬಂದಿಯಿಂದ ಪದೇ ಪದೇ ಮಾಹಿತಿ ಪಡೆಯುತ್ತಿದ್ದಾರೆ ಎನ್ನಲಾಗಿದೆ. ಒಂದು ವೇಳೆ ಜಾಮೀನು ಸಿಗದಿದ್ದರೆ ಮುಂದೆ ಜೈಲು ಬದಲಾವಣೆ ಬಗ್ಗೆಯೂ ಚರ್ಚೆ ನಡೆಯುವ ಸಾಧ್ಯತೆಯಿದೆ.
ಜೈಲಿನಲ್ಲಿ ಬೆನ್ನು ನೋವಿನಿಂದ ಬಳಲುತ್ತಿರುವ ನಟ ದರ್ಶನ್, ಪ್ಲಾಸ್ಟಿಕ್ ಚೇರ್, ದಿಂಬು, ಬೆಡ್‌ಗೆ ಬೇಡಿಕೆ ಇಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು ಜಾಮೀನು ಭವಿಷ್ಯ ಏನಾಗಲಿದೆ ಎಂದು ಅಭಿಮಾನಿಗಳಿಗೆ ಆತಂಕ ಶುರುವಾಗಿದೆ.
ಹೇಮಂತ್‌ಕುಮಾರ್ ದಾಖಲೆ ಸೃಷ್ಟಿ ; ಹಲವು ಅಚ್ಚರಿಗಳ ತಾಣವಾದ ಮೂರು ದಿನಗಳ ಮೇಳ ಮಂಡ್ಯ: ಮೂರು ದಿನಗಳ ಕಾಲ ವಿ.ಸಿ.ಫಾರಂನಲ್ಲಿ…
ನಂಜನಗೂಡು: 5 ಸಾವಿರ ರೂ ಸಾಲ ಪಾವತಿಗಾಗಿ ಮಾನಸಿಕವಾಗಿ ಕಿರುಕುಳ ನೀಡಿದ ವ್ಯಕ್ತಿ ಮನೆ ಮುಂದೆ ಸೆಲ್ಫಿ ವಿಡಿಯೋ ಮಾಡಿ…
ಮಂಡ್ಯ: ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು ಪಲ್ಟಿಯಾಗಿ ಬಿದ್ದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಧಾರುಣ ಘಟನೆ ಮಂಡ್ಯದಲ್ಲಿ ನಡೆದಿದೆ.…
ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಬೆಳಗಿನ ಜಾವ ದಟ್ಟವಾದ ಮಂಜು ಕವಿದ ವಾತಾವರಣ ಇರಲಿದೆ.…
ಕೊಳ್ಳೇಗಾಲ: ಮೇಯಲು ಬಿಟ್ಟಿದ್ದ ಮೇಕೆಗಳು ಯೂರಿಯಾ ಗೊಬ್ಬರ ತಿಂದು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಜಾಗೇರಿ ಹಳೆ…